Ramanagar: ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚಿನ ಸ್ಥಾನಗಳನ್ನು ಗೆಲ್ಲಬೇಕಿದೆ. ಒಂದು (HC Balakrishna viral statement) ವೇಳೆ ಲೋಕಸಭಾ ಚುನಾವಣೆಯಲ್ಲಿ
ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದಿದ್ದರೆ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ನೀಡಿರುವ ಗ್ಯಾರಂಟಿ ಯೋಜನೆಗಳನ್ನು ರದ್ದು ಮಾಡಲಾಗುವುದು ಎಂದು ಮಾಗಡಿ ಕಾಂಗ್ರೆಸ್ ಶಾಸಕ
ಹೆಚ್.ಸಿ ಬಾಲಕೃಷ್ಣ (HC Balakrishna viral statement) ಹೇಳಿದ್ದಾರೆ.
ಕಾಂಗ್ರೆಸ್ ಶಾಸಕ ನೀಡಿರುವ ಈ ಹೇಳಿಕೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಪ್ರಜಾತಾಂತ್ರಿಕ ವ್ಯವಸ್ಥೆಯಲ್ಲಿ ನೇರವಾಗಿ ಮತದಾರರಿಗೆ ಮತ್ತೆ ಬ್ಲ್ಯಾಕ್ ಮೇಲ್ ಮಾಡಿದರಾ ಎಂಬ ಪ್ರಶ್ನೆ ಮೂಡಿದೆ.
ಇನ್ನು ಮಾಗಡಿ ತಾಲೂಕಿನ ಶ್ರೀಗಿರಿಪುರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡುತ್ತಾ, ಹಾಲಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರಿಗೆ ಈ ಬಾರಿಯೂ ನೀವು ಮತ ಚಲಾಯಿಸಬೇಕೆಂದು
ತಾಕೀತು ಮಾಡಿದ್ದಾರೆ.
ಸಭೆಯಲ್ಲಿ ಶಾಸಕರು ಹೇಳಿದ್ದೇನು..?:
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸೋತರೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ರದ್ದು ಮಾಡಲಾಗುವುದು. ಬಿಜೆಪಿಯವರು ಮಂತ್ರಾಕ್ಷತೆ ನೀಡಿ ಮತ
ಕೇಳುತ್ತಿದ್ದಾರೆ. ಆದರೆ ಜನರಿಗೆ ಐದು ಗ್ಯಾರಂಟಿ ಯೋಜನೆಗಳನ್ನ ನೀಡಿ ಮತ ಕೇಳುತ್ತೇವೆ. ಹೀಗಾಗಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನಗಳನ್ನು ಗೆಲ್ಲದಿದ್ದರೆ, ರಾಜ್ಯದ ಜನರಿಗೆ ಗ್ಯಾರಂಟಿ
ಯೋಜನೆಗಳು ಇಷ್ಟವಾಗಿಲ್ಲ ಎಂದು ಅರ್ಥ. ಹೀಗಾಗಿ ಆಗ ಗ್ಯಾರಂಟಿ ಯೋಜನೆಗಳನ್ನು ರದ್ದು ಮಾಡಲಾಗುವುದು ಎಂದು ಶಾಸಕರು ಹೇಳಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಿಮ್ಮ ಮತ ರಾಮನ ಮಂತ್ರಾಕ್ಷತೆಗೋ ಅಥವಾ ಕಾಂಗ್ರೆಸ್ ಪಕ್ಷ ನೀಡಿರುವ ಐದು ಗ್ಯಾರಂಟಿಗಾ ಎಂದು ನೀವೇ ಯೋಚನೆ ಮಾಡಿ. ಲೋಕಸಭಾ
ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಿಸಿದ್ರೆ ಮಾತ್ರ ಗ್ಯಾರಂಟಿ ಯೋಜನೆ ಮುಂದುವರಿಸುತ್ತೇವೆ. ಇಲ್ಲದಿದ್ದರೆ ಜಾರಿ ಮಾಡಿರುವ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು
ರದ್ದು ಮಾಡುತ್ತೇವೆ ಎಂದು ಮತದಾರರಿಗೆ ಪರೋಕ್ಷವಾಗಿ ತಾಕೀತು ಮಾಡಿದ್ದಾರೆ. ಶಾಸಕರ ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆಗೆ ಗುರಿಯಾಗಿದ್ದು, ವಿಧಾನಸಭಾ ಚುನಾವಣೆಯಲ್ಲಿ
ಜನರು ಗ್ಯಾರಂಟಿ ಯೋಜನೆಗಳಿಗೆ ಮತ ನೀಡಿದ್ದಾರೆ. ಆದರೆ ಲೋಕಸಭಾ ಚುನಾವಣೆಯಲ್ಲಿ ಗೆದ್ದರೆ ಇಡೀ ದೇಶದಲ್ಲಿ ಕಾಂಗ್ರೆಸ್ ಏನು ಮಾಡಲಿದೆ ಎಂಬುದನ್ನು ಘೋಷಣೆ ಮಾಡಬೇಕೆಂದು
ನೆಟ್ಟಿಗರು ಒತ್ತಾಯಿಸಿದ್ದಾರೆ.
ಇದನ್ನು ಓದಿ: ಬಿಜೆಪಿ ಮತ್ತು ಜೆಡಿಎಸ್ ಕಾನೂನು ಸುವ್ಯವಸ್ಥೆ ಹಾಳು ಮಾಡಲು ಯತ್ನಿಸುತ್ತಿದೆ: ಡಿಕೆ ಶಿವಕುಮಾರ್