Visit Channel

ಪಾದಯಾತ್ರೆಯಿಂದ ಸಮಸ್ಯೆ ಪರಿಹಾರವಾಗುವುದಾದರೆ ನಾನೇ ಮುಂಚೂಣಿಯಲ್ಲಿರುತ್ತೇನೆ – ಹೆಚ್‌ಡಿಕೆ

HD Kumaraswamy

ಬೆಂಗಳೂರು : ಪಾದಯಾತ್ರೆಯಿಂದಾಗಿ ಮೇಕೆದಾಟು ಸನಸ್ಯೆ ಪರಿಹಾರವಾಗುತ್ತದೆ ಎಂದಾದರೆ ನಾನೇ ಎಲ್ಲರಿಗಿಂತ ಮುಂಚೆ ಪಾದಯಾತ್ರೆಗೆ ಭಾಗವಹಿಸುತ್ತೇನೆ ಎಂದು ಹೆಚ್‌ಡಿಕೆ ತಿಳಿಸಿದ್ದಾರೆ.

ಪಕ್ಷದ ಕಚೇರಿ ಜೆಪಿ ಭವನದಲ್ಲಿಂದು ಜನತಾ ಜಲಧಾರೆ” ಕಾರ್ಯಕ್ರಮದಲ್ಲಿ ರಾಜ್ಯವ್ಯಾಪಿ ಜಲ ಸಂಗ್ರಹಕ್ಕೆ ತೆರಳಲಿರುವ ಗಂಗಾ ರಥಯಾತ್ರೆ’ಗೆ ಸಿದ್ಧಪಡಿಸಲಾಗಿದ್ದ ವಾಹನವನ್ನು ಮಾಧ್ಯಮಗಳ ಮುಂದೆ ಅನಾವರಣಗೊಳಿಸಿದ ನಂತರ ಅವರು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ಮೇಕೆದಾಟು ಪಾದಯಾತ್ರೆ ಮೂಲಕ ಆ ಯೋಜನೆಗೆ ಕೇಂದ್ರ ಸರಕಾರ ಒಪ್ಪಿಗೆ ನೀಡುತ್ತದೆ ಎಂದು ಕಾಂಗ್ರೆಸ್ಸಿಗರು ನನಗೆ ಗ್ಯಾರಂಟಿ ಕೊಟ್ಟರೆ ನಾನು ಕೂಡ ಎಲ್ಲರಿಗಿಂತ ಮೊದಲೇ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

ಕಾಂಗ್ರೆಸ್ ಪಕ್ಷದ್ದು ಪಾದಯಾತ್ರೆ ಅಲ್ಲ, ಅದು ಮತಯಾತ್ರೆ ಮಾತ್ರ. ಕೇವಲ ಮುಂದಿನ ಚುನಾವಣೆಯಲ್ಲಿ ಮತ ಪಡೆಯುವ ಏಕೈಕ ಉದ್ದೇಶದಿಂದ ಆ ಪಕ್ಷ ಜನರಿಗೆ ಪಾದಯಾತ್ರೆ ಹೆಸರಿನಲ್ಲಿ ಮಂಕುಬೂದಿ ಎರಚುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.