ಹಳ್ಳಿ ಫೈಟ್‍ಗೆ ಮುಹೂರ್ತ ಫಿಕ್ಸ್: ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ನಿಗದಿ

ಬೆಂಗಳೂರು, ನ. 30: ರಾಜ್ಯದಲ್ಲಿ ಗ್ರಾಮ ಪಂಚಾಯಿತು ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಎರಡು ಹಂತಗಳಲ್ಲಿ ಮತದಾನ ನಡೆಸುವಂತೆ ಚುನಾವಣಾ ಆಯೋಗ ತೀರ್ಮಾನಿಸಿದೆ.
ಮೊದಲ ಹಂತಕ್ಕೆ ಡಿಸೆಂಬರ್ 22 ಹಾಗೂ ಎರಡನೇ ಹಂತದಲ್ಲಿ ಡಿಸೆಂಬರ್ 27ಕ್ಕೆ ಮತದಾನ ನಡೆಯಲಿದೆ. ಡಿ.30 ಮತ ಎಣಿಕೆ ನಡೆಯಲಿದೆ. ಬೆಳಗ್ಗೆ 7ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ರಾಜ್ಯದ 5,762 ಗ್ರಾಮ ಪಂಚಾಯಿತಿಗಳ 35, 884 ಕ್ಷೇತ್ರಗಳ 92,121 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

Exit mobile version