ತುಮಕೂರು, ಮಾ. 08: ದೂರು ವಾಪಸ್ ಪಡೆದಿರಬಹುದು, ಆದರೆ ಟಿವಿಯಲ್ಲಿ ಬಂದಿರೋದನ್ನ ವಾಪಸ್ ಪಡೆಯೋಕ್ಕೆ ಆಗುತ್ತಾ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ರಮೇಶ್ ಜಾರಕಿಹೊಳಿ ಪ್ರಕರಣ ಸಂಬಂಧ ಸಲ್ಲಿಸಿದ್ದ ದೂರನ್ನು ದಿನೇಶ್ ಕಲ್ಲಹಳ್ಳಿ ವಾಪಸ್ ಪಡೆದ ಬಗ್ಗೆ ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿವಿಯಲ್ಲಿ ಬಂದಿದ್ದನ್ನೂ ವಾಪಸ್ ತಕಂಡಿದನಾʼ ಎಂದು ತಮ್ಮ ಎಂದಿನ ಶೈಲಿಯಲ್ಲಿ ಉತ್ತರಿಸಿದರು.
ದಿನೇಶ್ ಕಲ್ಲಹಳ್ಳಿ ಅವರು ಕಬ್ಬನ್‌ಪಾರ್ಕ್ ಠಾಣೆಯಲ್ಲಿ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ ಸಂಬಂಧ ದೂರು ಸಲ್ಲಿಸಿದ್ದರು. ಈ ಪ್ರಕರಣದಲ್ಲಿ 5ಕೋಟಿ ರೂ. ಡೀಲ್ ನಡೆದಿದೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಆರೋಪಿಸಿದ ಹಿನ್ನೆಲೆಯಲ್ಲಿ ದೂರು ವಾಪಸ್ ಪಡೆಯುತ್ತಿರುವುದಾಗಿ ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ.