`2028ರ ವಿಧಾನಸಭೆ ಚುನಾವಣೆ ನನ್ನ ಕೊನೇ ಚುನಾವಣೆ’ ನಾನು ರಾಜಕೀಯದಿಂದಲೇ ನಿರ್ಗಮಿಸುತ್ತೇನೆ : ಹೆಚ್‌ಡಿಕೆ

Karnataka : 2028ರ ನಂತರ ವಿಧಾನಸಭೆ ಚುನಾವಣೆಯಿಂದ ನಾನು ನಿರ್ಗಮಿಸುತ್ತೇನೆ. ನಿರ್ಗಮಿಸಿದರೂ ರಾಜ್ಯದ ಜನರಿಗಾಗಿ ಮತ್ತು ಅಭಿವೃದ್ಧಿಗಾಗಿ ನಾನು ಕೆಲಸ ಮಾಡುವುದನ್ನು ಮುಂದುವರಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ ಕುಮಾರಸ್ವಾಮಿ(H.D.Kumarswamy) ಅವರು ಹೇಳಿದ್ದಾರೆ.

ಕರ್ನಾಟಕ ರಾಜ್ಯದ ಜನರಿಗಾಗಿ ರಾಜಕೀಯ ಮಾಡುವುದನ್ನು ಮುಂದುವರಿಸುವುದಾಗಿ ಹೆಚ್.ಡಿ ಕುಮಾರಸ್ವಾಮಿ(H.D.Kumarswamy) ಅವರು ಸ್ಪಷ್ಟಪಡಿಸಿದ್ದಾರೆ. 2023ರ ವಿಧಾನಸಭಾ ಚುನಾವಣಾ ಸಮೀಪಿಸುತ್ತಿರುವ ಬೆನ್ನಲ್ಲೇ ಸಕಲ ತಯಾರಿಗಳೊಂದಿಗೆ ರಾಜ್ಯದ ಜನರನ್ನು ಪಂಚರತ್ನ ಯಾತ್ರೆಯ ಮೂಲಕ ತಲುಪುತ್ತಿರುವ ಕುಮಾರಸ್ವಾಮಿ ಅವರು, ಜನರನ್ನು ಉದ್ದೇಶಿಸಿ ತಮ್ಮ ಮುಂದಿನ ನಿಲುವಿನ ಬಗ್ಗೆ ಸ್ಪಷ್ಟಪಡಿಸಿದ್ದಾರೆ. 2028 ರ ವಿಧಾನಸಭಾ ಚುನಾವಣೆಯೇ ತಮ್ಮ ಕಡೆಯ ಚುನಾವಣೆ ಎಂದು ಹೇಳಿದ್ದಾರೆ. 2028 ರ ವಿಧಾನಸಭಾ ಚುನಾವಣೆಯಲ್ಲಿ ಕಡೆಯದಾಗಿ ಸ್ಪರ್ಧಿಸಲಿದ್ದೇನೆ! ಅದು ತಮ್ಮ ಕೊನೆಯ ಚುನಾವಣೆಯಾಗಿದೆ ಎಂದು ಘೋಷಿಸಿದ್ದಾರೆ. ಆದರೆ ಕರ್ನಾಟಕದ ಜನರಿಗಾಗಿ ರಾಜಕೀಯ ಮಾಡುವುದನ್ನು ಮುಂದುವರಿಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ. ರಾಮನಗರದಲ್ಲಿ(Ramanagar) ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕುಮಾರಸ್ವಾಮಿ, 2028ರ ವಿಧಾನಸಭಾ ಚುನಾವಣೆಯ ನಂತರ ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ನಾನು ಸ್ವಲ್ಪ ವಿಶ್ರಾಂತಿ ತೆಗೆದುಕೊಳ್ಳಬೇಕು. ಆದರೆ ನಾನು ರಾಜಕೀಯದಿಂದ ದೂರವಿರುತ್ತೇನೆ ಎಂದಲ್ಲ. ನಾನು ಕರ್ನಾಟಕದ ಜನರಿಗಾಗಿ ಮತ್ತು ಅದರ ಅಭಿವೃದ್ಧಿಗಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇನೆ ಎಂದು ಹೇಳಿದರು.

ಒಟ್ಟಾರೆ ಜೆಡಿಎಸ್‌ ನಾಯಕ ಹೆಚ್.ಡಿ ಕುಮಾರಸ್ವಾಮಿ(H.D.Kumarswamy) ಅವರ ಈ ಹೇಳಿಕೆ ಇದೀಗ ರಾಜ್ಯ ರಾಜಕೀಯ ಅಖಾಡದಲ್ಲಿ ಸಾಕಷ್ಟು ಚರ್ಚೆ, ಲೆಕ್ಕಾಚಾರಗಳನ್ನು ಹುಟ್ಟುಹಾಕಿದೆ. ಸದ್ಯ ಪಂಚರತ್ನ ಯಾತ್ರೆಯಲ್ಲಿ ತಮ್ಮನ್ನು ತಾವು ಸಂಪೂರ್ಣವಾಗಿ ತೊಡಗಿಸಿಕೊಂಡಿರುವ ಹೆಚ್.ಡಿ ಕುಮಾರಸ್ವಾಮಿ ಅವರು, ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಆಯಾ ಜಿಲ್ಲೆಗಳ, ತಾಲೂಕು, ಗ್ರಾಮಗಳಿಗೆ ಭೇಟಿ ನೀಡಿ, ಜನರ ಪರಿಸ್ಥಿತಿಯನ್ನು ತಿಳಿದುಕೊಳ್ಳುತ್ತಿದ್ದಾರೆ. ಈ ಮೂಲಕ ರಾಜ್ಯದ ಜನರ ನಾನಾ ಸಮಸ್ಯೆಗಳನ್ನು ಅರಿತು, ಆ ಸಮಸ್ಯೆಗಳಿಗೆ ಪರಿಹಾರದ ಭರವಸೆಯನ್ನು ನೀಡುವಲ್ಲಿ ನಿರತರಾಗಿದ್ದಾರೆ. ಸದ್ಯ ಜೆಡಿಎಸ್‌ ಪಕ್ಷದ ಪಂಚರತ್ನ ಯಾತ್ರೆಯು ಚಿಕ್ಕಮಗಳೂರು ಜಿಲ್ಲೆಯ ಹಲವು ಭಾಗಗಳನ್ನು ತಲುಪಿದ್ದು, ಚಿಕ್ಕಮಗಳೂರಿನ ಸಖರಾಯಪಟ್ಟಣ, ಮೂಡಿಗೆರೆ, ನಿಡಘಟ್ಟ, ದೇವನೂರು ಪ್ರದೇಶಗಳಿಗೆ ಭೇಟಿ ನೀಡುವಲ್ಲಿ ಯಶಸ್ವಿಯಾಗಿದೆ.

Exit mobile version