Visit Channel

ಹಂಸಲೇಖ ಅವರ ವಿವಾದಾತ್ಮಕ ಹೇಳಿಕೆಗೆ ವ್ಯಾಪಕ ಖಂಡನೆ

ಬೆಂಗಳೂರು ನ 15 : ಸಂಗೀತ ನಿರ್ದೇಶಕ ಹಂಸಲೇಖ ಅವರು ಈಚೆಗೆ ಮೈಸೂರಿನಲ್ಲಿ ನಡೆದ ಪ್ರಶಸ್ತಿ ಪುರಸ್ಕಾರ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಹೋಗಿದ್ದರು. ಆ ವೇಳೆ ಅವರು ದಲಿತರು, ಅಸ್ಪೃಶ್ಯತೆ ಕುರಿತಂತೆ ಮಾತಾನಾಡಿದ್ದರು, ಜೊತೆಗೆ ಪೇಜಾವರ ಶ್ರೀಗಳ ಹೆಸರನ್ನು ಪ್ರಸ್ತಾಪ ಮಾಡಿದ್ದರು. ಆ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.


‘ಪೇಜಾವರ ಸ್ವಾಮಿಗಳು ದಲಿತರ ಮನೆಗೆ ವಾಸ್ತವ್ಯಕ್ಕೆ ಹೋಗಿದ್ದಾರೆ ಅಂತ ಸ್ಟೇಟ್‌ಮೆಂಟ್ ಬಂದಿದೆ. ಪೇಜಾವರ ಸ್ವಾಮಿಗಳು ದಲಿತರ ಮನೆಗೆ ಹೋಗಿ ಅಲ್ಲಿ ಕುಳಿತು ಕೊಳ್ಳಬಹುದಷ್ಟೇ, ಅವರು ಕೋಳಿ ಕೊಟ್ಟರೆ ತಿನ್ನೋಕೆ ಆಗುತ್ತದೆಯೇ..? ಕೋಳಿ ಬೇಡ, ಕುರಿ ರಕ್ತದ ಫ್ರೈ ಮಾಡಿಕೊಟ್ಟರೆ ತಿಂತಾರಾ..? ಲಿವರ್ ಫ್ರೈ ತಿಂತಾರಾ, ಆಗತ್ತಾ..? ಅಂದರೆ, ದಲಿತರ ಮನೆಗೆ ಬಲಿತರು ಹೋಗೋದು ಏನ್ ದೊಡ್ಡ ವಿಷ್ಯಾ ಅಂತ ನಂಗ್ ಅನ್ನಿಸ್ತು ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯ ಅಂತ ಶುರು ಮಾಡಿದ್ರು. ಈಗ ಎಲ್ಲರೂ ಗ್ರಾಮ ವಾಸ್ತವ್ಯ ಶುರು ಮಾಡಿದ್ದಾರೆ.’ ಎಂದು ಹೇಳಿದ್ದರು.

‘ಬಿಳಿಗಿರಿ ರಂಗಯ್ಯ ಸೋಲಿಗರ ಮನೆಯ ಹೆಣ್ಣಿನೊಂದಿಗೆ ರಮಿಸಿದರೆ, ಅದರಲ್ಲಿ ಏನ್ ದೊಡ್ಡ ವಿಷ್ಯ ಇದೆ? ಅದೇ ಸೋಲಿಗರ ಹೆಣ್ಣು ಮಗಳನ್ನು ಕರೆದುಕೊಂಡು ಹೋಗಿ ತನ್ನ ದೇವಾಲಯದಲ್ಲಿ ಇಟ್ಟು ಗೌರವಿಸಿದ್ದರೆ, ಅದು ಬಿಳಿಗಿರಿ ರಂಗಯ್ಯನ ತಾಕತ್ತು. ಸೂರ್ಯ ಉದಯಿಸುವುದಕ್ಕಿಂತ ಮುಂಚೆ ಸೋಲಿಗರ ಮನೆಗೆ ಬಂದು ಆ ಹೆಣ್ಣು ಮಗಳೊಂದಿಗೆ ಬಿಳಿಗಿರಿ ರಂಗಯ್ಯ ಸಂಸಾರ ನಡೆಸಿ ಬೆಳಕು ಹರಿಯುವುದರೊಳಗೆ ಹೋಗಿ ಕಲ್ಲಾಗುತ್ತಾನಂತೆ! ಅದೇನು ದೊಡ್ಡ ವಿಷಯ, ಅದೊಂದು ನಾಟಕ, ಬೂಟಾಟಿಕೆ. ದಲಿತರ ಮನೆಗೆ ಬಲಿತರು ಹೋಗುವುದು ಅದೇನು ದೊಡ್ಡ ವಿಷಯವೇ..? ದಲಿತರನ್ನು ಬಲಿತರು ತಮ್ಮ ಮನೆಗಳಿಗೆ ಕರೆದುಕೊಂಡು ಹೋಗಬೇಕು. ಅವರ ಮನೆಯಲ್ಲಿ ಊಟ ಹಾಕಬೇಕು, ದಲಿತರ ಮುಟ್ಟಿದ ಲೋಟಗಳನ್ನು ನಾವು ತೊಳೆಯುತ್ತೀವಿ ಎಂದು ಬಲಿತರು ಹೇಳಬೇಕು’ ಎಂದು ಹಂಸಲೇಖ ಹೇಳಿಕೆ ನೀಡಿದ್ದು ಇದೀಗ ಇವರ ಈ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.