Visit Channel

ನಾನು ಆರೋಗ್ಯವಾಗಿದ್ದೀನಿ ಅಭಿಮಾನಿಗಳು ಅವಘಡಕ್ಕೆ ಅವಕಾಶ ಕೊಡಬೇಡಿ – ಹಂಸಲೇಖ

ಬೆಂಗಳೂರು ನ 24 : ಪೇಜಾವರ ಶ್ರೀಗಳ ವಿರುದ್ಧ ಮಾತನಾಡಿದ್ದ ಸಂಗೀತ ನಿರ್ದೇಶಕ ಹಂಸಲೇಖ ಹೇಳೆಕೆ ಸಾಕಷ್ಟು ವಿವಾದ ಹುಟ್ಟುಹಾಕಿತ್ತು. ಈ ಬಗ್ಗೆ ಹಂಸಲೇಖ ಅವರು ಕ್ಷಮೆ ಕೇಳಿದ್ದರೂ ಕೂಡ ಇನ್ನೂ ಈ ವಿಷಯ ಚರ್ಚೆಯಾಗುತ್ತಲೇ ಇದೆ. ಈ ನಡುವೆ ಹಂಸಲೇಖ ಅವರ ಆರೋಗ್ಯ ತಪ್ಪಿದೆ ಎನ್ನುವ ಬಗ್ಗೆ ಸುದ್ದಿಗಳು ಹಬ್ಬುತ್ತಿವೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಅವರೇ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿರುವ ಅವರು, ‘ನಮಸ್ಕಾರ, ನಾನು ಆರೋಗ್ಯವಾಗಿದ್ದೀನಿ. ನನಗೆ ಆರೋಗ್ಯ ತಪ್ಪಿದೆ ಎಂದು ಇಡೀ ಕರ್ನಾಟಕದಿಂದ ಕರೆಗಳು ಬಂದಿದೆ. ಎಲ್ಲರೂ ನನ್ನ ಆರೋಗ್ಯ ವಿಚಾರಿಸುತ್ತಿದ್ದಾರೆ. ನನಗೆ ಗೊತ್ತಾಗಿದೆ ನಿಮ್ಮ ಪ್ರೀತಿ ಎಷ್ಟು ವಿಶಾಲವಾಗಿದೆ ಎಂದು. ಈ ಪ್ರೀತಿ ಪಡೆಯೋಕೆ ನಾನು ತುಂಬಾನೆ ಸವೆದಿದ್ದೀನಿ, ಸಹಿಸಿದ್ದೀನಿ. ಅದರ ಸುಖ ಇವತ್ತು ಅನುಭವಿಸುತ್ತಿದ್ದೀನಿ. ಎಂದರು

ನಾನು ಕೇಳದೆ ನನ್ನ ಮನೆಗೆ ಸರ್ಕಾರ ಭದ್ರತೆ ಕೊಟ್ಟಿದೆ. ನಾನು ಕೇಳದೆ ಇಡೀ ಕರ್ನಾಟಕದಲ್ಲಿ ಲಕ್ಷಾಂತರ ಜನ ಅಭಿಮಾನಿಗಳು ನನ್ನ ಪರ ಮಾತನಾಡುತ್ತಿದ್ದಾರೆ. ನನ್ನ ಉದ್ಯಮದ ಆತ್ಮೀಯರು ನನಗೆ ಧೈರ್ಯ ತೋರಿದ್ದಾರೆ. ಈಗ ಇಡೀ ಕರ್ನಾಟಕವೇ ನನ್ನನ್ನು ಪ್ರೀತಿಯಲ್ಲಿ ಮುಳುಗಿಸಿ ಅಭಿಮಾನದಲ್ಲಿ ತೇಲಿಸುತ್ತಿದ್ದಾರೆ.

ಅಭಿಮಾನ ಆವೇಶವಾಗಬಾರದು. ಆವೇಶ ಅವಘಡಗಳಿಗೆ ಕಾರಣವಾಗಬಾರದು. ಅಭಿಮಾನ ಹಾಡಿನಂತೆ ಇರಬೇಕು, ಹಾಡು ಕೇಳಿಸುತ್ತದೆ. ಮುಟ್ಟಿಸುತ್ತದೆ. ನಿಮ್ಮ ಪ್ರೀತಿ ನನಗೆ ತಲುಪಿದೆ. ನಿಮ್ಮ ಪ್ರೀತಿಗೆ ನನ್ನ ಹೃದಯ ತುಂಬಿದ ನಮಸ್ಕಾರಗಳು ಎಂದು ಬರೆದುಕೊಂಡಿದ್ದಾರೆ

Latest News

Dakshina Kannada
ರಾಜ್ಯ

ಎಚ್ಚರ! ಅಪಾಯದಲ್ಲಿದೆ ದ.ಕ ಜಿಲ್ಲೆಯ ಬಂಟ್ವಾಳ ಕಿಂಡಿ ಅಣೆಕಟ್ಟು ಸೇತುವೆ

ಕಿಂಡಿ ಅಣೆಕಟ್ಟು ಹಾಗೂ ಸೇತುವೆಯ ಕಾಮಗಾರಿಯ ಕರ್ಮಕಾಂಡ. ಕಾಮಗಾರಿ ಪೂರ್ಣ ಆಗುವ ಮೊದಲೇ ತಡೆಗೋಡೆಯ ಕಾಮಗಾರಿಯ ಅಡಿಪಾಯನೇ ಕಿತ್ತು ಹೊರಗೆ ಬಂದಿದೆ!

BJP
ರಾಜಕೀಯ

ಬಿಜೆಪಿ ನಾಯಕರು ನಮಗೆ ದೇಶಪ್ರೇಮದ ಪಾಠ ಮಾಡುವುದು ಆತ್ಮವಂಚನೆಯಾಗುತ್ತದೆ : ಸಿದ್ದರಾಮಯ್ಯ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರು ಕರಾವಳಿಯಲ್ಲಿ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು(Praveen Nettaru) ಮನೆಗೆ ಮಾತ್ರ ಹೋಗಿ ಪರಿಹಾರ ಕೊಟ್ಟಿದ್ದಾರೆ.

Malyalam
ಮನರಂಜನೆ

ನಟನೆಯಲ್ಲಿ ಸೋಲನ್ನು ಕಂಡರೂ ಕುಗ್ಗದೆ, ಇಂದು ಭಾರತ ಚಿತ್ರರಂಗವೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ ನಟ ಫಹಾದ್ ಫಾಸಿಲ್!

ಫಹಾದ್ ಸಿನಿಮಾಗಳು ತಕ್ಕಮಟ್ಟಿಗೆ ಹಿಟ್ ಎನಿಸಿದರೂ, ಇವರ ಈಗಿನ ಸಿನಿಮಾ ಪ್ರಸಿದ್ಧಿಗೆ ಹೋಲಿಸಿದರೆ ಹಿಂದಿನ ಸಿನಿಮಾಗಳು ಏನೇನೂ ಆಗಿರಲಿಲ್ಲ.

Kabbadi Player
ದೇಶ-ವಿದೇಶ

ಪಲ್ಟಿ ಹೊಡೆಯುವ ಯತ್ನದಲ್ಲಿ ಕುಸಿದು ಬಿದ್ದು ಕಬಡ್ಡಿ ಆಟಗಾರ ಸಾವು! ; ವೀಡಿಯೋ ವೈರಲ್

ಕಬಡ್ಡಿ(Kabbadi) ಆಟಗಾರರೊಬ್ಬ ಸೋಮರ್ ಸಾಲ್ಟ್ ಹೊಡೆಯುತ್ತಿದ್ದಾಗ ಕುಸಿದು ಬಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ(Hospital) ಮೃತಪಟ್ಟಿದ್ದಾರೆ.