ಇನ್ನೆಷ್ಟು ಜನರು ರಸ್ತೆಗಳ ಮೇಲೆಯೇ ಜೀವ ಕಳೆದುಕೊಳ್ಳಬೇಕು? : ಹೆಚ್.ಡಿ.ಕೆ

hdk

ರಾಜ್ಯದಲ್ಲಿ(State) ಇನ್ನೆಷ್ಟು ಆಂಬುಲೆನ್ಸ್(Ambulance) ದುರಂತಗಳು ಆಗಬೇಕು? ಇನ್ನೆಷ್ಟು ಜನರು ರಸ್ತೆಗಳ ಮೇಲೆಯೇ ಜೀವ ಕಳೆದುಕೊಳ್ಳಬೇಕು? ಶಿರೂರು ಟೋಲ್(Shiroor Toll) ಬಳಿ ಸಂಭವಿಸಿದ ಭೀಕರ ಅಪಘಾತದಿಂದ ರಾಜ್ಯ ಸರಕಾರ(State Government) ಕಣ್ತೆರೆಯಲೇಬೇಕು. ಕೋವಿಡ್(Covid 19) ವೇಳೆ ಎಲ್ಲ ಸಮುದಾಯ ಕೇಂದ್ರ, ತಾಲೂಕು, ಜಿಲ್ಲಾ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುತ್ತೇವೆ ಎಂದು ಅಬ್ಬರಿಸಿ ಬೊಬ್ಬಿರಿದ ಸರಕಾರ, ಕೋವಿಡ್ ಇಳಿದ ಮೇಲೆ ತಣ್ಣಗಾಗಿದೆ. ಆಕ್ಸಿಜನ್ ಘಟಕ, ವೆಂಟೆಲೇಟರ್ ಸೇರಿ ಖರೀದಿ ಮಾಡಿದ ವೈದ್ಯ ಪರಿಕರಗಳೆಲ್ಲ ಅನೇಕ ಕಡೆ ಧೂಳು ತಿನ್ನುತ್ತಿವೆ.

ಕೆಲವೆಡೆ ಮಾತ್ರ ಸುಸಜ್ಜಿತ ಆಸ್ಪತ್ರೆಗಳಿವೆ(Hospitals). ಬಹುತೇಕ ಜಿಲ್ಲೆಗಳಲ್ಲಿ ಇಲ್ಲ. ತುರ್ತು(Emergency) ಚಿಕಿತ್ಸೆ ಬೇಕೆಂದರೆ, ಬೆಂಗಳೂರು, ಹುಬ್ಬಳ್ಳಿ, ಮಂಗಳೂರು, ಮೈಸೂರು, ಬೆಳಗಾವಿಯಂಥ ಕೆಲವಷ್ಟೇ ನಗರಗಳಲ್ಲಿ ಮಾತ್ರ ಲಭ್ಯವಿದೆ. ಜನ ಹೋಗುವುದು ಹೇಗೆ? ಆರೋಗ್ಯ ಸೌಲಭ್ಯದಲ್ಲಿ ಅಸಮಾನತೆ ರಾಜ್ಯಕ್ಕೆ ಭೂಷಣವಲ್ಲ ಎಂದು ಜೆಡಿಎಸ್‌ ನಾಯಕ(JDS Leader) ಎಚ್.ಡಿ.ಕುಮಾರಸ್ವಾಮಿ(HD Kumarswamy) ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಆರೋಗ್ಯ ಸೌಲಭ್ಯ ಕಲ್ಪಿಸುವುದರ ಜತೆಗೆ ಇರುವ ವ್ಯವಸ್ಥೆಯ ಸಮರ್ಪಕ ನಿರ್ವಹಣೆ ಸರಕಾರದ ಹೊಣೆ.

ಆರೋಗ್ಯ(Health) ಎಲ್ಲರ ಹಕ್ಕು. ನಾನು ರೂಪಿಸಿರುವ ಪಂಚರತ್ನ ಕಾರ್ಯಕ್ರಮದಲ್ಲಿ ಆರೋಗ್ಯವೂ ಪ್ರಮುಖ ಕಾರ್ಯಕ್ರಮ. ಜನತೆಗೆ ಅತ್ಯುತ್ತಮ ಆರೋಗ್ಯ ಸೌಲಭ್ಯ ಕೊಡುವುದು ನನ್ನ ಗುರಿ ಎಂದು ತಿಳಿಸಿದ್ದಾರೆ. ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ(Basavaraj Bommai) ಮತ್ತು ಆರೋಗ್ಯ ಸಚಿವ ಶ್ರೀ ಸುಧಾಕರ್‌(Dr Sudhakar) ಅವರೇ ಖುದ್ದು ಕ್ರಮ ವಹಿಸಬೇಕು ಎಂಬುದು ನನ್ನ ಆಗ್ರಹ. ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗಾಗಿ ಉತ್ತರ ಕನ್ನಡ(UttaraKannada) ಜಿಲ್ಲೆಯ ಜನರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಪರಿಪೂರ್ಣ ಬೆಂಬಲವಿದೆ ಮತ್ತು ಹೋರಾಟದಲ್ಲಿ ನಮ್ಮ ಪಕ್ಷವೂ ನಿಲ್ಲುತ್ತದೆ.

ವರ್ಷಗಳ ಕಾಲದ ನ್ಯಾಯಯುತವಾದ ಈ ಬೇಡಿಕೆಯನ್ನು ರಾಜ್ಯ ಸರಕಾರ ಆದ್ಯತೆಯ ಮೇರೆಗೆ ಈಡೇರಿಸಬೇಕು ಎಂದು ಆಗ್ರಹಿಸಿದ್ದಾರೆ.

Exit mobile version