ಹಂಸಲೇಖ ಅವರಿಗೆ 2ನೇ ನೋಟಿಸ್‌ ನೀಡಿದ ಪೊಲೀಸರು

ಬೆಂಗಳೂರು ನ 20 : ಪೇಜಾವರ ಶ್ರೀಗಳ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪ ಪ್ರಕರಣ ಸಂಬಂಧ ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ಪೊಲೀಸರು ಎರಡನೇ ನೋಟಿಸ್​ ನೀಡಿದ್ದಾರೆ. 

ಹಂಸಲೇಖ ಅವರು ಪೇಜಾವರ ಶ್ರೀಗಳ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ವಿಪ್ರ ಯುವ ವೇದಿಕೆ ಬಸವನಗುಡಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಹಂಸಲೇಖ ಅವರಿಗೆ ನೋಟಿಸ್​ ನೀಡಿದ್ದರು. ಆದರೆ ಅವರು ಪೊಲೀಸರ ಸಂಪರ್ಕಕ್ಕೆ ಸಿಗದೇ, ವಿಚಾರಣೆಗೆ ಗೈರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಎರಡನೇ ನೋಟಿಸ್ ನೀಡಿದ್ದಾರೆ.

ವಿವಾದ ಹಿನ್ನಲೆ :  ಮೈಸೂರಿನ ಮಾನಸ ಗಂಗೋತ್ರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಹಂಸಲೇಖ ಅವರು, ಪೇಜಾವರ ಶ್ರೀಗಳು ದಲಿತರ‌ ಮನೆಗೆ ಹೋಗಿದ್ರು ಅಂತ ಕೇಳಿದ್ದೆ. ದಲಿತರ ಮನೆಗೆ ಬಂದು ಅವರು ಕುಳಿತುಕೊಳ್ಳಬಹುದು. ಆದ್ರೆ, ಅವರಿಗೆ ಕೋಳಿ ಕೊಟ್ಟರೆ ತಿನ್ನೋಕೆ ಆಗುತ್ತಾ..? ಕೋಳಿ ಬೇಡ ಕುರಿಯ ರಕ್ತವನ್ನು ಫ್ರೈ ಮಾಡಿ ಕೊಟ್ರೆ ತಿನ್ನೋಕೆ‌ ಆಗುತ್ತಾ..? ಲಿವರ್ ಕೊಟ್ರೆ ತಿನ್ನೋಕೆ ಆಗುತ್ತಾ..? ಎಂದು ಪ್ರಶ್ನಿಸಿದ್ದರು.

ಹಂಸಲೇಖ ಅವರ ಹೇಳಿಕೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಅತೀವ ಪರ-ವಿರೋಧಗಳ ಚರ್ಚೆಯ ನಂತರ ಹಂಸಲೇಖ ಅವರು ಸಾಮಾಜಿಕ ಜಾಲತಾಣದಲ್ಲಿ ಕ್ಷಮೆ ಕೇಳಿದ್ದರು.

Latest News

ಪ್ರಮುಖ ಸುದ್ದಿ

ತಾಜುದ್ದೀನ್ಜುನೈದೀ ಮತ್ತು  ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಗಣ್ಯರ ಸಂತಾಪ

ಪ್ರಖ್ಯಾತ ಗಾಯಕರು, ತಮ್ಮ ಸುಸ್ವರದ ಮೂಲಕ ಕವಿ ಗೀತೆಗಳಿಗೆ ಮೆರುಗು ತಂದುಕೊಟ್ಟಿದ್ದ ಶ್ರೀ ಶಿವಮೊಗ್ಗ ಸುಬ್ಬಣ್ಣ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಗಿದೆ.

ದೇಶ-ವಿದೇಶ

ಒಡಿಶಾದಲ್ಲಿ ಆಘಾತಕಾರಿ ಘಟನೆ ; ಹಾಡಹಗಲೇ ವೃದ್ಧನನ್ನು ಕಂಬಕ್ಕೆ ಕಟ್ಟಿ, ಥಳಿಸಿ ಕೊಂದ ಕುಟುಂಬಸ್ಥರು!

ಕೊರಾಪುಟ್ ಜಿಲ್ಲೆಯ ಬುಡಕಟ್ಟು ಪ್ರದೇಶದಲ್ಲಿ ಹಾಡಹಗಲೇ ವೃದ್ಧನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ತಮ್ಮ ಕುಟುಂಬಸ್ಥರೇ ಥಳಿಸಿ ಕೊಂದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ!

ಮಾಹಿತಿ

ಕಿಡ್ನಿ ಸ್ಟೋನ್‌ ಸಮಸ್ಯೆಗೆ ಇಲ್ಲಿದೆ ನೈಸರ್ಗಿಕ ಪರಿಹಾರ ; ಈ ಸರಳ ಪರಿಹಾರ ಪಾಲಿಸಿ

ಕೆಲವು ಮನೆಮದ್ದುಗಳು(Home Remedies) ಆರಂಭಿಕ ಹಂತದ ಕಿಡ್ನಿಸ್ಟೋನ್ ಸಮಸ್ಯೆಗೆ ಪರಿಹಾರ ನೀಡುತ್ತವೆ. ಅಂತಹ ಮನೆಮದ್ದುಗಳ ವಿವರ ಇಲ್ಲಿದೆ ನೋಡಿ.