ಉಡುಪಿಯ ಪರಶುರಾಮ ಥೀಮ್‌ ಪಾರ್ಕ್ ಪ್ರಶ್ನಿಸಿ ಪ್ರಮೋದ್‌ ಮುತಾಲಿಕ್‌ ಸಲ್ಲಿಸಿದ್ದ ಅರ್ಜಿ ವಜಾ: ಹೈಕೋರ್ಟ್‌

Bengaluru: ಪ್ರಮೋದ್ ಮುತಾಲಿಕ್ (Pramod Muthalik) ಅವರು, ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ (HC dismissed Muthalik Petition) ಬೈಲೂರಿನ ಉಮಿಕುಂಜ ಬೆಟ್ಟದ ಮೇಲಿನ

ಗೋಮಾಳ ಜಾಗದಲ್ಲಿ ಪರಶುರಾಮ ಥೀಮ್‌ ಪಾರ್ಕ್ (Parashurama Theme Park) ನಿರ್ಮಾಣ ಯೋಜನೆ ಕೈಬಿಡಬೇಕು ಮತ್ತು ಯೋಜನೆಯಲ್ಲಿನ ಅಕ್ರಮಗಳ ಬಗ್ಗೆ ತನಿಖೆಗೆ ಸಮಿತಿ ರಚನೆ

ಮಾಡಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು (HC dismissed Muthalik Petition) ಹೈಕೋರ್ಟ್‌ ವಜಾಗೊಳಿಸಿದೆ.

ಈ ಪಾರ್ಕ್ ನಿರ್ಮಾಣಕ್ಕೆ ನಿಗದಿಪಡಿಸಿರುವ ಎರ್ಲಪಾಡಿ (Erlapadi) ಗ್ರಾಮ ಪಂಚಾಯತ್‌ ವ್ಯಾಪ್ತಿಯ ಸರ್ವೆ ಸಂಖ್ಯೆ 326/11.58 ಎಕರೆ ಭೂಮಿ ಗೋಮಾಳ ಮೀಸಲಿಟ್ಟಿದ್ದಾಗಿದೆ. ಜೊತೆಗೆ

ಈ ಜಮೀನಿನಲ್ಲಿ ಯಾವುದೇ ಥೀಮ್‌ ಪಾರ್ಕ್ ನಿರ್ಮಾಣಕ್ಕೆ ಅವಕಾಶ ನೀಡಬಾರದೆಂದು ಕೋರಿ ಪ್ರಮೋದ್ ಮುತಾಲಿಕ್ ಅರ್ಜಿ ಸಲ್ಲಿಸಿದ್ದು, ಹೈಕೋರ್ಟ್‌ನಲ್ಲಿ ವಜಾಗೊಳಿಸಲಾಗಿದೆ.

ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರ್ಲೆ (P B Varley) ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ವಿಭಾಗೀಯ ಪೀಠವು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಮತ್ತಿತರರು

ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಿತ್ತು. ಕೆಲ ಕಾಲ ಅರ್ಜಿದಾರರ ವಾದ ಆಲಿಸಿದ ಬಳಿಕ ನ್ಯಾಯಪೀಠ, ‘ಅರ್ಜಿದಾರರು ಸಾಕಷ್ಟು ತಡವಾಗಿ ನ್ಯಾಯಾಲಯದ ಮೊರೆ

ಹೋಗಿದ್ದಾರೆ. ಮತ್ತು ಅರ್ಜಿಯಲ್ಲಿನ ಎಲ್ಲ ಅಂಶಗಳು ಅರ್ಜಿದಾರರ ಊಹೆಯಂತಿದ್ದು, ಸ್ವಂತ ಅಭಿಪ್ರಾಯದ ಬಂಡಲ್‌ ಆಗಿದೆ. ಇದೊಂದು ಸಾರಾಸಗಟಾಗಿ ತಳ್ಳಿಹಾಕುವಂತಹ ಅರ್ಜಿ’ ಎಂದು ಅಭಿಪ್ರಾಯಪಟ್ಟು

ವಜಾಗೊಳಿಸಿ ಆದೇಶ ಹೊರಡಿಸಿದೆ.

ಹೈಕೋರ್ಟ್‌ (Highcourt) ಪೀಠ, ಕಳೆದ ಹತ್ತು ವರ್ಷಗಳ ಹಿಂದೆಯೇ ಗೋವುಗಳನ್ನು ಸಾಕದವರು, ಗೋಮಾಳ ರಕ್ಷಣೆ ಮಾಡುವಂತೆ ಕೋರಿ ಅರ್ಜಿ ಸಲ್ಲಿಸುವುದಕ್ಕೆ ಅವಕಾಶವೇ ಇಲ್ಲಎಂಬುದಾಗಿ

ಅಭಿಪ್ರಾಯಪಟ್ಟಿದೆ. ಹಾಗಾಗಿ, ಅರ್ಜಿದಾರರು ಗೋವುಗಳನ್ನು ಸಾಕಿದ್ದಾರೆಯೇ? ಎಂದು ನ್ಯಾ. ಕೃಷ್ಣ ಎಸ್‌. ದೀಕ್ಷಿತ್‌ (Krishna S Dikshith) ಅವರು ಅರ್ಜಿದಾರರ ಪರ ವಕೀಲರನ್ನು ಮೌಖಿಕವಾಗಿ

ಪ್ರಶ್ನಿಸಿದರು.ಈಗಾಗಲೇ ಕಾಮಗಾರಿ ಬಹುತೇಕ ಮುಗಿಯುವ ಹಂತಕ್ಕೆ ಬಂದಿದ್ದು, ಈ ಹಂತದಲ್ಲಿ ಮಧ್ಯಪ್ರವೇಶ ಮಾಡಲಾಗದು ಎಂದು ನ್ಯಾಯಾಲಯ ಹೇಳಿದೆ.

ಆ.1, 2023 ರಂದು ಈ ಸಂಬಂಧ ಉಡುಪಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದ್ದು, ಈವರೆಗೂ ಕ್ರಮಕ್ಕೆ ಮುಂದಾಗಿಲ್ಲ. ಆದ್ದರಿಂದ ಈ ಸಂಬಂಧ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ತನಿಖೆ ನಡೆಸುವುದಕ್ಕಾಗಿ

ಸಮಿತಿಯೊಂದನ್ನು ರಚನೆ ಮಾಡಬೇಕು ಮತ್ತು ಕಾಮಗಾರಿ ರದ್ದು ಮಾಡಬೇಕು ಎಂದು ಮುತಾಲಿಕ್‌ ಅರ್ಜಿಯಲ್ಲಿ ಕೋರಿದ್ದರು.

ಇದನ್ನು ಓದಿ : ಹೋಟೆಲ್ ಆರಂಭಿಸಲು ರಾಜ್ಯ ಸರ್ಕಾರದಿಂದ ಹೋಟೆಲ್ ಯೋಜನೆ ಅಡಿಯಲ್ಲಿ ಸಹಾಯಧನ ವಿತರಣೆ: ಆಸಕ್ತರಿಂದ ಅರ್ಜಿ ಆಹ್ವಾನ

ಭವ್ಯಶ್ರೀ ಆರ್.ಜೆ

Exit mobile version