• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಮಕ್ಕಳ ಜೊತೆ ನೀಟ್‌ ಚೆಲ್ಲಾಟ – ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ

Preetham Kumar P by Preetham Kumar P
in Vijaya Time, ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಮಕ್ಕಳ ಜೊತೆ ನೀಟ್‌ ಚೆಲ್ಲಾಟ – ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ
1
SHARES
0
VIEWS
Share on FacebookShare on Twitter

ಬೆಂಗಳೂರು ನ 27: ನೀಟ್‌ ಪರೀಕ್ಷೆಯಲ್ಲಿ ನಿಗದಿತ ಅಂಕ ಬಾರದ ಹಿನ್ನಲೆಯಲ್ಲಿ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕ್ರಣದ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಮ್ಮ ಮಕ್ಕಳ ಜೀವದ ಜತೆ ಚೆಲ್ಲಾಟ ಆಡುತ್ತಿರುವ ನೀಟ್ ಪರೀಕ್ಷೆ ಬಗ್ಗೆ ನಾವು ಮರು ಆಲೋಚನೆ ಮಾಡಬೇಕಿದೆ ಎಂದು ತಿಳಿಸಿದ್ದಾರೆ.ಈಗಾಗಲೇ ತಮಿಳುನಾಡು ಸರಕಾರ ನೀಟ್ ವಿರುದ್ಧ ನಿರ್ಣಯ ಕೈಗೊಂಡಿದೆ. ನಮ್ಮ ಸರಕಾರವೂ ಇಂತಹ ನಿಲುವಿಗೆ ಬರಲಿ.  ರಾಜ್ಯದಲ್ಲಿ ಇನ್ನಷ್ಟು ವಿದ್ಯಾರ್ಥಿಗಳು ಸಂಕಲ್ಪ ಅವರ ಹಾದಿ ಹಿಡಿಯುವುದನ್ನು ತಪ್ಪಿಸಬೇಕು ಎಂದು ಮಾಜಿ ಸಿಎಂ ಹೆಚ್,ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಸರಣಿ ಟ್ವಿಟ್ ಮಾಡಿರುವ ಹೆಚ್.ಡಿ ಕುಮಾರಸ್ವಾಮಿ, ವೈದ್ಯೆ ಆಗಬೇಕು ಎಂದು ಕನಸು ಕಂಡಿದ್ದ ವಿದ್ಯಾರ್ಥಿನಿಯೊಬ್ಬರು ದ್ವಿತೀಯ ಪಿಯುಸಿಯಲ್ಲಿ  ಶೇ.96ರಷ್ಟು ಅಂಕ ಗಳಿಸಿದ್ದರೂ ಅವರಿಗೆ ನೀಟ್ ಪರೀಕ್ಷೆಯಲ್ಲಿ ನಿರೀಕ್ಷಿತ ಅಂಕ ಬಾರದೇ ಸರಕಾರಿ ಸೀಟು ಸಿಗಲಿಲ್ಲ. ಈ ಕಾರಣಕ್ಕೆ ಆ ಹೆಣ್ಣುಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸೊರಬ ತಾಲೂಕಿನ ಚನ್ನಪಟ್ಟಣ ಗ್ರಾಮದ ಸಂಕಲ್ಪ ಎಂಬ ವಿದ್ಯಾರ್ಥಿನಿ ಸಾವಿಗೆ ಶರಣಾಗಿರುವುದು ನನಗೆ ತೀವ್ರ ಆಘಾತ ಉಂಟು ಮಾಡಿದೆ. ಹೀಗೆ ಜೀವವನ್ನು ಕೊನೆ ಮಾಡಿಕೊಂಡ ಆ ಯುವತಿಯ ದುರ್ಮರಣ ಎಲ್ಲರಿಗೂ ಪಾಠ ಆಗಬೇಕಿದೆ ಎಂದು ಹೇಳಿದ್ದಾರೆ.

ನಮ್ಮ ಶಿಕ್ಷಣ ವ್ಯವಸ್ಥೆ ಬದಲಾಗಬೇಕು ಹಾಗೂ ಉನ್ನತ ಶಿಕ್ಷಣ ಬಡ, ಸಾಮಾನ್ಯ ಮಕ್ಕಳಿಗೂ ಸಿಗಬೇಕು ಎನ್ನುವ ಕಾಳಜಿಯ ಜತೆಗೆ, ಯಾರೇ ವಿದ್ಯಾರ್ಥಿಗಳು ಸೀಟು ಸಿಗಲಿಲ್ಲ ಎನ್ನುವ ಕಾರಣಕ್ಕೆ ಸಂಕಲ್ಪ ಅವರಂತೆ ಬದುಕನ್ನು ಕೊನೆ ಮಾಡಿಕೊಳ್ಳಬಾರದು.

ಅವಕಾಶಗಳು ಆಕಾಶದಷ್ಟು ಇವೆ. ಅನೇಕ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಮಾರ್ಗಗಳು ಕೂಡ ಇವೆ. ದೃಢ ಸಂಕಲ್ಪದೊಂದಿಗೆ ಭವಿಷ್ಯ ಕಂಡುಕೊಳ್ಳಬೇಕು. ಯಾವುದೇ ಕಾರಣಕ್ಕೂ ಸಂಕಲ್ಪ ಅವರಂತೆ ಜೀವ ತೆಗೆದುಕೊಳ್ಳಬಾರದು. ಇದು ನನ್ನ ಕಳಕಳಿಯ ಮನವಿ ಎಂದು ಹೆಚ್.ಡಿಕೆ ಮನವಿ ಮಾಡಿದ್ದಾರೆ.

ಪ್ರಕರಣ ಹಿನ್ನಲೆ : ಸೊರಬ: ಎಂಬಿಬಿಎಸ್ ಪದವಿ ಪಡೆದು ವೈದ್ಯೆಯಾಗುವ ಕನಸು ಈಡೇರಲಿಲ್ಲ ಎಂದು ಮನನೊಂದ ವಿದ್ಯಾರ್ಥಿನಿ ಭಾನುವಾರ ರಾತ್ರಿ ತಾಲೂಕಿನ ಚನ್ನಪಟ್ಟಣ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಚಂದ್ರಗುತ್ತಿ ಹೋಬಳಿ ಚನ್ನಪಟ್ಟಣದ ಸಂಕಲ್ಪ ಮೃತ ದುರ್ದೈವಿ.

ದ್ವಿತೀಯ ಪಿಯುಸಿ (ವಿಜ್ಞಾನ) ಯಲ್ಲಿ ಪ್ರತಿಶತ 96 ಅಂಕ ಪಡೆದು ಉತ್ತೀರ್ಣಳಾಗಿದ್ದ ಸಂಕಲ್ಪ ಎಂಬಿಬಿಎಸ್ ಓದಬೇಕು ಎಂದು ಕನಸು ಕಂಡು ಎರಡು ಬಾರಿ ನೀಟ್ ಪರೀಕ್ಷೆ ಬರೆದರೂ ಸರ್ಕಾರಿ ಕೋಟಾದಲ್ಲಿ ಸೀಟು ಸಿಕ್ಕಿರಲಿಲ್ಲ. ಇದೇ ಕಾರಣಕ್ಕೆ ಮನನೊಂದು ಭಾನುವಾರ ರಾತ್ರಿ ಊಟ ಮಾಡಿ ಮಲಗಿದ್ದ ತನ್ನ ಕೋಣೆಯಲ್ಲೇ ನೇಣು ಹಾಕಿಕೊಂಡಿದ್ದಳು.

Related News

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.
ಆರೋಗ್ಯ

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.

March 29, 2023
224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ
ರಾಜಕೀಯ

224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ

March 29, 2023
ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ
ರಾಜಕೀಯ

ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ

March 29, 2023
ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ
ರಾಜಕೀಯ

ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ

March 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.