Mandya: ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ (Varthur Santhosh) ವಿರುದ್ಧ ಹಳ್ಳಿಕಾರ್ ಸಂರಕ್ಷಕರು ಸಿಡಿದೆದ್ದಿದ್ದು, ಹಳ್ಳಿಕಾರ್ ಒಡೆಯ ಎಂದು ಕರೆಸಿಕೊಳ್ತಿರೋದು, ಬಿಂಬಿಸಿಕೊಳ್ತಿರುವುದು ಸರಿಯಲ್ಲ. ಇದು ಹಳ್ಳಿಕಾರ್ ಜನಾಂಗಕ್ಕೆ ಅಪಮಾನವಾಗಿದೆ ಎಂದು ವರ್ತೂರ್ ಸಂತೋಷ್ ವಿರುದ್ಧ ಕಾನೂನು ಹೋರಾಟ ನಡೆಸಲು ಮುಂದಾಗಿದ್ದಾರೆ.
ಈ ಹಿಂದೆ ವರ್ತೂರು ಸಂತೋಷ್ ಬೆಂಬಲಿಗರಿಗೆ ತಿಳುವಳಿಕೆ ಹೇಳಲು ಹಳ್ಳಿಕಾರ್ ತಳಿ ಸಂರಕ್ಷಕರು ಚರ್ಚಾಗೋಷ್ಠಿ ಏರ್ಪಡಿಸಿದ್ದರು. ಕನ್ನಡದ ಬಿಗ್ ಬಾಸ್ (Big Boss) ಮನೆಯಲ್ಲಿದ್ದಾಗ ಹಳ್ಳಿಕಾರ್ ಒಡೆಯ ಬಿರುದು ವಿವಾದ ಸೃಷ್ಟಿಯಾಗಿತ್ತು. ಅಂದು ವರ್ತೂರು ಸಂತೋಷ್ ಬೆಂಬಲಿಗರು ಹಾಗೂ ತಲಾತಲಾಂತರಿಂದ ಹಳ್ಳಿಕಾರ್ ತಳಿ ಸಂರಕ್ಷಕರ ನಡುವೆ ಜಟಾಪಟಿ ನಡೆದಿತ್ತು.
ಸಂತೋಷ್ ಬೆಂಬಲಿಗರನ್ನ ಕಾರ್ಯಕ್ರಮದ ಅರ್ಧದಲ್ಲೆ ಪೊಲೀಸರು ಕಳುಹಿಸಿದ್ದರು. ಇಷ್ಟೆಲ್ಲಾ ಆದ ಬಳಿಕ ಬಿಗ್ ಬಾಸ್ ಮನೆಯಿಂದ ಹೊರ ಬರ್ತಿದ್ದಂತೆ ವಿರೋಧಿಗಳಿಗೆ ವರ್ತೂರ್ ಸಂತೋಷ್ ಟಾಂಗ್ ಕೊಟ್ಟಿದ್ದರು. ಏಕವಚನದಲ್ಲಿ ಹಿರಿಯ ಹಳ್ಳಿಕಾರ್ ಸಂರಕ್ಷಕರ (Hallikar Saviors) ವಿರುದ್ದ ಹರಿಹಾಯ್ದಿದ್ದರು. ಸದ್ಯ ಈಗ ವರ್ತೂರ್ ಮಾತಿಗೆ ಮತ್ತೆ ಸಿಡಿದೆದ್ದ ಹಳ್ಳಿಕಾರ್ ಸಂರಕ್ಷಕರು ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ.
ಗೂಗಲ್ ನಲ್ಲಿಯೂ ಛೇರ್ ಮೇನ್ ಆಫ್ ಆಲ್ ಇಂಡಿಯಾ (Chairman of All India) ಹಳ್ಳಿಕಾರ್ ಕನ್ಸರ್ವೇಶನ್ ಎಂದು ರಾಂಗ್ ಮೆಸೇಜ್ ನೀಡಿದ್ದಾರೆ. ಇದರಿಂದ ಮುಂದಿನ ಪೀಳಿಗೆಗೆ ತಪ್ಪು ಸಂದೇಶ ಹೋಗುತ್ತೆ. ವರ್ತೂರ್ ಸಂತೋಷನಿಂದಲೇ ಹಳ್ಳಿಕಾರ್ ತಳಿ ಹುಟ್ಟಿತು ಎಂದು ಬಿಂಬಿತವಾಗಬಹುದು. ಹಳ್ಳಿಕಾರ್ ಒಡೆಯ ಎಂದು ಕರೆಸಿಕೊಳ್ತಿರೋದು, ಬಿಂಬಿಸಿಕೊಳ್ತಿರುವುದು ಸರಿಯಲ್ಲ. ಇದು ಹಳ್ಳಿಕಾರ್ ಜನಾಂಗಕ್ಕೆ ಅಪಮಾನವಾಗಿದೆ.
ತಲಾತಲಾಂತರದಿಂದ ಹಳ್ಳಿಕಾರ್ ಸಂರಕ್ಷಣೆ ಮಾಡ್ತಿರುವ ರೈತರ ಭಾವನೆಗೂ ಧಕ್ಕೆ, ಅವಮಾನ ಆಗಿದೆ. ಆದ್ದರಿಂದ ಕಾನೂನಾತ್ಮಕವಾಗಿ ಹೋರಾಟ ಮಾಡ್ತೇನೆ. ಎಲ್ಲಾ ದಾಖಲಾತಿಗಳನ್ನ ಸಂಗ್ರಹಿಸುತ್ತಿದ್ದು ಶೀಘ್ರ ಕಾನೂನು ಸಮರ ಸಾರುತ್ತೇವೆ. ಗೂಗಲ್ ವಿರುದ್ದ ಕಾನೂನು ಹೋರಾಟ ಮಾಡ್ತೇವೆ ಎಂದು ಹಳ್ಳಿಕಾರ್ ಸಂರಕ್ಷಕ ರವಿ ಪಟೇಲ್ (Ravi Patel) ಎಚ್ಚರಿಕೆ ನೀಡಿದ್ದಾರೆ.