ಬಡವರನ್ನು ಸುಲಿದು ಬಿಸ್ನೆಸ್ ಕ್ಲಾಸಿನ ಜನರ ಜೇಬು ತುಂಬು ಎನ್ನುವುದು ಬಿಜೆಪಿ ತತ್ವ : ಹೆಚ್.ಡಿಕೆ

BJP

Bengaluru : ವಿದ್ಯುತ್ ಸೋರಿಕೆ, ಕಳವು ತಡೆಲಾಗದ, ನವೀನ ತಂತ್ರಜ್ಞಾನ ಅಳವಡಿಸಿಕೊಳ್ಳದ ರಾಜ್ಯ ಬಿಜೆಪಿ ಸರಕಾರ(HD Kumarswamy slams BJP Govt) ಅದಕ್ಷತೆಯ ಆಡಂಬೋಲ.

ಬಡವರನ್ನು ಸುಲಿದು ಬಿಸ್ನೆಸ್ ಕ್ಲಾಸಿನ ಜನರ ಜೇಬು ತುಂಬು ಎನ್ನುವುದು ಬಿಜೆಪಿ ತತ್ತ್ವ.

ಅದನ್ನೇ ಕರ್ನಾಟಕದಲ್ಲೂ ಎಗ್ಗಿಲ್ಲದೆ ಮಾಡುತ್ತಿದೆ ಎಂದು ಜೆಡಿಎಸ್ ನಾಯಕ(JDS Leader) ಎಚ್.ಡಿ.ಕುಮಾರಸ್ವಾಮಿ(HD Kumarswamy slams BJP Govt) ಅವರು ರಾಜ್ಯ ಬಿಜೆಪಿ(State BJP) ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ : https://vijayatimes.com/amit-shah-targets-bihar/

ಈ ಕುರಿತು ಸರಣಿ ಟ್ವೀಟ್(Tweet) ಮಾಡಿರುವ ಅವರು, ರಾಜ್ಯ ಬಿಜೆಪಿ ಸರಕಾರ ಜನರ ಪರ ಇಲ್ಲ ಎನ್ನುವುದು ಸತ್ಯ. ಜಾಗತಿಕ ಪೇಟೆಯಲ್ಲಿ ಕಚ್ಛಾತೈಲದ ಬೆಲೆ ನಿರಂತರ ಇಳಿದರೂ ದೇಶದಲ್ಲಿ ತೈಲಬೆಲೆ ಇಳಿಸದ ಕೇಂದ್ರದ ಬಿಜೆಪಿ ಸರಕಾರದ ಹಾದಿಯಲ್ಲೇ ರಾಜ್ಯ ಬಿಜೆಪಿ ಸರಕಾರವೂ ಸಾಗಿದೆ.

ವಿದ್ಯುತ್ ದರದ ನಿರಂತರ ಏರಿಕೆ ಬಗ್ಗೆ ಗಂಭೀರ ಅನುಮಾನಗಳಿವೆ. ರಾಜ್ಯದಲ್ಲಿ ಉತ್ತಮ ಮಳೆಯಾಗಿ ಜಲಾಶಯಗಳು ತುಂಬಿವೆ. ವಿದ್ಯುತ್ ಉತ್ಪಾದನೆ ಉತ್ತಮವಾಗಿದೆ. ಆದರೂ ಖರೀದಿ ವೆಚ್ಚದಲ್ಲಿ 1,244 ಕೋಟಿ ರೂ. ಹೆಚ್ಚಳ ಆಗಿದೆ ಎನ್ನುವ ಲೆಕ್ಕವನ್ನು ನಂಬುವ ರೀತಿಯಲ್ಲಿ ಇಲ್ಲ.

ಇದನ್ನೂ ಓದಿ : https://vijayatimes.com/bjp-mp-cleaning-toilet/

ಇಂಧನ ವಲಯದ ಕೆಲ ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ ಎಸ್ಕಾಂಗಳ ಭುಜದ ಮೇಲೆ ಗುಂಡಿಟ್ಟು, ಜನರಿಗೆ ಹೊಡೆಯುವ ಕೆಲಸ ಆಗುತ್ತಿದೆ ಎಂದು ಟೀಕಿಸಿದ್ದಾರೆ. ವಿಧಾನಮಂಡಲ ಅಧಿವೇಶನ ಮುಂದೂಡಿಕೆಯಾದ ಕೂಡಲೇ ವಿದ್ಯುತ್ ದರ ಏರಿಕೆ ಆಗಿದೆ. ಏನೀ ಹುನ್ನಾರ? ನವರಾತ್ರಿಗೆ ಹಬ್ಬದ ಶುಭಾಶಯ ಹೇಳಬೇಕಿದ್ದ ಸರಕಾರ, ಕರೆಂಟ್ ಶಾಕ್ ಕೊಟ್ಟು ಜನರು ಕಂಗೆಡುವಂತೆ ಮಾಡಿದೆ.

ಪ್ರತಿ ಯೂನಿಟ್ಗೆ 24 ರಿಂದ 43 ಪೈಸೆ ಹೆಚ್ಚಿಸಿರುವುದು ಅವೈಜ್ಞಾನಿಕ, ಅನಪೇಕ್ಷಿತ, ಖಂಡನೀಯ. ಇಂಧನ ಹೊಂದಾಣಿಕೆ ಶುಲ್ಕದ ನೆಪದಲ್ಲಿ ರಾಜ್ಯ ಬಿಜೆಪಿ ಸರಕಾರ ವಿದ್ಯುತ್ ದರ ಏರಿಸಿದೆ. ಕಳೆದ ಜುಲೈನಲ್ಲಿ ಬರೆ ಎಳೆದಿತ್ತು.

https://youtu.be/qA8iySF16NI

ಈಗ ಮತ್ತೆ ದರ ಹೆಚ್ಚಿಸಿದೆ. ಕಲ್ಲಿದ್ದಲು(Coal) ಬೆಲೆ ಹೆಚ್ಚಳದಿಂದ ವಿದ್ಯುತ್ ದರವನ್ನೂ ಏರಿಸಲಾಗುತ್ತಿದೆ ಎಂದು ಇಂಧನ ಸಚಿವರು ಹೇಳುವ ಮಾತು ಒಪ್ಪುವ ರೀತಿ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಮಹೇಶ್.ಪಿ.ಎಚ್

Exit mobile version