ಕನ್ನಡ ಸುದ್ದಿ ವಾಹಿನಿ ಪವರ್‌ ಟಿವಿ ಪ್ರಸಾರ ಸ್ಥಗಿತಕ್ಕೆ ಆದೇಶ ಹೊರಡಿಸಿದ ಕರ್ನಾಟಕ ಹೈಕೋರ್ಟ್‌

Bengaluru: ಪರವಾನಗಿ ನವೀಕರಿಸಿದಿರುವ ಆರೋಪ ಹೊಂದಿರುವ ಪವರ್‌ ಟಿವಿ (Power TV) ಕನ್ನಡ ಸುದ್ದಿ ವಾಹಿನಿ ತನ್ನೆಲ್ಲಾ ಕಾರ್ಯಕ್ರಮಗಳ ಪ್ರಸಾರ ತಕ್ಷಣದಿಂದಲೇ ಸ್ಥಗಿತಗೊಳಿಸಬೇಕು ಎಂದು ಕರ್ನಾಟಕ ಹೈಕೋರ್ಟ್‌ ಆದೇಶಿಸಿದೆ.ಜೆಡಿಎಸ್‌ ವಿಧಾನ ಪರಿಷತ್‌ ಮಾಜಿ ಸದಸ್ಯ ಎಚ್‌ ಎಂ ರಮೇಶ್‌ ಗೌಡ, ಅವರ ಪತ್ನಿ ಡಾ.ಎ ರಮ್ಯಾ ರಮೇಶ್‌ ಹಾಗೂ ಹಿರಿಯ ಐಪಿಎಸ್‌ ಅಧಿಕಾರಿ ಬಿ ಆರ್‌ ರವಿಕಾಂತೇಗೌಡ (B R Ravikanthegowda) ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಎಸ್‌ ಆರ್‌ ಕೃಷ್ಣಕುಮಾರ್‌ (S R Krishnakumar) ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿ ಈ ತೀರ್ಮಾನವನ್ನು ಪ್ರಕಟಿಸಿದೆ.

ಈಗಾಗಲೇ ಪವರ್ ಟಿವಿ ಕೇಬಲ್‌ ಟೆಲಿವಿಷನ್‌ ನೆಟ್‌ವರ್ಕ್‌ಗಳ (Power TV Cable Television Network) (ನಿಯಂತ್ರಣ) ಕಾಯಿದೆ – 1995ರ ಆದೇಶ ಉಲ್ಲಂಘಿಸಿರುವ ಕಾರಣ ತಕ್ಷಣದಿಂದಲೇ ತಮ್ಮ ಚಾನೆಲ್‌ನಲ್ಲಿ ಸುದ್ದಿಗಳೂ ಸೇರಿದಂತೆ ಯಾವುದೇ ಕಾರ್ಯಕ್ರಮಗಳನ್ನು ಜುಲೈ (July) 8ರವರೆಗೆ ಪ್ರಸಾರ ಮಾಡಬಾರದು ಎಂದು ಕರ್ನಾಟಕ ಹೈಕೋರ್ಟ್‌ ಕಟ್ಟಪ್ಪಣೆ ಹೊರಡಿಸಿದೆ. ವಾಸ್ತವದಲ್ಲಿ ಅವರು ಚಾನೆಲ್‌ ಅನ್ನು ಕಾನೂನು ಬಾಹಿರವಾಗಿ ನಡೆಸುತ್ತಿದ್ದಾರೆ. 2021ರಿಂದಲೂ ಚಾನೆಲ್‌ ಪರವಾನಗಿ ನವೀಕರಿಸಿಲ್ಲ ಎಂದು ತಿಳಿದುಬಂದಿದೆ.

ಇನ್ನು ಪ್ರಕರಣದ ಪ್ರತಿವಾದಿಯಾಗಿರುವ ಪವರ್‌ ಟಿವಿಯ ಮಾತೃ ಸಂಸ್ಥೆ ಮೆಸರ್ಸ್‌ ಪವರ್‌ ಸ್ಮಾರ್ಟ್‌ ಮೀಡಿಯಾ ಪ್ರೈವೆಟ್‌ ಲಿಮಿಟೆಡ್‌ (Power Smart Media Pvt Ltd) ಕಂಪನಿಯ ಹೆಚ್ಚುವರಿ ನಿರ್ದೇಶಕ ರಾಕೇಶ್‌ ಸಂಜೀವ ಶೆಟ್ಟಿ ಅಲಿಯಾಸ್‌ ರಾಕೇಶ್‌ ಶೆಟ್ಟಿಗೆ ಕರ್ನಾಟಕ ಹೈಕೋರ್ಟ್‌ (Karnataka Highcourt) ನಿರ್ದೇಶನ ನೀಡಿ ಆದೇಶ ಹೊರಡಿಸಿದೆ.

ಈಗಾಗಲೇ ಜೆಡಿಎಸ್ (JDS) ಪಕ್ಷ ಈ ಚಾನಲ್ ವಿರುದ್ಧ ದೂರು ದಾಖಲಿಸಿದ್ದು ಪವರ್ ಟಿವಿ ಮುಖ್ಯಸ್ಥರು ಮತ್ತು ನಿರೂಪಕರಾದ ರಾಕೇಶ್ ಶೆಟ್ಟಿ ಅವರು ಮಾಜಿ ಪ್ರಧಾನ ಮಂತ್ರಿಗಳಾದ ಎಚ್‌ಡಿ ದೇವೇಗೌಡರು , ಕೇಂದ್ರ ಸಚಿವರಾದ ಎಚ್‌ಡಿ ಕುಮಾರಸ್ವಾಮಿ (H D Kumaraswamy) ಹಾಗೂ ಅವರ ಕುಟುಂಬದ ಬಗ್ಗೆ ಪವರ್ ಟಿವಿ ನೇರಪ್ರಸಾರ ಕಾರ್ಯಕ್ರಮದಲ್ಲಿ ಅತ್ಯಂತ ಕೀಳು ಮಟ್ಟದಲ್ಲಿ, ಲಘುವಾಗಿ ಏಕವಚನದಲ್ಲಿ, ಅವಾಚ್ಯ ಶಬ್ದಗಳಿಂದ ಅವಮಾನ ಮಾಡಿ ಮಾತನಾಡಿದ್ದಾರೆ ಎಂದು ಆಗ್ರಹಿಸಿ ಜೆಡಿಎಸ್‌ ಪಕ್ಷದ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಪ್ರದೀಪ್‌ ಕುಮಾರ್‌ ಎಸ್‌ಪಿ ಶ್ರೀರಾಂಪುರ ಪೊಲೀಸ್‌ ಠಾಣೆಗೆ (SP Shrirampura Police Station) ದೂರು ನೀಡಿದ್ದಾರೆ.

Exit mobile version