• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಕೊಲೆಗಡುಕ ಶಕ್ತಿಗಳ ಮುಂದೆ ಸರಕಾರ ಕೋಲೆ ಬಸವನಂತೆ ಆಗಿದೆ : ಹೆಚ್.ಡಿಕೆ

Mohan Shetty by Mohan Shetty
in ರಾಜಕೀಯ, ರಾಜ್ಯ
bjp
0
SHARES
0
VIEWS
Share on FacebookShare on Twitter

ಅಂಕೆಯೇ ಇಲ್ಲದ ಹಂತಕರ ಆಟಕ್ಕೆ ಇತಿಶ್ರೀ ಹಾಡಿ, ಹೆಡೆಮುರಿ ಕಟ್ಟಬೇಕು. ಅದು ಬಿಟ್ಟು ಅಬ್ಬರದ ಹೇಳಿಕೆಗಳಿಂದ ಉಪಯೋಗವೇನು? ಪ್ರತಿ ಕೊಲೆಗೂ(Murder) ಕೋಮು ಬಣ್ಣ ಹಚ್ಚುವ ನಾಯಕರ ರಾಜಕೀಯ ತಲೆಯಲ್ಲಿ ಭಯಂಕರ ದುರುದ್ದೇಶವೇ ಅಡಗಿದೆ.

ಹಿಂಸೆಗೆ ಜಾತಿ, ಧರ್ಮ ಎಂಬುದಿಲ್ಲ. ರಕ್ತಪಿಪಾಸುಗಳಿಗೆ ಮಾನವೀಯತೆ ಇಲ್ಲ. ಕೊಲೆಗೆಡುಕ ಶಕ್ತಿಗಳ ಮುಂದೆ ಸರಕಾರ ಕೋಲೆ ಬಸವನಂತೆ ಆಗಿದೆ. ಈ ಕೊಲೆಗಳ ಹಿಂದಿರುವ ಕಾಣದ ಕೈಗಳಿಗೆ ಕೋಳ ಹಾಕಲು ದೈರ್ಯ ಇಲ್ಲ.

ಈ ಅಸಹಾಯಕತೆಗೆ ಕಾರಣ ಏನು? ಎಂದು ಜೆಡಿಎಸ್‌ ನಾಯಕ(JDS Leader) ಎಚ್.ಡಿ.ಕುಮಾರಸ್ವಾಮಿ(HD Kumarswamy) ಪ್ರಶ್ನಿಸಿದ್ದಾರೆ.

HD Kumarswamy slams bjp


ಈ ಕುರಿತು ಸರಣಿ ಟ್ವೀಟ್‌(Tweet) ಮಾಡಿರುವ ಅವರು, ಶಾಂತಿ, ಸುವ್ಯಸ್ಥೆ ಸಮಸ್ಯೆಯಿಂದ ಆರ್ಥಿಕ ಹಿಂಜರಿತ ಉಂಟಾಗಿ ಕೈಗಾರಿಕೆಗಳು ವಲಸೆ ಹೋದರೆ ಎದುರಾಗುವ ನಿರುದ್ಯೋಗ ಸಮಸ್ಯೆಗೆ ಯಾರು ಹೊಣೆ ಆಗುತ್ತಾರೆ? ನಿರುದ್ಯೋಗವೇ ಇಂಥ ಘಟನೆಗಳಿಗೆ ಕಾರಣ. ಹತಾಶ ಯುವಕರ ಮನಸ್ಸು ಕೆಡಿಸಲಾಗುತ್ತಿದೆ.

ಈ ಬಗ್ಗೆ ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು. ಕರ್ನಾಟವು ಸರ್ವ ಜನಾಂಗದ ಶಾಂತಿಯ ತೋಟ. ಶಾಂತಿ, ಸೌಹಾರ್ದತೆ, ಸಹಿಷ್ಣುತೆಯ ಬೀಡು. ಭಾವನಾತ್ಮಕ ವಿಷಯಗಳಿಂದ ಬಂಡವಾಳ ಹೂಡಿಕೆಯಲ್ಲಿ ಈಗಾಗಲೇ ರಾಜ್ಯಕ್ಕೆ ಹೊಡೆತ ಬಿದ್ದಿದೆ. ಹೊಸ ಕೈಗಾರಿಕೆಗಳು ಬರುತ್ತಿಲ್ಲ ಎಂದಿದ್ದಾರೆ.

ಇದನ್ನೂ ಓದಿ : https://vijayatimes.com/congress-allegation-over-bjp-govt/u003c/strongu003eu003cbru003e

ರಾಜ್ಯದಲ್ಲಿ ಕೆಲ ಸಂಘಟನೆಗಳು ಬಡ ಯುವಕರನ್ನು ದಾರಿ ತಪ್ಪಿಸಿ ಸ್ವಾರ್ಥ ಸಾಧನೆಗಾಗಿ ಸಾವಿನ ದವಡೆಗೆ ದೂಡುತ್ತಿವೆ. ಬಡ ಕುಟುಂಬಗಳ ಜೀವನಾಧಾರವಾಗಿರುವ ಯುವಕರನ್ನು ಬಲಿ ತೆಗೆದುಕೊಳ್ಳುತ್ತವೆ. ಈ ಬಗ್ಗೆ ಯುವಕರು, ಪೋಷಕರು ಎಚ್ಚೆತ್ತುಕೊಳ್ಳಬೇಕು.

Next

ಈ ಮೊದಲು ಕೊಲೆಯಾಗಿದ್ದ ಮಸೂದ್ ಕೂಡ ಬಡವ, ಈಗ ಕೊಲೆಯಾದ ಪ್ರವೀಣ್ ನೆಟ್ಟಾರು(Praveen Nettaru) ಕೂಡ ಬಡ ಕುಟುಂಬದವರೇ. ಶ್ರಮಜೀವಿಗಳ ಕುಟುಂಬದ ಮಕ್ಕಳೇ ಸಾವಿಗೆ ತುತ್ತಾಗುತ್ತಿದ್ದಾರೆ. ರಾಜಕಾರಣಿಗಳು, ಸಂಘಟನೆಗಳ ಮುಖಂಡರ ಮಕ್ಕಳು ಇಂಥ ಗಲಾಟೆಗಳಲ್ಲಿ ಕಾಣೋದೇ ಇಲ್ಲ.

HD Kumarswamy slams bjp - Praveen Nettar
ಪ್ರತಿ ಕೊಲೆ ಆದ ಮೇಲೆಯೂ ಮೈ ಕೊಡವಿಕೊಂಡು ಎದ್ದೇಳುವ ಸರಕಾರ, ಕೊಲೆಯೇ ಆಗದಂತೆ ತಡೆಯುವ ಪ್ರಯತ್ನ ಮಾಡುತ್ತಿಲ್ಲ, ಏಕೆ? ಕೊಲೆಗಳೆಂದರೆ ಕೆಲವರಿಗೇಕೆ ಇಷ್ಟೊಂದು ಇಷ್ಟ? ಚುನಾವಣೆ ಹತ್ತಿರ ಆದಂತೆಲ್ಲ ನೆತ್ತರ ಓಕುಳಿ ಹರಿಯುತ್ತಿದೆ. 

https://vijayatimes.com/siddaramaiah-slams-state-bjp/
ಈ ನೆತ್ತರ ಮೇಲೆ ರಾಜಕೀಯ ಆಟ ವಿಜೃಂಭಿಸುತ್ತಿದೆ. ರಾಜ್ಯದಲ್ಲಿ ಯುವಕರ ಕೊಲೆಗಳ ಸರಣಿಯೇ ಮುಂದುವರಿದಿದ್ದು, ಇನ್ನೊಂದು ಜೀವ ಹೋಗಿದೆ. ಈ ಹತ್ಯಾಕಾಂಡಕ್ಕೆ ಕೊನೆಯೇ ಇಲ್ಲವೇ? 
ಇದನ್ನೂ ಓದಿ : https://vijayatimes.com/nalin-kumar-kateel-statement/u003c/strongu003eu003cbru003e
ಕೊಲೆ ಅದ ಮೇಲೆ ನಡೆಯುವ ಹೇಳಿಕೆಗಳ ಭರಾಟೆ, ಕೂಗಾಟದಿಂದ ಪ್ರಯೋಜನ ಏನು? ಶಿವಮೊಗ್ಗದಲ್ಲಿ ಹರ್ಷ ಕೊಲೆ ಅದ ಮೇಲೆ ಸರಕಾರ ಮೈಮರೆತಿದ್ದು ಯಾಕೆ? ಎಂದು ಪ್ರಶ್ನಿಸಿದ್ದಾರೆ.
Tags: bjpJDSKarnatakapoliticalpolitics

Related News

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 27, 2023
ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು
ಪ್ರಮುಖ ಸುದ್ದಿ

ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು

May 27, 2023
ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?
ಪ್ರಮುಖ ಸುದ್ದಿ

ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?

May 27, 2023
ಶಾಸಕನಲ್ಲದ, ಎಂಎಲ್‌ಸಿಯೂ ಅಲ್ಲದ ಬೋಸರಾಜುಗೆ ಸಚಿವ ಸ್ಥಾನ ; ಜಗದೀಶ್‌ ಶೆಟ್ಟರ್, ಲಕ್ಷ್ಮಣ ಸವದಿ, ಬಿ.ಕೆ.ಹರಿಪ್ರಸಾದ್‌ಗೆ ಕೈ ತಪ್ಪಿದ ಮಂತ್ರಿಗಿರಿ
Featured News

ಶಾಸಕನಲ್ಲದ, ಎಂಎಲ್‌ಸಿಯೂ ಅಲ್ಲದ ಬೋಸರಾಜುಗೆ ಸಚಿವ ಸ್ಥಾನ ; ಜಗದೀಶ್‌ ಶೆಟ್ಟರ್, ಲಕ್ಷ್ಮಣ ಸವದಿ, ಬಿ.ಕೆ.ಹರಿಪ್ರಸಾದ್‌ಗೆ ಕೈ ತಪ್ಪಿದ ಮಂತ್ರಿಗಿರಿ

May 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.