Bengaluru: ಟೀಮ್ ಯಾವ ಪಕ್ಷ ಎಂಬ ಬಹಿರಂಗ ಚರ್ಚೆಗೆ ನಾನು ಸಿದ್ದ. ವಿಧಾನಸೌಧದ(Vidhanasoudha) ಮುಂದೆಯೇ ಚರ್ಚೆ ನಡೆಯಲಿ. ನಿಮ್ಮ ಸಿದ್ದಪುರಷರ(HDK challenge to congress) ಜತೆ ನೀವೂ ಬನ್ನಿ.
ಸಮಯ, ದಿನಾಂಕ ನಾನು ನಿಗದಿ ಮಾಡಲಾ? ಅಥವಾ ನೀವು ಮಾಡುತ್ತೀರಾ? ಉತ್ತರಕ್ಕೆ ಕಾಯುತ್ತಿರುತ್ತೇನೆ ಎಂದು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ(HD Kumaraswamy) ಅವರು ಕಾಂಗ್ರೆಸ್ ನಾಯಕರಿಗೆ ಬಹಿರಂಗ ಸವಾಲು ಹಾಕಿದ್ದಾರೆ.

ಈ ಕುರಿತು ಸರಣಿ ಟ್ವೀಟ್(Tweet) ಮಾಡಿರುವ ಅವರು, ಬಿ ಟೀಮ್ ಭಾಗವತಿಕೆ ಇಲ್ಲಿಗೇ ನಿಲ್ಲಿಸಿದರೆ ಉತ್ತಮ.ಇಲ್ಲವಾದರೆ ಮುಂದಿನ ಪರಿಣಾಮಗಳಿಗೆ ನೀವೇ ಹೊಣೆ.
ರಾಜ್ಯದಲ್ಲಿ ಜಾತ್ಯತೀತ ಶಕ್ತಿಗಳು ದುರ್ಬಲವಾದರೆ ಆ ಪಾಪಕ್ಕೂ ನೀವೇ ಹೊಣೆ. ಇಡೀ ರಾಜ್ಯವನ್ನೇ ಕೋಮುದಳ್ಳುರಿಯಲ್ಲಿ ಬೇಯುವಂತೆ ಮಾಡಿದ ಬಿಜೆಪಿ ಸರಕಾರ ಬರಲು ಮೂಲ ಕಾರಣಕರ್ತರೇ ನಿಮ್ಮ ಶಾಸಕಾಂಗ ಪಕ್ಷದ ನಾಯಕರು.
ಅಪರೇಷನ್ ಕಮಲವೆಂಬ ಕೆಟ್ಟ ಕೊಳಕು ರಾಜಕೀಯಕ್ಕೆ ‘ ಸಿದ್ದಪುರುಷ ‘ ರೂ ಇವರೇ. ಈಗ ಹೇಳಿ, ಬಿಜೆಪಿ(BJP) ಬಿ ಟೀಮ್ ಯಾವ ಪಕ್ಷ? ಅದರ ಕ್ಯಾಪ್ಟನ್ ಯಾರು? ಎಂದು.
ಧರ್ಮಸ್ಥಳದ(Dharmasthala) ಸಿದ್ದವನ, ಕಾವೇರಿ ನಿವಾಸದಲ್ಲಿ ನನ್ನ ವಿರುದ್ಧ ಹಾಗೂ ನಿಮ್ಮ ಕೇಂದ್ರ ನಾಯಕರೇ ರಚಿಸಿದ ಮೈತ್ರಿ ಸರಕಾರ ಕೆಡವಲು ಮಹೂರ್ತ ಇಟ್ಟವರು ಯಾರು? 2018ರಲ್ಲಿ ನಿಮ್ಮವರೇ ನಮ್ಮ ಮನೆಗೆ ಬಂದು ಗೋಗರೆದು ಮೈತ್ರಿ ಸರಕಾರ ಮಾಡಿದರು.
ಆಮೇಲೆ, ಶುರುವಾಗಿದ್ದೇ ಕುತ್ಸಿತ ರಾಜಕಾರಣ. ಬಾಂಬೆಗೆ ಹೋದವರ ಬೆನ್ನ ಹಿಂದೆ ಇದ್ದ ಆ ನಿಗೂಢ ಬೇತಾಳ ಯಾವುದು? ನಿಮ್ಮ ಶಾಸಕಾಂಗ ಪಕ್ಷದ ನಾಯಕರು ಮಾಡಿದ್ದೇನು?
ಇಷ್ಟೆಲ್ಲಾ ಮಾತೃಪಕ್ಷ ದ್ರೋಹ ಮಾಡಿದ ನಿಮ್ಮ ಶಾಸಕಾಂಗ ಪಕ್ಷದ ನಾಯಕರ ನೇತೃತ್ವದಲ್ಲಿ 5 ವರ್ಷ ಆಡಳಿತ ನಡೆಸಿದ ನಿಮ್ಮ ಪಕ್ಷ,
2018ರಲ್ಲಿ 78 ಕ್ಷೇತ್ರಗಳಿಗೆ ಕುಸಿಯಿತೇಕೆ? ಬಿಜೆಪಿ ಜತೆ ಅವರು ನಡೆಸುತ್ತಿರುವ ‘ ಮುಂದುವರಿದ ಕಳ್ಳಾಟ ‘ ಏನೆಂದು ನಿಮಗೆ ಮಾಹಿತಿ ಇಲ್ಲವೆ? ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸನ್ನು ತೊಳೆದು ಅರಬ್ಬಿ ಸಮುದ್ರಕ್ಕೆ ಎಸೆಯಿರಿ, ರಾಜ್ಯದಲ್ಲಿ ಒಂದೂ ಸೀಟು ಗೆಲ್ಲಿಸಬೇಡಿ : ಸಿ.ಟಿ ರವಿ
ಇನ್ನೊಂದು ಟ್ವೀಟ್‌ನಲ್ಲಿ, 2008ರಲ್ಲಿ ಉಪ ಚುನಾವಣೆ ನಡೆದ 8 ಕ್ಷೇತ್ರಗಳಲ್ಲಿ ಕಾಂಗ್ರೆಸ್(Congress) ಅಭ್ಯರ್ಥಿಗಳನ್ನು ಸೋಲಿಸಲು ಯಡಿಯೂರಪ್ಪರಿಂದ ಕೋಟಿ ಕೋಟಿ ಥೈಲಿ ಪಡೆದದ್ದು, ಆ ಹಣವನ್ನು ಯಾರು ಪಡೆದು ಯಾರಿಗೆ ತಂದುಕೊಟ್ಟರು ಎನ್ನುವ ಕುರಿತೂ ಮಾಹಿತಿ ಪಡೆದುಕೊಳ್ಳಿ ಸುರ್ಜೇವಾಲರೇ..
ಅನೇಕ ಸಲ ಈ ಬಗ್ಗೆ ಪ್ರಶ್ನಿಸಿದ್ದೇನೆ. ಉತ್ತರವೇ ಇಲ್ಲ. ಕೊನೆಪಕ್ಷ ನೀವಾದರೂ ಉತ್ತರಿಸಿ.
ದಲಿತ ನಾಯಕ ಖರ್ಗೆ ಅವರನ್ನು ಸಿಎಲ್ ಪಿ(CLP) ನಾಯಕ ಸ್ಥಾನದಿಂದ ಅಪಮಾನಕರವಾಗಿ ಇಳಿಸಲು ಹಾಲಿ ಸಿಎಲ್ ಪಿ ನಾಯಕ ಮಹಾಶಯರು ಹಣೆದ ‘ ಸಿದ್ದವ್ಯೂಹ ‘ದ ಬಗ್ಗೆ ನಿಮಗೆ ಮಾಹಿತಿ ಇಲ್ಲ. ಹೋಗಲಿ.. ‘ ಸಿದ್ದಪೀಡಿತ ‘ ನಿಮ್ಮ ಎಐಸಿಸಿ ಅಧ್ಯಕ್ಷರನ್ನೇ ಒಮ್ಮೆ ಕೇಳಿ ತಿಳಿದುಕೊಳ್ಳಿ ಸುರ್ಜೇವಾಲ ಅವರೇ.. ಎಂದು ವಾಗ್ದಾಳಿ ನಡೆಸಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, ಜೆಡಿಎಸ್, ಬಿಜೆಪಿ ಬಿ ಟೀಮ್ ಎಂದು 2018ರಲ್ಲಿ ಹಾಸನದಲ್ಲಿ ಶ್ರೀ ರಾಹುಲ್ ಗಾಂಧಿ(Rahul Gandhi) ಅವರಿಂದ ಹೇಳಿಸಿದ್ದ ನಿಮ್ಮ ಪಕ್ಷದ ಶಾಸಕಾಂಗ ನಾಯಕರು,
2008ರಲ್ಲಿ ಮಾಡಿದ್ದೇನು? ಈಗಿನ ಎಐಸಿಸಿ ಅಧ್ಯಕ್ಷ ಶ್ರೀ ಖರ್ಗೆ(Mallikarjun Kharge) ಅವರನ್ನು ಪ್ರತಿಪಕ್ಷ ನಾಯಕ ಸ್ಥಾನದಿಂದ ಕೆಳಗಿಸಲು ಬಿಜೆಪಿಯ ಯಡಿಯೂರಪ್ಪ(BS Yediyurappa) ಅವರ ಜತೆ ನೇರ ಡೀಲ್ ಕುದುರಿಸಿದ್ದವರ ಬಗ್ಗೆ ಗೊತ್ತಿಲ್ಲವೆ?
ಬಿಜೆಪಿ ಬಾಲಂಗೋಚಿಯನ್ನು ಪಕ್ಕದಲ್ಲೇ ಕೂರಿಸಿಕೊಂಡು ಜೆಡಿಎಸ್ ಅನ್ನು ಬಿಜೆಪಿ ಬಿ ಟೀಮ್ ಎಂದು ದೂರಿದ್ದೀರಿ, ನಿಜಕ್ಕೂ ಆ ಬಿ ಟೀಮ್ ಯಾವುದು?
ಆ ಟೀಮ್ ಕ್ಯಾಪ್ಟನ್ ಯಾರು? ಎನ್ನುವುದನ್ನು ನಿಮ್ಮ ಪಕ್ಕದಲ್ಲೇ ಇದ್ದ ಕೆಪಿಸಿಸಿ ಅಧ್ಯಕ್ಷ ಶ್ರೀ ಡಿಕೆಶಿ ಅವರನ್ನು ಕೇಳಬಾರದಿತ್ತೆ?
ಇದನ್ನೂ ಓದಿ: ಶ್ರದ್ಧಾ ಹತ್ಯೆ ಪ್ರಕರಣದಲ್ಲಿ 3000 ಪುಟಗಳ ಚಾರ್ಜ್‌ಶೀಟ್ ಸಿದ್ಧಪಡಿಸಿದ ಪೊಲೀಸ್
ಅರಬರೆ ಆಲಾಪದಿಂದ ಅಪಹಾಸ್ಯಕ್ಕೆ ಈಡಾಗಿದ್ದಿರಿ. ನಮ್ಮ ಪಕ್ಷವನ್ನು ಬಿಜೆಪಿ ಬಿ ಟೀಮ್ ಎಂದು ಹಾಸನದಲ್ಲಿ ದೂರಿದ್ದಿರಿ. ಪಾಪ.. ನಿಮ್ಮನ್ನು ಪ್ರಜ್ಞಾವಂತ ರಾಜಕಾರಣಿ ಎಂದು ಭಾವಿಸಿದ್ದೆ. ನೀವು ನೋಡಿದರೆ ‘ ಸಿದ್ದಭಾಷಣ ‘ ವನ್ನೇ ನಕಲು ಮಾಡಿ ನಗೆಪಾಟಲಿಗೆ ಒಳಗಾಗಿದ್ದಿರಿ.
ಸತ್ಯ ಅರಿತು ಮಾತನಾಡಿದ್ದರೆ ನಾನೂ ಖುಷಿ ಪಡುತ್ತಿದ್ದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಮಾನ್ಯ ಶ್ರೀ ಸುರ್ಜೆವಾಲಾ ಅವರೇ.. ಹೊಸ ಬಾಟಲಿಗೆ ಹಳೆಯ ಮದ್ಯ ತುಂಬುವ ವ್ಯರ್ಥದ ಕೆಲಸ ಏಕೆ? ರಾಜ್ಯ ಕಾಂಗ್ರೆಸ್ ಪಕ್ಞದ ಸಿದ್ದಹಸ್ತರ ಪ್ರಭಾವಕ್ಕೆ ಒಳಗಾಗಿ ಸವಕಲು ಸುಳ್ಳುಗಳನ್ನೇ ಹೇಳುವ ಕರ್ಮ ನಿಮಗೇಕೆ ಬಂತು? ಎಂದು ಕಿಡಿಕಾರಿದ್ದಾರೆ.