• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಸಿದ್ದು- ಡಿಕೆಶಿ ಸಹಿ ಮಾಡಿಕೊಟ್ಟ ಕಾರ್ಡುಗಳು ಜನರ ಬಳಿ ಇವೆ, ಆ ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲವೇ? – ಎಚ್ಡಿಕೆ

Teju Srinivas by Teju Srinivas
in Vijaya Time, ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಸಿದ್ದು- ಡಿಕೆಶಿ ಸಹಿ ಮಾಡಿಕೊಟ್ಟ ಕಾರ್ಡುಗಳು ಜನರ ಬಳಿ ಇವೆ, ಆ ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲವೇ? – ಎಚ್ಡಿಕೆ
0
SHARES
120
VIEWS
Share on FacebookShare on Twitter

ಕಾಂಗ್ರೆಸ್ ಗೆ 135 ಸೀಟು ಕೊಟ್ಟ ಜನತೆಯ ‘ಗ್ಯಾರಂಟಿ ಬೇಡಿಕೆ’ಯಲ್ಲಿ ನ್ಯಾಯವಿದೆ. 5 ಗ್ಯಾರಂಟಿ ಜಾರಿ ಕಾಂಗ್ರೆಸ್ (Congress) ಸರಕಾರದ ಜವಾಬ್ದಾರಿ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗುವುದಕ್ಕೆ ಮುನ್ನ ಶ್ರೀ ಸಿದ್ದರಾಮಯ್ಯ , ಶ್ರೀ ಡಿ.ಕೆ.ಶಿವಕುಮಾರ್ ಅವರೇ ಸಹಿ ಮಾಡಿಕೊಟ್ಟ ಕಾರ್ಡುಗಳು ಜನರ ಬಳಿ ಇವೆ. ಆ ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲವೇ? ಎಂದು ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ (H.D.Kumarswamy) ಅವರು ಪ್ರಶ್ನಿಸಿದ್ದಾರೆ.

kumarswamy

ಈ ಕುರಿತು ಸರಣಿ ಟ್ವೀಟ್ (Tweet) ಮಾಡಿರುವ ಅವರು, ‘ಕೆಲ ಸಚಿವರು, ಶಾಸಕ’ರನ್ನು ನನ್ನ ಮೇಲೆ ಛೂ ಬಿಟ್ಟರೆ ಪ್ರಯೋಜನವಿಲ್ಲ. ಅಂಥ ರಾಜಕಾರಣ ಉಪಯೋಗವೂ ಇಲ್ಲ. ಗ್ಯಾರಂಟಿಗಳ ಬಗ್ಗೆ ಜನಕ್ಕೆ ಬೆಟ್ಟದಷ್ಟು ನಿರೀಕ್ಷೆ ಇದೆ. ಜಾರಿ ಮಾಡಿ, ಅದರ ಹೊರತಾಗಿ ಈ ಭರವಸೆಗಳೇ ಅಗಮ್ಯಗೋಚರವಾಗಿ ಗಮ್ಯವೇ ಇಲ್ಲದ ಆಡಳಿತ ಕೊಡುವುದು ಬೇಡ. ಇಷ್ಟೇ ನನ್ನ ಕಾಳಜಿ. ಮಾಧ್ಯಮಗಳಲ್ಲಿ ಕಾಂಗ್ರೆಸ್ (Congress) ಕೊಟ್ಟ ‘ಗ್ಯಾರಂಟಿ ಜಾಹೀರಾತು’ಗಳೂ ಇನ್ನೂ ಜನಮಾನಸದಿಂದ ಮಾಸಿಲ್ಲ. ಅದೇ ರೀತಿ; ಸ್ವತಃ ಮುಖ್ಯಮಂತ್ರಿಗಳೇ ಜೂನ್ 1ಕ್ಕೆ ಜಾರಿ ಮಾಡುವ ಬಗ್ಗೆ ಜಾಹೀರಾತು ನೀಡಿ ಜನರಿಗೆ ಖಾತರಿ ಕೊಡಲಿ. ವಿಳಂಬದಿಂದ ಸರಕಾರದ ವಿಶ್ವಾಸಾರ್ಹತೆಗೆ ಪೆಟ್ಟು ಬೀಳುವುದೇ ಹೆಚ್ಚು. ಜನರಿಗೆ ಅಭದ್ರತೆಯ ಗ್ಯಾರಂಟಿ ಬೇಡವೇ ಬೇಡ ಎಂದಿದ್ದಾರೆ.

ಇನ್ನೊಂದು ಟ್ವೀಟ್ನಲ್ಲಿ, ನನಗೂ ಫ್ರೀ, ನಿನಗೂ ಫ್ರೀ, ಸರ್ವರಿಗೂ ಫ್ರೀ (Free) ಎಂದ ಮುಖ್ಯಮಂತ್ರಿಗಳಿಗೆ ಈಗ ಗ್ಯಾರಂಟಿಗಳ ಬಗ್ಗೆ ದಿವ್ಯಮೌನವೇಕೆ? ಅವರ ಅಕ್ಕಪಕ್ಕದವರ ಹೇಳಿಕೆಗಳನ್ನು ಜನರು ನಂಬುತ್ತಿಲ್ಲ. ಮುಖ್ಯಮಂತ್ರಿಗಳೇ ಜನರಿಗೆ ನೇರವಾಗಿ ಹೇಳಲಿ, ಜನರಲ್ಲಿ ವಿಶ್ವಾಸ ಮೂಡಿಸಲಿ. ದಿನನಿತ್ಯವೂ ಗ್ಯಾರಂಟಿಗಳ ಬಗ್ಗೆ ಜನರಲ್ಲಿ ನಿರೀಕ್ಷೆಯೂ ಮೇರೆ ಮೀರುತ್ತದೆ, ಆಕ್ರೋಶವೂ ಹೆಚ್ಚುತ್ತಿದೆ. ಜನಾಕ್ರೋಶಕ್ಕೆ ಸಬೂಬು ಸರಿಯಲ್ಲ. ಏಕೆಂದರೆ, ನಿರೀಕ್ಷೆ ಮೂಡಿಸಿದ್ದು ಇವರೇ. ಈಗ ಷರತ್ತು ನೆಪದಲ್ಲಿ ಜನರನ್ನು ಸತಾಯಿಸುವುದು ನ್ಯಾಯವಲ್ಲ.ಗ್ಯಾರಂಟಿಗಳ ಬಗ್ಗೆ ಮಾಧ್ಯಮಗಳಲ್ಲಿ ಅಬ್ಬರಿಸಿದ ಇವರೇ, ಈಗ ಮೀನಾಮೇಷ ಎಂದರೆ ಜನ ಒಪ್ಪುವರೇ? ಎಂದು ಪ್ರಶ್ನಿಸಿದ್ದಾರೆ.

Tags: CongressKarnatakapolitics

Related News

ನಿಂಬೆ ಹಣ್ಣನ್ನು ಈ ಆಹಾರಗಳ ಜೊತೆ ಅಪ್ಪಿತಪ್ಪಿಯೂ ಬಳಸಬೇಡಿ..!
ಆರೋಗ್ಯ

ನಿಂಬೆ ಹಣ್ಣನ್ನು ಈ ಆಹಾರಗಳ ಜೊತೆ ಅಪ್ಪಿತಪ್ಪಿಯೂ ಬಳಸಬೇಡಿ..!

September 26, 2023
ಬಿಗ್‌ ಶಾಕ್: 18ಕ್ಕೂ ಹೆಚ್ಚು ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳಲ್ಲಿ ವಾಟ್ಸಾಪ್‌ ಸ್ಥಗಿತ ವಿವರ ಇಲ್ಲಿದೆ.
ಡಿಜಿಟಲ್ ಜ್ಞಾನ

ಬಿಗ್‌ ಶಾಕ್: 18ಕ್ಕೂ ಹೆಚ್ಚು ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳಲ್ಲಿ ವಾಟ್ಸಾಪ್‌ ಸ್ಥಗಿತ ವಿವರ ಇಲ್ಲಿದೆ.

September 26, 2023
ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ
ದೇಶ-ವಿದೇಶ

ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ

September 26, 2023
ಹಿರಿಯ ನಟಿ ವಹೀದಾ ರೆಹಮಾನ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
ದೇಶ-ವಿದೇಶ

ಹಿರಿಯ ನಟಿ ವಹೀದಾ ರೆಹಮಾನ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

September 26, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.