Mandya: ಲೋಕಸಭಾ ಚುನಾವಣೆಯ ಹಿನ್ನೆಲೆ ಬಿಜೆಪಿಯ (HDK against BJP-JDS Alliance) ನಡೆಯಿಂದ ಕುಮಾಸ್ವಾಮಿ ಅಸಮಾಧಾನ ಹೊಂದಿದ್ದಾರೆ ಎಂಬ ಗಾಳಿ ಸುದ್ದಿ ಎಲ್ಲೆಡೆ
ಪ್ರಸಾರವಾಗುತ್ತಿದ್ದ ಕಾರಣ ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಸಹಜವಾದ ಮೈತ್ರಿ. ರಾಜ್ಯದ ಅಭಿವೃದ್ಧಿಗಾಗಿ ಮೈತ್ರಿ (HDK against BJP-JDS Alliance) ನಿರ್ಧಾರ ಮಾಡಲಾಗಿದೆ. ಎರಡೂ ಪಕ್ಷಗಳ
ನಡುವಿನ ಹೊಂದಾಣಿಕೆ ಹಾಲು-ಜೇನಿನಂತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾಸ್ವಾಮಿ (H D Kumaraswamy) ತಿಳಿಸಿದ್ದಾರೆ.
ನಿನ್ನೆ ಜೆಡಿಎಸ್ (JDS)-ಬಿಜೆಪಿ ಸಮನ್ವಯ ಸಮಿತಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಹಿಂದೆ ಬಿಜೆಪಿ ಜೊತೆ ಸರ್ಕಾರ ಮಾಡಿದ ದಿನದಿಂದ ಜೆಡಿಎಸ್ ಮುಗಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ.
ನಾನು ಕೊಟ್ಟ 20 ತಿಂಗಳ ಆಡಳಿತವನ್ನು ಜನರು ಇಂದಿಗೂ ನೆನೆಯುತ್ತಿದ್ದಾರೆ. ಹಾಗಾಗಿ ಕಾಂಗ್ರೆಸ್ (Congress) ಏನೇ ಕುತಂತ್ರ ಮಾಡಿದರೂ ಜೆಡಿಎಸ್ ಮುಗಿಸಲು ಆಗಲ್ಲ ಎಂದಿದ್ದಾರೆ.
ಈಗಲೂ ಜೆಡಿಎಸ್-ಬಿಜೆಪಿ ಮೈತ್ರಿ ಸರ್ಕಾರವಿದ್ದಾಗ ಅಧಿಕಾರ ಹಸ್ತಾಂತರ ಮಾಡಲಿಲ್ಲ ಎಂಬ ಆರೋಪವನ್ನು ನನ್ನ ಮೇಲೆ ಮಾಡುತ್ತಾರೆ. ನಾನು ಮಾಡದಿರುವ ತಪ್ಪನ್ನು ನನ್ನ ತಲೆ ಮೇಲೆ ಹೊತ್ತಿದ್ದೇನೆ.
ಹಾಗಾಗಿ 17 ವರ್ಷ ವನವಾಸ ಅನುಭವಿಸಿದ್ದೇನೆ.ಮೈತ್ರಿ ಹೆಸರಿನಲ್ಲಿ ಕಾಂಗ್ರೆಸ್ ನಮ್ಮ ಬೆನ್ನಿಗೆ ಚೂರಿ ಹಾಕಿತು ಅದನ್ನೆಲ್ಲ ನೋಡಿ ಹೈರಾಣಾಗಿ ಹೋಗಿದ್ದೇನೆ . ಕಾಂಗ್ರೆಸ್ ಅಧಿಕಾರಕ್ಕೆ ಬರಲಿಕ್ಕೆ ಕಾರಣ ಅವರ
ಶಕ್ತಿ ಅಲ್ಲ. ಜೆಡಿಎಸ್-ಬಿಜೆಪಿ ಹೊಂದಾಣಿಕೆಯಾಗದೆ ನಮ್ಮ ನಡುವೆಯೇ ಉಂಟಾದ ಪೈಪೋಟಿ ಅವರಿಗೆ ಲಾಭವಾಗಿದೆ. ಕಾಂಗ್ರೆಸ್ ಆಕಸ್ಮಿಕವಾಗಿ ಅಸ್ತಿತ್ವಕ್ಕೆ ಬಂದಿರುವ ಸರ್ಕಾರ ಎಂದು ವ್ಯಂಗ್ಯವಾಡಿದ್ದಾರೆ.
ರಾಜ್ಯಕ್ಕೆ ಸುಭದ್ರ ಸರ್ಕಾರದ ಅವಶ್ಯಕತೆ ಇದೆ. ಈ ಚುನಾವಣೆ ನಂತರ ಮುಂದಿನ ಡಿಸೆಂಬರ್ (December) ತಿಂಗಳ ಒಳಗೆ ಸರ್ಕಾರ ಪತನವಾಗಲಿದೆ. ಸರ್ಕಾರ ಬೀಳಿಸುವುದಕ್ಕೆ ನಾವು ವಿಜಯೇಂದ್ರ
ಕಷ್ಟಪಡಬೇಕಿಲ್ಲ. ಅವರೇ ಅವರ ಸರ್ಕಾರವನ್ನು ಬೀಳಿಸಿಕೊಳ್ಳುತ್ತಾರೆ . ಅವರಲ್ಲಿ ಒಗ್ಗಟ್ಟಿಲ್ಲ ಹಾಗಾಗಿ ಇನ್ನು ಕೆಲವೇ ದಿನಗಳಲ್ಲಿ ಅಸಲಿ ಆಟ ಶುರುವಾಗಲಿದೆ ಎಂದಿದ್ದಾರೆ.
ಇದನ್ನು ಓದಿ: ಅಮೇಥಿ, ರಾಯ್ ಬರೇಲಿಯಿಂದ ಸ್ಪರ್ಧಿಸಲು ಗಾಂಧಿ ಕುಟುಂಬ ನಿರಾಸಕ್ತಿ