5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

Bengaluru: 5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ (HC Permission for Board Exam) ನೀಡಿದ್ದು, ಈ ಹಿಂದೆ ಹೈಕೋರ್ಟ್ನ ಏಕಸದಸ್ಯ ಪೀಠ ನೀಡಿದ್ದ

ಆದೇಶವನ್ನು ದ್ವಿಸದ್ಯ ಪೀಠ ರದ್ದುಗೊಳಿಸಿದ್ದು 5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿದೆ. ಈ ಮೂಲಕ ರಾಜ್ಯದಲ್ಲಿ ಸೃಷ್ಟಿಯಾಗಿದ್ದ ಪರೀಕ್ಷಾ ಗೊಂದಲ ಕೊನೆಗೂ ನಿವಾರಣೆಯಾಗಿದೆ.

ಇನ್ನು ಈ ಹಿಂದೆ ಹೈಕೋರ್ಟ್ನ ಏಕಸದಸ್ಯ ಪೀಠ 5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆ (Board Exam) ನಡೆಸಬಾರದು, ಇದರಿಂದ ಮಕ್ಕಳ (HC Permission for Board Exam) ಮಾನಸಿಕ

ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ಪರೀಕ್ಷೆಯನ್ನು ರದ್ದುಗೊಳಿಸಿತ್ತು. ಹೀಗಾಗಿ ಹೈಕೋರ್ಟ್ನ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು.

ಇದೀಗ ವಿಚಾರಣೆ ನಡೆಸಿದ ದ್ವಸದಸ್ಯ ಪೀಠ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿದೆ. ತುರ್ತು ಹಾಗೂ ಸೂಕ್ತ ಕ್ರಮ ತೆಗೆದುಕೊಳ್ಳಲು ರಾಜ್ಯ ಸರ್ಕಾರಕ್ಕೆ ನ್ಯಾ.ಸೋಮಶೇಖರ್ ಹಾಗೂ ನ್ಯಾ.ರಾಜೇಶ್ ರೈ

(Rajesh Rai) ಅವರಿದ್ದ ದ್ವಿಸದಸ್ಯ ಪೀಠ ಸೂಚನೆ ನೀಡಿದೆ.

ಈ ಹಿಂದೆ ಮಾರ್ಚ್ (March) 11ರಿಂದ ಮಾರ್ಚ್ 18ರವರೆಗೆ 5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆ ನಿಗದಿಯಾಗಿತ್ತು. ಮಾರ್ಚ್ 11 ಮತ್ತು 12 ಎರಡು ದಿನ ಎರಡು ವಿಷಯಗಳ ಪರೀಕ್ಷೆ ನಡೆದ ಬಳಿಕ

ಪರೀಕ್ಷೆಗೆ ಹೈಕೋರ್ಟ್ ಮೂಲಕ ತಡೆಯಾಜ್ಞೆ ನೀಡಲಾಗಿತ್ತು. ಇದೀಗ 5ನೇ ತರಗತಿಗೆ ಎರಡು ವಿಷಯಗಳ ಪರೀಕ್ಷೆ ಮಾತ್ರ ಬಾಕಿ ಉಳಿದಿದೆ. 8 ಮತ್ತು 9ನೇ ತರಗತಿಗಳಿಗೆ ಇನ್ನೂ 4 ವಿಷಯಗಳ ಪರೀಕ್ಷೆ ಬಾಕಿ

ಇದೆ. ಈ ಎರಡೂ ಪರೀಕ್ಷೆಗಳನ್ನು ಸಾಧ್ಯವಾದಷ್ಟು ತುರ್ತಾಗಿ ಮುಗಿಸಲು ಶಿಕ್ಷಣ ಇಲಾಖೆಗೆ ಆದೇಶ ನೀಡಲಾಗಿದೆ.

ಇದನ್ನು ಓದಿ: PSD ಅಳವಡಿಸಿ ಜನರ ಪ್ರಾಣ ರಕ್ಷಿಸಿ ಎಂದು ಕೋರಿಕೆ ಸಲ್ಲಿಸಿದ ನಮ್ಮ ಮೆಟ್ರೋ ಪ್ರಯಾಣಿಕರು.

Exit mobile version