ಆ ಪದ ಬಳಕೆ ನನ್ನ ಜಾಯಮಾನವಲ್ಲ, ನನ್ನ ವ್ಯಕ್ತಿತ್ವವೂ ಅಲ್ಲ, ಆ ಮಾತನ್ನು ಹಿಂಪಡೆಯುತ್ತೇನೆ : ಹೆಚ್.ಡಿಕೆ

Bengaluru : ಮಾಜಿ ಸ್ಪೀಕರ್ ಶ್ರೀ ರಮೇಶ್ ಕುಮಾರ್(HDK Apology To Ramesh) ಬಗ್ಗೆ ನಾನು ಬಳಸಿದೆ ಎನ್ನಲಾದ ಪದ ಸ್ವತಃ ನನಗೂ ನೋವುಂಟು ಮಾಡಿದೆ.

ಆ ಪದ ಬಳಕೆ ನನ್ನ ಜಾಯಮಾನವಲ್ಲ, ನನ್ನ ವ್ಯಕ್ತಿತ್ವವೂ ಅಲ್ಲ.

ಈ ಮಾತಿನಿಂದ ರಮೇಶ್ ಕುಮಾರ್ ಅವರಿಗಾಗಲಿ, ಇನ್ನಾರಿಗೆ ಆಗಲಿ ನೋವಾಗಿದ್ದರೆ ನನ್ನ ವಿಷಾದವಿದೆ.

ಆ ಮಾತನ್ನು ಹಿಂಪಡೆಯುತ್ತೇನೆ ಎಂದು ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ(HD Kumarswamy) ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ನಿನ್ನೆಯ ದಿನ ಶ್ರೀನಿವಾಸಪುರ ವಿಧಾನಸಭೆ ಕ್ಷೇತ್ರದ ಬಂಗವಾದಿ ಗ್ರಾಮದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಶಾಲೆ ಕಂಡು ನನಗೆ ಬಹಳ ಬೇಸರವಾಗಿತ್ತು.

ಮಕ್ಕಳು 2-3 ವರ್ಷದಿಂದ ಎದುರಿನ ಅಶ್ವತ್ಥಕಟ್ಟೆ ಮೇಲೆ ಪಾಠ ಕೇಳುತ್ತಿದ್ದರು ಎಂದು ಕೇಳಿ ನನ್ನಲ್ಲಿ ಆಕ್ರೋಶ ಉಂಟಾಗಿತ್ತು. 

ಇದನ್ನೂ ಓದಿ : https://vijayatimes.com/karnataka-maharashtra-border-issue/

ಈ ಆಕ್ರೋಶದ ಹಿನ್ನೆಲೆಯಲ್ಲಿ ಮಾತನಾಡುವ ಭರದಲ್ಲಿ ಹಾಗೆ ಮಾತನಾಡಿದ್ದೇನೆ ಹೊರತು, ಯಾರಿಗೂ ಅಪಮಾನ ಮಾಡುವುದಕ್ಕೆ ಅಲ್ಲ. ಮಕ್ಕಳ ಕಣ್ಣೀರು ನನ್ನ ಸಿಟ್ಟಿಗೆ ಕಾರಣವಾಯಿತು ಎಂದು ಮತ್ತೊಮ್ಮೆ ಸ್ಪಷ್ಟಪಡಿಸುತ್ತೇನೆ ಎಂದು ಹೇಳಿದ್ದಾರೆ.

ಇದಕ್ಕೂ ಮುನ್ನ  ಕೋಲಾರ(Kolar) ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಕರೆ ಮಾಡಿ,

ಕೂಡಲೇ ಬಂಗವಾದಿ ಶಾಲೆಗೆ ಹೊಸ ಕಟ್ಟಡ ಕಟ್ಟಿಸಿಕೊಡಬೇಕಾಗಿ ಸೂಚಿಸಿದ್ದೇನೆ. ಸ್ಥಳದಿಂದಲೇ ದೂರವಾಣಿಯಲ್ಲಿ ಮಾಡಿದ ಒತ್ತಾಯಕ್ಕೆ ಶಿಕ್ಷಣ ಸಚಿವರಾದ ಶ್ರೀ ಬಿ.ಸಿ.ನಾಗೇಶ್(BC Nagesh) ಅವರು ಸ್ಪಂದಿಸಿದ್ದು, ಆದಷ್ಟು ಬೇಗ ಬಂಗವಾದಿ ಗ್ರಾಮದ ಶಾಲೆಗೆ ನೂತನ ಕಟ್ಟಡ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದರು.

https://twitter.com/hd_kumaraswamy/status/1595307227921121280?s=20&t=RgLZz3bOfVFSeqdmr_bQ1Q

ಹಠ ಬಿಡದೇ ನನ್ನನ್ನು ಆ ಶಿಥಿಲವಾಗಿರುವ ಶಾಲೆಗೆ ಕರೆದುಕೊಂಡು ಹೋಗಿ, ಅಲ್ಲಿನ ದುಸ್ಥಿತಿಯ ದರ್ಶನ ಮಾಡಿಸಿದರು. ಕಳೆದ ಎರಡು-ಮೂರು ವರ್ಷಗಳಿಂದ ಎದುರಿನ ಅಶ್ವತ್ಥಕಟ್ಟೆ ಮೇಲೆ ಶಿಕ್ಷಕರು ಪಾಠ ಮಾಡುತ್ತಿದ್ದಾರೆ ಎಂದು ಹೇಳುತ್ತಾ ಕಣ್ಣೀರು ಹಾಕಿದರು. ಪಂಚರತ್ನ ರಥಯಾತ್ರೆ ವೇಳೆ ಎದುರಾದ ಈ ಘಟನೆಯಿಂದ ನನಗೆ ಬಹಳ ನೋವಾಗಿದೆ.

https://twitter.com/hd_kumaraswamy/status/1595307231159148544?s=20&t=RgLZz3bOfVFSeqdmr_bQ1Q

ಯಾತ್ರೆಯು ಶ್ರೀನಿವಾಸಪುರ ವಿಧಾನಸಭೆ ಕ್ಷೇತ್ರದಲ್ಲಿ ಸಾಗುವಾಗ ಬಂಗವಾದಿ ಗ್ರಾಮದ ಸರಕಾರಿ ಶಾಲೆ ಮಕ್ಕಳು ಶಾಲಾ ಕಟ್ಟಡಕ್ಕಾಗಿ ಕಣ್ಣೀರಿಟ್ಟರು, ರಸ್ತೆಯಲ್ಲಿ ಅಡ್ಡಗಟ್ಟಿದರು ಎಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ.

Exit mobile version