• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಅಲ್ಪಸಂಖ್ಯಾತರ ಬಗ್ಗೆ ಮಮಕಾರ ಇದ್ದರೆ ಮನ್ಸೂರ್ ಖಾನ್‍ರನ್ನೇ ಮೊದಲ ಅಭ್ಯರ್ಥಿ ಮಾಡಬೇಕಿತ್ತು : ಹೆಚ್‍ಡಿಕೆ!

Mohan Shetty by Mohan Shetty
in ರಾಜಕೀಯ, ರಾಜ್ಯ
ವಿರೋಧ ಪಕ್ಷದಲ್ಲಿದ್ದಾಗ ವಿರೋಧಿಸಿದ್ದನ್ನೇ ಆಡಳಿತಕ್ಕೆ ಬಂದಾಗ ಕದ್ದು ಮುಚ್ಚಿ ಮಾಡುವುದು ಬಿಜೆಪಿ ಸಂಸ್ಕೃತಿ: ಎಚ್ಡಿಕೆ
0
SHARES
0
VIEWS
Share on FacebookShare on Twitter

ಬಿಜೆಪಿ ಬಾಲಂಗೋಚಿ, ಬಿಜೆಪಿ ‘ಬಿ’ ಟೀಮಿನ ಕ್ಯಾಪ್ಟನ್, ಆಪರೇಶನ್ ಕಮಲಯ್ಶ, ಸಿದ್ಧಸೂತ್ರಧಾರ, ಢೋಂಗಿ ಜಾತ್ಯತೀತ, ಆಶ್ರಯ ಕೊಟ್ಟ ಪಕ್ಷದ ಕತ್ತು ಸೀಳಲು ಹೊರಟ ಕೈಚಳಕದ ಕಲಿ.. ನಿಮ್ಮ ಅಸಲಿಯೆತ್ತು ರಾಜ್ಯಸಭೆ ಚುನಾವಣೆಯಲ್ಲೂ ನಡೆಯುತ್ತಾ?

HDK

ಎಷ್ಟಾದರೂ ನೀವು ಆಪರೇಶನ್ ಕಮಲದ ಆಸಾಮಿ ಅಲ್ಲವೇ? ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ(HD Kumarswamy) ಅವರು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸರಣಿ ಟ್ವೀಟ್‍ಗಳ ಮೂಲಕ ಸಿದ್ದು ವಿರುದ್ದ ಕೆಂಡಕಾರಿದ್ದಾರೆ. ಇಕ್ಬಾಲ್ ಅಹಮದ್ ಸರಡಗಿ ಆಯಿತು. ಜಾಫರ್ ಷರೀಫ್ ಮೊಮ್ಮಗ ರೆಹಮಾನ್ ಷರೀಫ್ ಆಯಿತು. ರೋಷನ್ ಬೇಗ್ ಕಥೆಯನ್ನು ಮುಗಿಸಿದ್ದಿರಿ. ತನ್ವೀರ್ ಸೇಠ್ ನಿಮ್ಮ ಹಿಟ್ ಲಿಸ್ಟಿನಲ್ಲಿ ಇದ್ದಾರೆ. ಸತ್ಯ ಹೇಳಿದ ಸಲೀಂರನ್ನು ಸಲೀಸಾಗಿ ಸೈಡಿಗಟ್ಟಿದ್ದಿರಿ. ಒಂದೇ ಕಲ್ಲಿನಲ್ಲಿ ಅನೇಕ ಹಕ್ಕಿಗಳನ್ನು ಹೊಡೆಯೋದು ಅಂದರೆ ಇದೇನಾ?

ಇದನ್ನೂ ಓದಿ : https://vijayatimes.com/rakshit-shetty-answers-for-a-question/

ಅಲ್ಪಸಂಖ್ಯಾತರ ಬಗ್ಗೆ ಅಷ್ಟು ಮಮಕಾರ ಇದ್ದಿದ್ದರೆ ಮನ್ಸೂರ್ ಖಾನ್ ಅವರನ್ನೇ ಮೊದಲ ಅಭ್ಯರ್ಥಿ ಮಾಡಬೇಕಿತ್ತು. ಮಾಡಲಿಲ್ಲ ಯಾಕೆ? ನಿಮಗೆ ಜೈರಾಂ ರಮೇಶ್ ಹೆಚ್ಚೋ ಅಥವಾ ಮನ್ಸೂರ್ ಖಾನ್ ಹೆಚ್ಚೋ? ಇಲ್ಲವೇ ಬಿಜೆಪಿಯ 3ನೇ ಅಭ್ಯರ್ಥಿ ಹೆಚ್ಚೋ?? ನಿಮಗೆ ನೀವೇ ಸಾಟಿ. ಜಾತ್ಯತೀತತೆಯ ಸೋಗು ಹಾಕಿಕೊಂಡು ಕೊಡುವ ಆಸಾಮಿ, ಜಾತಿಗೊಂದು ಸಮಾವೇಶ ನಡೆಸಿಕೊಂಡು ಅಲ್ಪಸಂಖ್ಯಾತ ವ್ಯಕ್ತಿಯನ್ನು 2ನೇ ಅಭ್ಯರ್ಥಿ ಮಾಡಿದ ಒಳಗುಟ್ಟು ಏನು? ಆಪರೇಶನ್ ಕಮಲದ ಅಮಲು ಇನ್ನೂ ಇಳಿದಿಲ್ಲವೆ?

Politics

ಸೋಲು ಖಚಿತ ಎಂದು ಗೊತ್ತಿದ್ದರೂ ಮನ್ಸೂರ್ ಖಾನ್ ಅವರನ್ನು ಬಲಿಪೀಠದ ಮುಂದೆ ನಿಲ್ಲಿಸಿದ್ದಿರಿ. ಏನಿದರ ಹಕೀಕತ್ತು? ಮುಸ್ಲಿಂ ನಾಯಕರನ್ನು ಸಾಲು ಸಾಲಾಗಿ ರಾಜಕೀಯ ಗಿಲೋಟಿನ್ ಯಂತ್ರಕ್ಕೆ ತಳ್ಳುತ್ತಿರುವ ನಿಮ್ಮ ‘ಮುಸ್ಲಿಂ ಮೂಲೋತ್ಪಾಟನಾ ರಾಜಕೀಯ’ಕ್ಕೆ ರಾಜ್ಯಸಭೆ ಚುನಾವಣೆಯನ್ನೂ ಬಳಸಿಕೊಳ್ಳುತ್ತಿದ್ದೀರಲ್ಲ? ಇದೆಂಥಾ ರಾಜಕೀಯವಯ್ಯಾ? ಭಾಷಣ ಒಂದು, ರಾಜಕಾರಣ ಇನ್ನೊಂದು!, ಇದಯ್ಶಾ ಕಿಲಾಡಿರಾಮಯ್ಯನ ರಾಜನೀತಿ ಮತ್ತು ರಣನೀತಿ. ಐದು ವರ್ಷಗಳ ನಿಮ್ಮ ನೇತೃತ್ವದ ಕಾಂಗ್ರೆಸ್ ಸರಕಾರ ಬರಲು ಕಾರಣರಾದ ಅಲ್ಪಸಂಖ್ಯಾತರನ್ನೇ ಅಯ್ಯೋ ಎನ್ನುವಂತೆ ಮಾಡುತ್ತಿದೀರಲ್ಲ? ಇದು ನ್ಯಾಯವೇ?

ಇದನ್ನೂ ಓದಿ : https://vijayatimes.com/nirmala-kuppendra-reddy-property-value/

ಬಿಜೆಪಿ ಸರಕಾರದ ಕಾರಣಪುರುಷ, ಆಹಿಂದ ಆದಿಪುರುಷ, ಕಾಂಗ್ರೆಸ್ ಮುಗಿಸಲು ಹೊರಟ ಸಿದ್ದಹಸ್ತ ಮಹಾಶಯ.. ಏನಯ್ಯಾ ನಿಮ್ಮ ರಾಜಕೀಯ? ಮುಸ್ಲಿಮರ ರಾಜಕೀಯ ನರಮೇಧಕ್ಕೆ ಇನ್ನೊಂದು ವಿನಾಶಕಾರಿ ಅಧ್ಯಾಯ ಆರಂಭಿಸಿದ್ದೀರಿ.” ಎಂದು ಎಚ್‍ಡಿಕೆ ವಾಗ್ದಾಳಿ ನಡೆಸಿದ್ದಾರೆ.

Tags: CongressHDKKarnatakapoliticalpolitics

Related News

ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ
ಪ್ರಮುಖ ಸುದ್ದಿ

ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ

May 31, 2023
ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC
Vijaya Time

ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC

May 31, 2023
ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರ ಹೀನರಿಗೆ ಹೇಳುವುದು ಇಷ್ಟೇ – ಎಚ್ಡಿಕೆ
Vijaya Time

ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರ ಹೀನರಿಗೆ ಹೇಳುವುದು ಇಷ್ಟೇ – ಎಚ್ಡಿಕೆ

May 31, 2023
ಇಂದು ಬೆಳಿಗ್ಗೆ ಕರ್ನಾಟಕದಾದ್ಯಂತ ಲೋಕಾಯುಕ್ತ ದಾಳಿ: ಅನೇಕ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಯಲ್ಲಿ ದಾಖಲೆ ಪರಿಶೀಲನೆ
Vijaya Time

ಇಂದು ಬೆಳಿಗ್ಗೆ ಕರ್ನಾಟಕದಾದ್ಯಂತ ಲೋಕಾಯುಕ್ತ ದಾಳಿ: ಅನೇಕ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಯಲ್ಲಿ ದಾಖಲೆ ಪರಿಶೀಲನೆ

May 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.