ಹಾಸನ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ : ಇಂದೇ ಅರ್ಜಿ ಸಲ್ಲಿಸಿ

ಹಾಸನ (Hassan) ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಆದೇಶ ಜಾರಿಕಾರ ಹಾಗೂ ಜವಾನ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಹುದ್ದೆಗಳು : ಆದೇಶ ಜಾರಿಕಾರರು, ಜವಾನ

ಕರ್ತವ್ಯ ಸ್ಥಳ : ಹಾಸನ ಜಿಲ್ಲಾ ನ್ಯಾಯಾಲಯ

ಒಟ್ಟು ಹುದ್ದೆಗಳ ಸಂಖ್ಯೆ : 43

ವೇತನ :
ಆದೇಶ ಜಾರಿಕಾರರು : 19950-37900 ರೂ.ಗಳು
ಜವಾನ : 17000-28950 ರೂ.ಗಳು

ಶೈಕ್ಷಣಿಕ ಅರ್ಹತೆ :
ಆದೇಶ ಜಾರಿಕಾರರು – ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಜವಾನ – ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಾನ : ಕನಿಷ್ಠ 18 ವರ್ಷ ಪೂರೈಸಿರಬೇಕು. ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ, ಪ.ಜಾತಿ, ಪ.ಪಂ., ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆ ವಿಧಾನ :
ಲಿಖಿತ ಪರೀಕ್ಷೆ
ಸಂದರ್ಶನ – 10 ಅಂಕಗಳು

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಅರ್ಜಿ ಶುಲ್ಕದ ವಿವರ : ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ, ಮಾಜಿ ಸೈನಿಕ, ಇತರೆ ಅಭ್ಯರ್ಥಿಗಳಿಗೆ ಅಭ್ಯರ್ಥಿಗಳು 200 ರೂಪಾಯಿಗಳು. ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ಇರುತ್ತದೆ.

ಶುಲ್ಕ ಪಾವತಿಸುವ ವಿಧಾನ : ಜಿಲ್ಲಾ ನ್ಯಾಯಾಲಯದ ವೆಬ್ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 04, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 03, 2023
ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಅಕ್ಟೋಬರ್ 05, 2023

Exit mobile version