Mysore: ಮೈಸೂರಿನ (Mysore) ಪಾರಂಪರಿಕ ಕಟ್ಟಡವು ಶಿಥಿಲಾವಸ್ಥೆಯಲ್ಲಿದ್ದು, ದೇವರಾಜ (hc order for newmarket) ಮಾರುಕಟ್ಟೆಯನ್ನು ನೆಲಸಮಗೊಳಿಸಿ ಹೊಸ ಮಾರುಕಟ್ಟೆ ನಿರ್ಮಾಣ
ಮಾಡುವ ರಾಜ್ಯ ಸರ್ಕಾರದ ಉದ್ದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಮೈಸೂರಿನ ಪಾರಂಪರಿಕ ಪ್ರಿಯ ನಾಗರಿಕರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಹಿನ್ನಡೆಯಾಗಿದೆ.
ಈಗಾಗಲೇ ದೇವರಾಜ (Devaraja) ಮಾರುಕಟ್ಟೆ ಉತ್ತರದ ದ್ವಾರ ಕುಸಿದಿದ್ದು, ಅಲ್ಲದೆ ಇದರ ವೈಜ್ಞಾನಿಕ ನವೀಕರಣ ಸಾಧ್ಯವಿಲ್ಲ ಎಂದು ತಜ್ಞರ ಸಮಿತಿ ವರದಿ ನೀಡಿದೆ.

ನಗರದ ಹೃದಯ ಭಾಗದಲ್ಲಿರುವ ದೇವರಾಜ ಮಾರುಕಟ್ಟೆಯನ್ನು ನೆಲಸಮ ಮಾಡದಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್‌ನ (Highcourt) ವಿಭಾಗೀಯ
ಪೀಠ ವಜಾ ಮಾಡಿದೆ. ಈ ಮೂಲಕ ಶಿಥಿಲಾವಸ್ಥೆಯಲ್ಲಿರುವ ದೇವರಾಜ (Devaraja) ಮಾರುಕಟ್ಟೆಯನ್ನು ನೆಲಸಮ ಮಾಡಿ, ಹೊಸ ಮಾರುಕಟ್ಟೆ ಸಂಕೀರ್ಣ ನಿರ್ಮಾಣ ಮಾಡಬೇಕೆಂಬ ರಾಜ್ಯ
ಸರಕಾರದ ನಿಲುವನ್ನು (hc order for newmarket) ಹೈಕೋರ್ಟ್ ಎತ್ತಿ ಹಿಡಿದಿದೆ.
ಮುಖ್ಯ ನ್ಯಾಯಾಧೀಶರಾದ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ (Prasanna B Varaale) ನೇತೃತ್ವದ ವಿಭಾಗೀಯ ಪೀಠ ವಾದ ಪ್ರತಿವಾದ ಆಲಿಸಿ ಪಾರಂಪರಿಕ ಪ್ರಿಯರು ಸಲ್ಲಿಸಿದ್ದ
ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ವಜಾಗೊಳಿಸಿದೆ.
2016ರಲ್ಲಿ ದೇವರಾಜ ಮಾರುಕಟ್ಟೆಯ ಉತ್ತರ ದ್ವಾರ ಕುಸಿದಿದ್ದು, 3.67 ಎಕರೆ ಪ್ರದೇಶದಲ್ಲಿ ನಿರ್ಮಾಣ ಮಾಡಿರುವ ದೇವರಾಜ ಮಾರುಕಟ್ಟೆ ನಿರ್ವಹಣೆ ಕೊರತೆಯಿಂದ ಶಿಥಿಲಾವಸ್ಥೆ
ತಲುಪಿತ್ತು. ಮೈಸೂರಿನ ಎಂಜಿನಿಯರ್ ಡಾ.ಸೈಯಿದ್ ಶಕೀಬ್ ಉರ್ ರೆಹಮಾನ್ (Dr. Syed Shakib Ur Rehman) ನೇತೃತ್ವದಲ್ಲಿ ದೇವರಾಜ ಮಾರುಕಟ್ಟೆಯನ್ನು ಸಂರಕ್ಷಿಸಬಹುದೆ
ಇಲ್ಲವೆ ಎಂದು ವರದಿ ನೀಡುವಂತೆ (hc order for newmarket) ಸರಕಾರ ತಜ್ಞರ ಸಮಿತಿ ರಚಿಸಿತ್ತು.
ಮಾರುಕಟ್ಟೆಯನ್ನು ನವೀಕರಣಗೊಳಿಸಲು ಸಾಧ್ಯವಿಲ್ಲ. ನೆಲಸಮಗೊಳಿಸಿ ಹೊಸ ಕಟ್ಟಡ ಕಟ್ಟುವುದು ಬಿಟ್ಟು ಬೇರೆ ಮಾರ್ಗವಿಲ್ಲ ಎಂದು ಈ ಸಮಿತಿ ಸರಕಾರಕ್ಕೆ ವರದಿ ಸಲ್ಲಿಸಿತ್ತು. ಅದರಂತೆ
ಸರಕಾರ ದೇವರಾಜ (Devaraja) ಮಾರುಕಟ್ಟೆಯನ್ನು ನೆಲಸಮಗೊಳಿಸಿ ಹೊಸ ಕಟ್ಟಡ ನಿರ್ಮಾಣಕ್ಕೆ ತೀರ್ಮಾನಿಸಿತ್ತು.

ದೇವರಾಜ ಮಾರುಕಟ್ಟೆ ನೆಲಸಮ ಮಾಡದಂತೆ 2020ರಲ್ಲಿ ಸಾರ್ವಜನಿಕ ಹಿತಾಸಕ್ತಿ ಕೋರಿ ಮೈಸೂರಿನ ಪಾರಂಪರಿಕ ಪ್ರಿಯ ನಾಗರಿಕರಾದ ರಾಜಚಂದ್ರ, ಪ್ರೊ.ಸಿ.ಜಯದೇವರಾಜ ಅರಸ್ (C.Jayadevaraj Aras), ಗೌರಿ ಸತ್ಯ, ಯಶಸ್ವಿನಿ ಶರ್ಮ (Yashaswini Sharma) ಹಾಗೂ ನಿರಂಜನ್ ನಿಕ್ಕಂ ಸೇರಿ ಹೈಕೋರ್ಟ್‌ನಲ್ಲಿ ಮೊಕದ್ದಮೆ ದಾಖಲಿಸಿದ್ದರು. ಇನ್ನು ರಾಜರ ಕಾಲದಲ್ಲಿ ವೈಜ್ಞಾನಿಕವಾಗಿ ಹೇಗೆ ಈ ಕಟ್ಟಡ ನಿರ್ಮಾಣ ಮಾಡಲಾಗಿದೆಯೊ ಅದೇ ರೀತಿ ವೈಜ್ಞಾನಿಕವಾಗಿ ನವೀಕರಣ ಮಾಡಬಹುದು. ಈ ಕಾರಣದಿಂದ ದೇವರಾಜ ಮಾರುಕಟ್ಟೆಯನ್ನು ನೆಲಸಮ ಮಾಡಬಾರದು ಎಂದು ವಾದಿಸಿದ್ದರು.
ಹಾಗಾಗಿ ಹೈಕೋರ್ಟ್ (Highcourt) ಸರ್ಕಾರದ ತೀರ್ಮಾನಕ್ಕೆ ತಡೆಯಾಜ್ಞೆ ನೀಡಿತ್ತು. ನಂತರ ನಡೆದ ವಿಚಾರಣೆಯಲ್ಲಿ ಮಾರುಕಟ್ಟೆ ನೆಲಸಮ ಮಾಡದೆ ಬೇರೆ ಮಾರ್ಗವಿಲ್ಲ ಎಂದು ಸರಕಾರ ಹೈಕೋರ್ಟ್‌ನಲ್ಲಿ ಹೇಳಿತ್ತು. ಇದರ ಜೊತೆಗೆ ಡಾ.ಸೈಯಿದ್ ಶಕೀಬ್ ಉರ್ ರೆಹಮಾನ್ (Dr. Syed Shakib Ur Rehman) ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಸಿತು.
ಪಾಲಿಕೆ ಪರವಾಗಿ ವಾದ ಮಂಡಿಸಿದ ವಕೀಲೆ ಗೀತಾ (Geetha), ರಾಜರ ಕಾಲದಲ್ಲಿ ನಿರ್ಮಾಣವಾಗಿರುವ ದೇವರಾಜ ಮಾರುಕಟ್ಟೆಯನ್ನು ವೈಜ್ಞಾನಿಕ ರೀತಿಯಲ್ಲಿ ನವೀಕರಣ ಮಾಡಲು ಈಗ ತಜ್ಞ ಕೆಲಸಗಾರರು ಇಲ್ಲ. ಈ ಕಾರಣದಿಂದ ನೆಲಸಮ ಮಾಡಿ ಹೊಸ ಕಟ್ಟಡ ನಿರ್ಮಾಣ ಬಿಟ್ಟು ಬೇರೆ ಮಾರ್ಗವಿಲ್ಲಎಂದು ಹೈಕೋರ್ಟ್‌ಗೆ ಸರಕಾರದ ಪರವಾಗಿ ಅಫಿಡವಿಟ್ (Affidavit) ಸಲ್ಲಿಸಿ ವಾದ ಮಂಡಿಸಿದ್ದರು. ಇದೇ ವೇಳೆ ಪಾರಂಪರಿಕ ಪ್ರಿಯರು ಕೂಡ ಹೈಕೋರ್ಟ್‌ಗೆ ಖಾಸಗಿ ತಜ್ಞರ ವರದಿ ಸಲ್ಲಿಸಿದ್ದರು.
ವಕೀಲೆ ಗೀತಾ ಅವರು ಪಾಲಿಕೆ ಪರವಾಗಿ ವಾದ ಮಂಡಿಸಿದ್ದು, ರಾಜರ ಕಾಲದಲ್ಲಿ ನಿರ್ಮಾಣವಾಗಿರುವ ದೇವರಾಜ ಮಾರುಕಟ್ಟೆಯನ್ನು ವೈಜ್ಞಾನಿಕ ರೀತಿಯಲ್ಲಿ ನವೀಕರಣ ಮಾಡಲು ಈಗ ತಜ್ಞ ಕೆಲಸಗಾರರು ಇಲ್ಲದ ಕಾರಣದಿಂದ ನೆಲಸಮ ಮಾಡಿ ಹೊಸ ಕಟ್ಟಡ ನಿರ್ಮಾಣ ಬಿಟ್ಟು ಬೇರೆ ಮಾರ್ಗವಿಲ್ಲಎಂದು ಹೈಕೋರ್ಟ್‌ಗೆ ಸರ್ಕಾರದ ಪರವಾಗಿ ಅಫಿಡವಿಟ್ ಸಲ್ಲಿಸಿ ವಾದ ಮಂಡಿಸಿದ್ದರು. ಇದೇ ಸಮಯದಲ್ಲಿ ಪಾರಂಪರಿಕ ಪ್ರಿಯರು ಕೂಡ ಹೈಕೋರ್ಟ್‌ಗೆ ಖಾಸಗಿ ತಜ್ಞರ ವರದಿ ಸಲ್ಲಿಸಿದ್ದರು.
ಭವ್ಯಶ್ರೀ ಆರ್.ಜೆ