Bengaluru: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯನವರು (Siddaramaiah) ಮತದಾರರಿಗೆ ಗ್ಯಾರಂಟಿ ಯೋಜನೆಗಳ ಮೂಲಕ ಲಂಚದ ಆಮೀಷ ಒಡ್ಡಿ ಅಧಿಕಾರಕ್ಕೆ ಬಂದಿದೆ. ಹೀಗಾಗಿ ಸಿದ್ದರಾಮಯ್ಯನವರ ಶಾಸಕತ್ವವನ್ನು ಅಸಿಂಧುಗೊಳಿಸಬೇಕೆಂದು ಹೈಕೋರ್ಟ್ಗೆ ಅರ್ಜಿಯೊಂದು ಸಲ್ಲಿಕೆಯಾಗಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ರಾಜ್ಯ ಹೈಕೋರ್ಟ್ (Highcourt) ನೋಟಿಸ್ ಜಾರಿ ಮಾಡಿದೆ.

ಮೈಸೂರಿನ ವರುಣಾ (Varuna) ವಿಧಾನಸಭಾ ಕ್ಷೇತ್ರದ ಕೂಡನಹಳ್ಳಿ ಗ್ರಾಮದ ಕೆ.ಎಂ. ಶಂಕರ (K.M.Shankar) ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಸಿದ್ದರಾಮಯ್ಯನವರಿಗೆ ವಿವರಣೆ ಕೋರಿ ನೋಟಿಸ್ ಜಾರಿ ಮಾಡಿದೆ.
ಕೆ.ಎಂ. ಶಂಕರ ಅವರು ಸಲ್ಲಿಸಿರುವ ಅರ್ಜಿಯಲ್ಲಿ ಏನಿದೆ?
ಕಾಂಗ್ರೆಸ್ ಪಕ್ಷ ವಿಧಾನಸಭಾ ಚುಂನಾವಣೆಯ ವೇಳೆ ಐದು ಗ್ಯಾರಂಟಿ (Guranatee) ಯೋಜನೆಗಳ ಮೂಲಕ ರಾಜ್ಯದ ಎಲ್ಲ ವರ್ಷಗದ ಮತದಾರರಿಗೆ ಪರೋಕ್ಷವಾಗಿ ಲಂಚದ ಆಮಿಷ ಒಡ್ಡಿತ್ತು. ಹೀಗೆ ಮತದಾರರಿಗೆ ಲಂಚದ ಆಮೀಷ ಒಡ್ಡುವುದು ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ 123 (1) ಮತ್ತು ಸೆಕ್ಷನ್ 123 (2) ಪ್ರಕಾರ ಮತದಾರರ ಮೇಲೆ ಇದು ಪ್ರಭಾವ ಬೀರಿದ್ದು, ಇದು ಚುನಾವಣಾ ಅಕ್ರಮಕ್ಕೆ ಸಮವಾಗಿದೆ. ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ (Section) 123 (4)ರ ಪ್ರಕಾರ ಮತದಾರರಿಗೆ ಲಂಚದ ಆಮಿಷವೊಡ್ಡಿ ಪ್ರಚಾರ ನಡೆಸುವುದು, ಹೇಳಿಕೆ ಕೊಡುವುದು, ಪತ್ರಗಳನ್ನು ಹಂಚುವುದು ಅಪರಾಧ ಆಗುತ್ತದೆ. ಈ ಕಾರಣಕ್ಕೆ ಚುನಾವಣಾ ಅಕ್ರಮ ಎಸಗಿ, ರಾಜ್ಯದ ವರುಣಾ ವಿಧಾನಸಭಾ ಕ್ಷೇತ್ರದಿಂದ ಸಿದ್ದರಾಮಯ್ಯ ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಬೇಕು.

ವರುಣಾ ಕ್ಷೇತ್ರ ಸೇರಿದಂತೆ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ನೀಡಿರುವ ಗ್ಯಾರಂಟಿ ಕಾರ್ಡ್ಗಳಿಗೆ ಸಿದ್ದರಾಮಯ್ಯ ಅವರ ಸಹಿಯನ್ನು ಹಾಕಲಾಗಿದೆ. ಈ ಗ್ಯಾರಂಟಿ ಯೋಜನೆಗಳು ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್ (Congress) ಅಭ್ಯರ್ಥಿಗೆ ಮತ ಹಾಕಲು ಮತದಾರರನ್ನು ಪ್ರೇರೇಪಿಸಿದೆ. ಈ ಎಲ್ಲ ಕಾರಣಗಳಿಂದ ಸಿದ್ದರಾಮಯ್ಯ ಅವರನ್ನು ಅನರ್ಹ ಮಾಡಬೇಕೆಂದು ಅರ್ಜಿಯಲ್ಲಿ ಕೋರಿದ್ದಾರೆ.