Excessive wooing of a particular community Cause of riot: HDK rant.
Bengaluru: ರಾಜ್ಯ ಸರಕಾರ ರಾಜಕೀಯ ಸ್ವಾರ್ಥಕ್ಕಾಗಿ ಒಂದು ನಿರ್ದಿಷ್ಟ ಸಮುದಾಯವನ್ನು ಅತಿಯಾಗಿ ಓಲೈಸಿ ತುಷ್ಟೀಕರಣ ಮಾಡಿದ ಫಲವಾಗಿ ನಾಗಮಂಗಲದಲ್ಲಿ ಈ ಹೇಯ ಘಟನೆ ನಡೆದಿದೆ. ಇಂತಹ ಓಲೈಕೆ, ತುಷ್ಟೀಕರಣ ರಾಜಕಾರಣ ನಿಲ್ಲಬೇಕು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (H D Kumaraswamy)ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ #MandyaVoilence ನಡೆದ ಕೋಮುಗಲಭೆಯ ಕುರಿತು ಎಕ್ಸ್ನಲ್ಲಿ ಬರೆದುಕೊಂಡಿರುವ ಅವರು, ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ.
ಗಣಪತಿ ದೇವರ ಮೆರವಣಿಗೆಯಲ್ಲಿ ಶಾಂತಿಯುತವಾಗಿ ತೆರಳುತ್ತಿದ್ದ ಭಕ್ತರನ್ನು ಗುರಿ ಮಾಡಿ ಒಂದು ಸಮುದಾಯದ ಪುಂಡರು ಉದ್ದೇಶ ಪೂರ್ವಕವಾಗಿಯೇ ದಾಂಧಲೆ ಎಬ್ಬಿಸಿ ಸಾರ್ವಜನಿಕರು-ಪೊಲೀಸರ ಮೇಲೆ ಕಲ್ಲು, ಚಪ್ಪಲಿ ಎಸೆದು ಪೆಟ್ರೋಲ್ ಬಾಂಬ್ (Petrol Bomb) ಸ್ಫೋಟಿಸಿ ತಲ್ವಾರ್ ಝಳಪಿಸುವ ದುಸ್ಸಾಹಸಕ್ಕೆ ಕೈ ಹಾಕಿರುವುದು ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ವೈಫಲ್ಯವಾಗಿರುವುದಕ್ಕೆ ಸಾಕ್ಷಿ.
ಪೊಲೀಸ್ ಠಾಣೆ ಎದುರು ರಕ್ಷಣೆ ಕೊಡಿ ಎಂದು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದವರ ಮೇಲೆಯೇ ಆ ಕೋಮಿನ ಪುಂಡರು ದಬ್ಬಾಳಿಕೆ ನಡೆಸುತ್ತಾರೆ ಎಂದರೆ ನಾವು ಎಲ್ಲಿದ್ದೇವೆ ಎನ್ನುವ ಅನುಮಾನ ಬರುತ್ತದೆ. ಇಲ್ಲಿ ಸ್ಥಳೀಯ ಪೊಲೀಸರ ವೈಫಲ್ಯವೂ ಎದ್ದು ಕಾಣುತ್ತಿದೆ ಎಂದು ಟೀಕಿಸಿದ್ದಾರೆ. ಕಾಂಗ್ರೆಸ್ (Congress) ಪಕ್ಷ ಮತ್ತು ರಾಜ್ಯ ಸರಕಾರ ರಾಜಕೀಯ ಸ್ವಾರ್ಥಕ್ಕಾಗಿ ಒಂದು ನಿರ್ದಿಷ್ಟ ಸಮುದಾಯವನ್ನು ಅತಿಯಾಗಿ ಓಲೈಸಿ ತುಷ್ಟೀಕರಣ ಮಾಡಿದ ಫಲವಾಗಿ ನಾಗಮಂಗಲದಲ್ಲಿ ಈ ಹೇಯ ಘಟನೆ ನಡೆದಿದೆ.
ಇಂತಹ ಓಲೈಕೆ, ತುಷ್ಟೀಕರಣ ರಾಜಕಾರಣ ನಿಲ್ಲಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಕೆಟ್ಟ ದಿನಗಳು ದೂರವಿಲ್ಲ. ಸಾರ್ವಜನಿಕರು ಶಾಂತಿ ಕಾಪಾಡಬೇಕು ಎನ್ನುವುದು ನನ್ನ ಕಳಕಳಿಯ ಮನವಿ. ತಕ್ಷಣವೇ ಪಟ್ಟಣದಲ್ಲಿ ಶಾಂತಿ ಮರುಸ್ಥಾಪನೆ ನಿಟ್ಟಿನಲ್ಲಿ ಸರಕಾರ ಕ್ರಮ ಕೈಗೊಳ್ಳಬೇಕು. ಅಲ್ಲದೆ; ಈ ಪ್ರಕರಣ ನೆಪದಲ್ಲಿ ವಿರೋಧ ಪಕ್ಷಗಳ ಮುಖಂಡರು, ಕಾರ್ಯಕರ್ತರ ಮೇಲೆ ಪೊಲೀಸರು ದರ್ಪ ತೋರಿದರೆ ಸಹಿಸುವ ಪ್ರಶ್ನೆ ಇಲ್ಲ ಎಂದಿದ್ಧಾರೆ.
HDK Latest Statement Today News In Kannada
Bengaluru: This heinous incident took place in Nagamangala as a result of excessive wooing and appeasement of a certain community by the state government for political gain. Union Minister H.D. said that such appeasement and appeasement politics should stop. H D Kumaraswamy has launched a fierce attack against the state Congress government.
He has written in X about the #MandyaVoilence communal riots in Nagamangala, Mandya district.
It is a proof of the failure of peace and order in the town that by targeting the devotees who were walking peacefully in the procession of Lord Ganapati, the thugs of a community intentionally raised a ruckus and threw stones and slippers at the public-policemen, exploding petrol bombs and brandishing swords.
When the thugs of that community oppress those who were protesting peacefully asking for protection in front of the police station, there is a doubt as to where we are. He criticized that the failure of the local police is also evident here. Congress party and This despicable incident took place in Nagamangala as a result of the state government’s over-indulgence and appeasement of a certain community for political gain.
Such wooing and appeasement politics should stop. Otherwise bad days are not far for the Congress party. My concern is that the public should maintain peace. The government should immediately take action to restore peace in the town. Also; There is no question of tolerating opposition party leaders and activists on the pretext of this case by the police.