Bengaluru: ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ (HC dismissed Virupakshappa bail) ರಾಜ್ಯ ಹೈಕೋರ್ಟ್ಗೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್
ಏಕಸದಸ್ಯ ಪೀಠ ವಜಾಗೊಳಿಸಿದೆ. ಹೀಗಾಗಿ ದಾವಣಗೆರೆ ಪೊಲೀಸರು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸುವ (HC dismissed Virupakshappa bail) ಸಾಧ್ಯತೆಯಿದೆ.

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳ್ (Prashant Madal) ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದರು. ನಂತರ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ದಾವಣಗೆರೆ ನಿವಾಸದ ಮೇಲೂ ಲೋಕಾಯುಕ್ತ ದಾಳಿ ನಡೆದಿತ್ತು.
ಅವರ ಮನೆಯಲ್ಲಿಯೂ ಕೂಡಾ ಕೋಟ್ಯಂತರ ರೂಪಾಯಿ ನಗದು, ಚಿನ್ನ ಪತ್ತೆಯಾಗಿತ್ತು. ಲೋಕಾಯುಕ್ತ ಪೊಲೀಸರ ದಾಳಿಯ ವೇಳೆ ಬಂಧನ ಭೀತಿಯಿಂದಾಗಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಾಪತ್ತೆಯಾಗಿದ್ದರು.
ನಂತರ ಹೈಕೋರ್ಟ್ನಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಜಾಮೀನು ಮಂಜೂರು ಮಾಡಲಾಗಿತ್ತು. ಜಾಮೀನು ಸಿಕ್ಕ ನಂತರವೇ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು. ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ
ತರಾತುರಿಯಲ್ಲಿ ಜಾಮೀನು ಮಂಜೂರು ಮಾಡಿದ್ದ ನ್ಯಾಯಾಲಯದ ಕ್ರಮಕ್ಕೆ ವಕೀಲರ ಸಂಘ ಸೇರಿದಂತೆ ಸಾರ್ವಜನಿಕರು ತೀವ್ರ ವಿರೋಧ ವ್ಯಕ್ತಪಡಿಸಿ, ಸುಪ್ರೀಂಕೋರ್ಟ್ನ (Supreme Court) ಮುಖ್ಯನ್ಯಾಯಮೂರ್ತಿಗಳಿಗೂ ಪತ್ರ ಬರೆಯಲಾಗಿತ್ತು.
ಇದನ್ನು ಓದಿ : ಬಿಲ್ಕಿಸ್ ಬಾನೋ ಗ್ಯಾಂಗ್ ರೇಪ್ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !
ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅಧ್ಯಕ್ಷರಾಗಿದ್ದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಸಂಸ್ಥೆಗೆ ಕಚ್ಚಾ ವಸ್ತುಗಳ ಪೂರೈಕೆ ಟೆಂಡರ್ ನೀಡಲು ಮಾಡಾಳ್ ಪುತ್ರ ಪ್ರಶಾಂತ್ ಮಾಡಾಲ್ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಸದ್ಯ ಬೆಂಗಳೂರು ಜಲಪೂರೈಕೆ ಮತ್ತು ಒಳಚರಂಡಿ ಜಲಮಂಡಳಿಯ ಮುಖ್ಯ ಲೆಕ್ಕಾಧಿಕಾರಿಯಾಗಿದ್ದ ಪ್ರಶಾಂತ್ಮಾಡಾಳ್ನಿವಾಸದ ಮೇಲೆ ಲೋಕಾಯುಕ್ತ (Lokayukta) ಪೊಲೀಸರು ದಾಳಿ ನಡೆಸಿ, ಅಕ್ರಮ ಹಣವನ್ನು ವಶಪಡಿಸಿಕೊಂಡಿದ್ದರು.
ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವ ವಿರೂಪಾಕ್ಷಪ್ಪ(Virupakshappa) ಕಚೇರಿಯಲ್ಲಿ 3 ಬ್ಯಾಗ್ಗಳಲ್ಲಿ ಕಂತೆ ಕಂತೆ ನೋಟುಗಳು ಪತ್ತೆ ಆಗಿದ್ದವು.

ಅಕ್ರಮ ಹಣ ಗಳಿಕೆಯ ಆರೋಪ ಹೊತ್ತು ಲೋಕಾಯುಕ್ತ ಪ್ರಕರಣದಲ್ಲಿ ಜಾಮೀನಿನಲ್ಲಿದ್ದರೂ ಶಾಸಕ ಮಾಡಾಳ್ ವಿರೂಪಾಕ್ಷಪ್ಪ 351 ಕೋಟಿ ವೆಚ್ಚದ ವಿವಿಧ ಶಂಕುಸ್ಥಾಪನಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದು ಕೂಡಾ ತೀವ್ರ ವಿರೋಧಕ್ಕೆ ಕಾರಣವಾಗಿತ್ತು.
ಇದೀಗ ಹೈಕೋರ್ಟ್ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಅರ್ಜಿಯನ್ನು ವಜಾ ಮಾಡಿರುವುದರಿಂದ ಪೊಲೀಸರು ಅವರನ್ನು ಬಂಧಿಸಿ, ನ್ಯಾಯಾಲಯಮುಂದೆ ಹಾಜರುಪಡಿಸುವ ಸಾಧ್ಯತೆಯಿದೆ.