- ಒಂದ್ ಸಲ ಪೆನ್ನೂ-ಪೇಪರ್ (Pen and paper) ಕೊಡಿ ಎಂದಿದ್ದ ವ್ಯಕ್ತಿಯಿಂದ ಅದೇ ಸಮುದಾಯಕ್ಕೆ ಮರಣಶಾಸನ
- ಶಿವ ಶಿವಾ ಇನ್ನೇನು ನೋಡ್ಬೇಕು ಎಂದು ಟಾಂಗ್ ಕೊಟ್ಟ ಕುಮಾರಸ್ವಾಮಿ!
- ಹಳೇ ಮೈಸೂರು ಜಿಲ್ಲೆಗಳಲ್ಲಿ (Mysore districts) ವಾಸಿಸುವ ಒಕ್ಕಲಿಗ ಸಮುದಾಯದ ಸಂಖ್ಯೆ (HDK lashes out at CM) ಸರಿಯಾಗಿಲ್ಲ ಎಂದು ಕಿಡಿ
Bengaluru: ಕಳೆದ ಕೆಲ ದಿನಗಳಿಂದ ಜಾತಿಗಣತಿ (Caste Census) ಕುರಿತಾದ ಜಟಾಪಟಿ ಜೋರಾಗಿದ್ದು ಈದೀಗ ಜಾತಿಗಣತಿ ವರದಿಯದ್ದು ಎನ್ನಲಾದ ಅಂಕಿ ಅಂಶಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು; ಇದು ಜಾತಿಗಣತಿಯೋ.. ದ್ವೇಷಗಣತಿಯೋ..? ಎಂದು ಪ್ರಶ್ನೆ ಮಾಡಿದ್ದಾರೆ.ಅಲ್ಲದೆ, ಹಿಂದೆ ಜಾತಿ ಗಣತಿ ವರದಿಯನ್ನು (Caste census report) ವಿರೋಧಿಸಿದ್ದ ಡಿಸಿಎಂ ಡಿಕೆಶಿ ಈಗ ಯೂಟರ್ನ್ ಹೊಡೆದಿರುವ ಬಗ್ಗೆ ಕೇಂದ್ರ ಸಚಿವರು (Union Minister) ವ್ಯಂಗ್ಯವಾಡಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು; ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ,(Mandya, Kolar, Chikkaballapur) ರಾಮನಗರ, ಬೆಂ.ಗ್ರಾಮಾಂತರ, ತುಮಕೂರು, ಚಿತ್ರದುರ್ಗ ಸೇರಿ ಹಳೇ ಮೈಸೂರು ಜಿಲ್ಲೆಗಳಲ್ಲಿ ವಾಸಿಸುವ ಒಕ್ಕಲಿಗ ಸಮುದಾಯದ (Vokaliga community) ಸಂಖ್ಯೆ ಎಷ್ಟು? ಗೊತ್ತಿಲ್ಲವೇ ಎಂದು ಸಿಎಂ ಸಿದ್ಧರಾಮಯ್ಯ ಅವರನ್ನು ತಿವಿದಿದ್ದಾರೆ.
ಜಾತಿ ಗಣತಿ (Caste census) ಗಜಪ್ರಸವಕ್ಕೆ ಸಂಪುಟದಲ್ಲಿ ಶಾಸ್ತ್ರೋಕ್ತವಾಗಿ ಅರಿಶಿಣ ಕಂಕುಮ ಹಚ್ಚಿ ಕಡ್ಡಿ ಹಚ್ಚಲಾಗಿದೆ. ಆ ವರದಿಯದ್ದು ಎನ್ನಲಾದ ಅಂಕಿ-ಅಂಶಗಳು (Statistics) ಎಲ್ಲೆಡೆ ತೇಲಾಡುತ್ತ . ಎಲ್ಲರ ಕಣ್ಣು ಕೆಂಪಗಾಗಿಸುತ್ತಿದೆ.ಯಾವುದೋ ಅಜ್ಞಾತ ಕೈ ಅದನ್ನು ವ್ಯವಸ್ಥಿತವಾಗಿ ತೇಲಿಬಿಡುತ್ತಿದೆ .ಒಕ್ಕಲಿಗ ಸಮಾಜಕ್ಕೆ ಸೇರಿದ ಅಂಕೆ-ಸಂಖ್ಯೆ ಅಷ್ಟೇ ಅಲ್ಲ, ವೀರಶೈವ ಲಿಂಗಾಯತ (Veerashaiva Lingayat) ಮತ್ತು ಬ್ರಾಹ್ಮಣ (Brahmin) ಇನ್ನಿತರೆ ಸಮಾಜಗಳ ಸಂಖ್ಯೆಯೂ ನನಗೆ ಅಚ್ಚರಿ ಹುಟ್ಟಿಸಿದೆ ಎಂದು ಅವರು ಹೇಳಿದ್ದಾರೆ.

ಅಷ್ಟಕ್ಕೂ ಗಣತಿ ಗ್ಯಾರಂಟಿ (Census is guaranteed) ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ ವೆಬ್ಬಿಸಲು ಹೂಡಿದ ಷಡ್ಯಂತ್ರ್ಯವೇ? ಅಥವಾ ಸರಣಿ ದರ ಏರಿಕೆ, ಸಾಲುಸಾಲು ಭ್ರಷ್ಟ ಹಗರಣಗಳ (Corruption scandals) ಮುಜುಗರದಿಂದ ಮುಖ ಮುಚ್ಚಿಕೊಳ್ಳಲು ಜನರ ಗಮನ ಬೇರೆಡೆಗೆ ಹೊರಳಿಸಲು ರೂಪಿಸಿದ ಸಂಚೇ? ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.
ಒಂದು ಕಡೆ ಬೆಲೆ ಏರಿಕೆಯ (Price rise) ಬಿಸಿಯಿಂದ ಇಡೀ ರಾಜ್ಯವು ಜಾತಿ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದ್ದರೆ, ಕಾಂಗ್ರೆಸ್ ಸರ್ಕಾರದ (Congress Govt) ಈ ನಡೆ ಕೆಲ ನಿರ್ದಿಷ್ಟ ಸಮುದಾಯಗಳ ಮೇಲೆ ರಾಜಕೀಯ, ಸಾಮಾಜಿಕವಾಗಿ ಹಗೆತನ ಸಾಧಿಸುವ ಮುಂದುವರಿದ ಅಧ್ಯಾಯವೇ? ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: http://ಬೆಂಗಳೂರಿನ ಅಪಾರ್ಟ್ಮೆಂಟ್ ನಿವಾಸಿಗಳ ಆಕ್ರೋಶಕ್ಕೆ ಕಾರಣವಾದ ಕಸ ತೆರಿಗೆ
ಇನ್ನು ಮುಖ್ಯಮಂತ್ರಿ ಕುರ್ಚಿ (Chief Minister’s chair) ಹತ್ತಲು ಚಾತಕ ಪಕ್ಷಿಯಂತೆ ನಿದ್ದೆಗೆಟ್ಟು, ‘ಒಂದ್ ಸಲ ನಂಗೂ ಪೆನ್ನೂ-ಪೇಪರ್ ಕೊಡಿ’ ಎಂದು ಸಮುದಾಯದ ಮುಂದೆ ಮಂಡಿಯೂರಿ ಗೋಗರೆದ ವ್ಯಕ್ತಿ ಸಿದ್ದಷಡ್ಯಂತ್ರ್ಯ ವರದಿಗೆ ಶಿರಬಾಗಿ ಸಮ್ಮತಿಸಿಸುವರೇ..? ಹಿಂದೊಮ್ಮೆ ನಾಡಪ್ರಭು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ಕ್ಷೀಣದನಿಯಲ್ಲಿ ಗಣತಿ ವರದಿಯನ್ನು ವಿರೋಧಿಸಿದ್ದವರು ಈಗ ನಾಲಿಗೆ ಹೊರಳಿಸಿದ್ದಾರೆ!! ಶಿವ ಶಿವಾ ಇನ್ನೇನು ನೋಡ್ಬೇಕು (HDK lashes out at CM) ಎಂದು ಡಿಸಿಎಂ ಡಿಕೆಶಿಗೆ (DCM DK) ಕೂಡ ಟಾಂಗ್ ನೀಡಿದ್ದಾರೆ.