ಸನಾತನ ಧರ್ಮ ವಿವಾದ : ‘ವಾಕ್ ಸ್ವಾತಂತ್ರ್ಯ ಧರ್ಮದ ವಿರುದ್ದದ ದ್ವೇಷ ಭಾಷಣ ಆಗಬಾರದು” ಹೈಕೋರ್ಟ್ ಚಾಟಿ

Chennai: ಸನಾತನ ಧರ್ಮದ ಕುರಿತು ಚರ್ಚೆ ನಡೆಯುತ್ತಿರುವ ನಡುವೆಯೇ ಮದ್ರಾಸ್ ಹೈಕೋರ್ಟ್ (Madras Highcourt) ಮಹತ್ವದ ಹೇಳಿಕೆಯೊಂದನ್ನು ನೀಡಿದೆ. ಸನಾತನ ಧರ್ಮವು ರಾಷ್ಟ್ರಕ್ಕೆ, ಬಡವರ ಬಗ್ಗೆ ಕಾಳಜಿ ವಹಿಸುವುದು ಸೇರಿದಂತೆ ಉತ್ತಮ ಕರ್ತವ್ಯಗಳ ಒಂದು ಗುಂಪಾಗಿದೆ ಎಂದು ಮದ್ರಾಸ್ ಹೈಕೋರ್ಟ್ ಅಭಪ್ರಾಯಪಟ್ಟಿದೆ.

ತಮಿಳುನಾಡಿನಲ್ಲಿ#Tamilnadu ‘ಸನಾತನ ವಿರೋಧ’ ವಿಷಯದ ಕುರಿತು ವಿದ್ಯಾರ್ಥಿಗಳು ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳುವಂತೆ ಸ್ಥಳೀಯ ಸರ್ಕಾರಿ ಕಲಾ ಕಾಲೇಜು ಹೊರಡಿಸಿದ ಸುತ್ತೋಲೆಯನ್ನು ಪ್ರಶ್ನಿಸಿ ಇಳಂಗೋವನ್ ಎಂಬವರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್ ಶೇಷಸಾಯಿ (Sheshasai) ಅವರ ನೇತೃತ್ವದ ನ್ಯಾಯಪೀಠ, ಸನಾತನ ಧರ್ಮವು ಕೇವಲ ಜಾತೀಯತೆ ಮತ್ತು ಅಸ್ಪೃಶ್ಯತೆಯನ್ನು ಉತ್ತೇಜಿಸುತ್ತದೆ ಎಂಬ ಕಲ್ಪನೆ ನೆಲೆಗೊಂಡಿರುವುದು ದುರದೃಷ್ಟಕರ. ಈ ಕಲ್ಪನೆಯನ್ನು ನ್ಯಾಯಪೀಠ ಬಲವಾಗಿ ತಿರಸ್ಕರಿಸಿತು.

ಸಮಾನ ನಾಗರಿಕರ ದೇಶದಲ್ಲಿ ಅಸ್ಪೃಶ್ಯತೆ ಸಹಿಸಲಾಗುವುದಿಲ್ಲ. ಇನ್ನು ವಾಕ್ ಸ್ವಾತಂತ್ರ್ಯವು ಮೂಲಭೂತ ಹಕ್ಕಾಗಿದ್ದರೂ, ಅದು ಧರ್ಮದ ವಿರುದ್ದದ ದ್ವೇಷದ ಭಾಷಣವಾಗಿ ಬದಲಾಗಬಾರದು. ವಿಶೇಷವಾಗಿ ಅದು ಧರ್ಮದ ವಿಷಯಗಳಿಗೆ ಸಂಬಂಧಿಸಿದಂತೆ, ಇಂತಹ ಭಾಷಣದಿಂದ ಯಾರಿಗೂ ನೋವಾಗದಂತೆ ನೋಡಿಕೊಳ್ಳುವ ಅಗತ್ಯವಿದೆ. ಪ್ರತಿಯೊಂದು ಧರ್ಮವು ನಂಬಿಕೆಯ ಮೇಲೆ ಸ್ಥಾಪಿತವಾಗಿದೆ. ಆದ್ದರಿಂದ, ಧರ್ಮಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ವಾಕ್ ಸ್ವಾತಂತ್ರ್ಯವನ್ನು ಚಲಾಯಿಸಿದಾಗ, ಯಾರಿಗೂ ನೋವಾವಾಗದಂತೆ ನೋಡಿಕೊಳ್ಳುವುದು ಅವಶ್ಯಕವಾಗಿದೆ ಎಂದು ನ್ಯಾಯಮೂರ್ತಿ ಎನ್ ಶೇಷಸಾಯಿ ಅವರ ನೇತೃತ್ವದ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಇನ್ನು ಇತ್ತೀಚೆಗೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ @UdayanidhiStalin ಅವರು ಸನಾತನ ಧರ್ಮದ ವಿರುದ್ದ ನೀಡಿದ ಹೇಳಿಕೆಗಳ ಹಿನ್ನೆಲೆಯಲ್ಲಿ ನ್ಯಾಯಾಲಯದ ಈ ಅಭಿಪ್ರಾಯ ಮಹತ್ವ ಪಡೆದುಕೊಂಡಿದೆ. ಸಚಿವ ಉದಯನಿಧಿ ಸ್ಟಾಲಿನ್ ನೀಡಿದ್ದ ಹೇಳಿಕೆ ಇಡೀ ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿತ್ತು. ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಿರುವ ಆರೋಪದಡಿಯಲ್ಲಿ ದೇಶದ ಅನೇಕ ಕಡೆಗಳಲ್ಲಿ ಸಚಿವ ಉದಯನಿಧಿ ಸ್ಟಾಲಿನ್ ವಿರುದ್ದ ಪ್ರಕರಣಗಳನ್ನು ದಾಖಲಿಸಲಾಗಿದೆ.

Exit mobile version