• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಸರಕಾರ ಪ್ರತೀ ಕೊಲೆಗೂ ತಾನೇ ಮುಂದೆ ನಿಂತು ಟ್ವಿಸ್ಟ್ ನೀಡುತ್ತಿದೆ : ಹೆಚ್.ಡಿ.ಕೆ

Mohan Shetty by Mohan Shetty
in ರಾಜಕೀಯ, ರಾಜ್ಯ
bjp
0
SHARES
0
VIEWS
Share on FacebookShare on Twitter

ಕರಾವಳಿಯಲ್ಲಿ ನೆಮ್ಮದಿ ನೆಲಸಬೇಕಾದರೆ, ಪೊಲೀಸ್(Police) ವ್ಯವಸ್ಥೆಗೆ ಶಕ್ತಿ ತುಂಬಬೇಕು. ಕಾಣದ ಕೈಗಳ ಸಂಕೋಲೆಯಿಂದ ಇಲಾಖೆಯನ್ನು ಮುಕ್ತಗೊಳಿಸಿ ಅಧಿಕಾರಿಗಳು ಸ್ವತಂತ್ರವಾಗಿ ಕರ್ತವ್ಯ ನಿರ್ವಹಿಸುವ ವಾತಾವರಣ ನಿರ್ಮಿಸಬೇಕು.

ಇಲ್ಲವಾದರೆ, ಡಬಲ್ ಎಂಜಿನ್(Double Engine) ಸರಕಾರಕ್ಕೆ ಜನರೇ ಬೆಂಕಿ ಹಾಕಿಯಾರು. ಕೊಲೆಗಳ ಹಿಂದಿನ ಕಾರಣ ಬೇಧಿಸಿ ಕೊಲೆಗಡುಕರನ್ನು ಹತ್ತಿಕ್ಕುವ ಕೆಲಸ ಮಾಡಬೇಕಿದ್ದ ಸರಕಾರ, ಪ್ರತೀ ಕೊಲೆಗೂ ತಾನೇ ಮುಂದೆ ನಿಂತು ಹೊಸಹೊಸ ಟ್ವಿಸ್ಟ್ ನೀಡುತ್ತಿದೆ.

HDK allegation over bjp govt

ಸರಕಾರದ ಕೆಲಸ ಬಿಗಿ ಆಡಳಿತ ನಡೆಸುವುದೇ ಹೊರತು, ಬೀದಿಯಲ್ಲಿ ನಿಂತು ಗಂಟಲು ಹರಿದುಕೊಳ್ಳುವುದಲ್ಲ ಎಂದು ಜೆಡಿಎಸ್‌ ನಾಯಕ(JDS Leader) ಎಚ್.ಡಿ.ಕುಮಾರಸ್ವಾಮಿ(HD Kumarswamy) ಟೀಕಿಸಿದ್ದಾರೆ.

ಕರಾವಳಿಯಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳ(Murder) ಕುರಿತು ಟ್ವೀಟ್‌(Tweet) ಮಾಡಿರುವ ಅವರು, ಮಸೂದ್, ಪ್ರವೀಣ್ ನೆಟ್ಟಾರು, ಈಗ ಫಾಸಿಲ್. ಇನ್ನೆಷ್ಟು ಕೊಲೆಗಳು ನಡೆದರೆ ಸರಕಾರಕ್ಕೆ ತೃಪ್ತಿ? ಸರಣಿ ಕೊಲೆಗಳಿಂದ ಕರಾವಳಿಗೆ ಮಾತ್ರವಲ್ಲ, ಕರ್ನಾಟಕದ ಪ್ರತಿಷ್ಠೆಗೆ ಪೆಟ್ಟು ಬಿದ್ದಿದೆ. ಇಡೀ ಕರಾವಳಿಯ ಆರ್ಥಿಕತೆಯೇ ಬುಡಮೇಲಾಗುತ್ತಿದೆ.

Next
https://fb.watch/eycYR4FvjA/u003c/strongu003eu003cbru003e

ಆದರೆ, ಸರಕಾರ ಸಾವಿನಲ್ಲೂ ಕೊಲೆಗೆಡುಕ ರಾಜಕಾರಣʼ ಮಾಡುತ್ತಿದೆ. ಮನೆ, ಮನಗಳಲ್ಲಿ ಮಾತ್ರ ಇರಬೇಕಿದ್ದ ಧರ್ಮವನ್ನು ವ್ಯಸನʼವನ್ನಾಗಿಸಿ ಕೈಗೆ ದೊಣ್ಣೆ, ಶೂಲ ಕೊಟ್ಟು ಯುವಕರ ನಿಷ್ಕಲ್ಮಶ ಮುಗ್ಧಮನಸ್ಸಿಗೆ `ಕೋಮುಪ್ರಾಷನʼ ಮಾಡಿದ ದುಷ್ಪರಿಣಾಮವೇ ಸರಣಿ ಕೊಲೆಗಳು.

https://vijayatimes.com/adhir-ranjan-chowdhary-slips-tongue/

ಧರ್ಮನಿರಪೇಕ್ಷತೆ ತತ್ವವನ್ನು ನಿರ್ನಾಮ ಮಾಡಿದ್ದೇ ಇದಕ್ಕೆಲ್ಲ ಮೂಲ ಕಾರಣ. ಕರಾವಳಿ ಶಿಕ್ಷಣದ ಕಾಶಿ, ದೇಗುಲಗಳ ಪುಣ್ಯನೆಲ, ಪ್ರಾಕೃತಿಕ ಸೌಂದರ್ಯದ ಬೀಡು, ಪ್ರವಾಸೋದ್ಯಮದಲ್ಲಿ ಕರ್ನಾಟಕದ ಕೀರ್ತಿಕಳಸ. ಇಂಥ ನೆಲದಲ್ಲಿ ದಿನಕ್ಕೊಂದು ಕೊಲೆ.

HDK allegation over bjp govt
ಈ ಕೊಲೆಗಳನ್ನು ಹತ್ತಿಕ್ಕುವ ಬದಲು ಬೊಮ್ಮಾಯಿ ಅವರು `ಬುಲ್ಡೋಜರ್ʼ ಬಗ್ಗೆ ಮಾತನಾಡುತ್ತಿದ್ದಾರೆ. ಕರಾವಳಿ ಹಾಗೂ ಕರ್ನಾಟಕವನ್ನು `ಜಂಗಲ್ ರಾಜ್ʼ ಮಾಡುವ ಹುನ್ನಾರವಷ್ಟೇ ಇದು ಎಂದಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿ(Basavaraj Bommai) ಅವರು ಮಂಗಳೂರಿನಲ್ಲಿ ಇದ್ದಾಗಲೇ 3ನೇ ಕೊಲೆ ಆಗಿದೆ.
 ಅಷ್ಟರಲ್ಲಿ ಸಿಎಂ ಸಾಹೇಬರು ಜಿಲ್ಲೆಯಿಂದ ಕಾಲ್ಕಿತ್ತಿದ್ದಾರೆ. ಅಲ್ಲೇ ಉಳಿದು ಪರಿಸ್ಥಿತಿ ಅವಲೋಕಿಸಿ, ಕೊಲೆಗಡುಕರನ್ನು ಹಡೆಮುರಿ ಕಟ್ಟುವಂತೆ ಕಟ್ಟಾಜ್ಞೆ ಮಾಡುವ ಧೈರ್ಯವನ್ನು ತೋರಲಿಲ್ಲ. ಅವರ ಅಧೈರ್ಯಕ್ಕೆ ಕಾರಣವೇನು? ಕಾಣದ ಕೈಗಳ ಒತ್ತಡವೇನಾದರೂ ಉಂಟಾ? 
https://fb.watch/ey59bzib74/u003c/strongu003eu003cbru003e
ಶಿಕ್ಷಣ, ಬ್ಯಾಂಕಿಂಗ್, ಕೈಗಾರಿಕೆ, ಸೃಜನಶೀಲತೆ, ಉದ್ಯಮಶೀಲತೆ ತವರು ಕರಾವಳಿ ಈಗ ಕೊಲೆಗಳ ಆಡಂಬೋಲವಾಗಿದೆ. 10 ದಿನಗಳಲ್ಲಿ 3 ಕೊಲೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ, ಆಂತರಿಕ ಭದ್ರತೆ ಸಂಪೂರ್ಣವಾಗಿ ಕುಸಿದಿರುವುದಕ್ಕೆ ಇದೇ ಸಾಕ್ಷಿ ಎಂದು ಟೀಕಿಸಿದ್ದಾರೆ.
Tags: bjpJDSKarnatakapoliticalpolitics

Related News

2023ನೇ ಸಾಲಿನ ಭಾರತದ ಟಾಪ್ 20 ಸ್ಟಾರ್ಟ್ಅಪ್ಗಳ ಪಟ್ಟಿ ಪ್ರಕಟ
ಪ್ರಮುಖ ಸುದ್ದಿ

2023ನೇ ಸಾಲಿನ ಭಾರತದ ಟಾಪ್ 20 ಸ್ಟಾರ್ಟ್ಅಪ್ಗಳ ಪಟ್ಟಿ ಪ್ರಕಟ

September 28, 2023
13 ಅರಣ್ಯ ವೃತ್ತಗಳಲ್ಲಿ ಅರಣ್ಯ ವೀಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ : ಇಲ್ಲಿದೆ ಮಾಹಿತಿ
ಪ್ರಮುಖ ಸುದ್ದಿ

13 ಅರಣ್ಯ ವೃತ್ತಗಳಲ್ಲಿ ಅರಣ್ಯ ವೀಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ : ಇಲ್ಲಿದೆ ಮಾಹಿತಿ

September 28, 2023
ಕರ್ನಾಟಕ ಬಂದ್ ಗೆ ಅವಕಾಶ ನೀಡುವುದಿಲ್ಲ – ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ
ಪ್ರಮುಖ ಸುದ್ದಿ

ಕರ್ನಾಟಕ ಬಂದ್ ಗೆ ಅವಕಾಶ ನೀಡುವುದಿಲ್ಲ – ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ

September 28, 2023
ಕರ್ನಾಟಕ ವಿವಿ : 2023ರ ಪ್ರವಾಸೋದ್ಯಮ ಕೋರ್ಸ್ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
ಜಾಬ್ ನ್ಯೂಸ್

ಕರ್ನಾಟಕ ವಿವಿ : 2023ರ ಪ್ರವಾಸೋದ್ಯಮ ಕೋರ್ಸ್ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

September 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.