Visit Channel

ಸಂವಿಧಾನದ ಮೇಲೆ ಗೌರವ ಇಲ್ಲದವರು `ಬುಲ್ಡೋಜರ್ʼ ಬಗ್ಗೆ ಮಾತನಾಡುತ್ತಾರೆ : ಹೆಚ್.ಡಿ.ಕೆ

HDK

ಎಂ.ಎನ್.ರಾಯ್(MN Roy) ಅವರ ಅನುಯಾಯಿ, ಜನತಾ ಪರಿವಾರದ ರಾಯಿಸ್ಟ್ ಎಂದೇ ಖ್ಯಾತರಾಗಿದ್ದ ಎಸ್.ಆರ್. ಬೊಮ್ಮಾಯಿ ಅವರ ಪುತ್ರ ಬಸವರಾಜ ಬೊಮ್ಮಾಯಿ(Basavaraj Bommai) ಈಗ ಸಂವಿಧಾನ(Constitution) ವಿರೋಧಿಯಾದ ಬುಲ್ಡೋಜರ್(Buldozer Model) ಮಾದರಿ ಮಾತನಾಡುತ್ತಿರುವುದು ನನಗೆ ಅತೀವ ಆಘಾತ ಉಂಟು ಮಾಡಿದೆ. ಸಂವಿಧಾನದ ಮೇಲೆ ಗೌರವ ಇಲ್ಲದವರು `ಬುಲ್ಡೋಜರ್ʼ ಬಗ್ಗೆ ಮಾತನಾಡುತ್ತಾರೆ. ದಕ್ಷತೆ ಇಲ್ಲದವರು ಅಕ್ಕಪಕ್ಕದ ಮಾದರಿಗಳನ್ನು ಹುಡುಕುತ್ತಾರೆ.

BJP

ಜನತಾ ಪರಿವಾರಿ ಆಗಿದ್ದವರು ಈಗ ಸಂಘ ಪರಿವಾರಿಯಾಗಿ ರೂಪಾಂತರಗೊಂಡು ಉತ್ತರ ಪ್ರದೇಶದ(Uttarpradesh) ಮಾದರಿ ಹೆಸರಿನಲ್ಲಿ ರಾಜ್ಯಕ್ಕೆ ಹೊಸ ಮಾರಿʼಯನ್ನು ತರಲು ಹೊರಟಿದ್ದಾರೆ. ಇದು ಬೇಕಿಲ್ಲ ಎಂದು ಜೆಡಿಎಸ್‌ ನಾಯಕ(JDS Leader) ಎಚ್.ಡಿ.ಕುಮಾರಸ್ವಾಮಿ(HD Kumarswamy) ಹೇಳಿದ್ದಾರೆ.
ಈ ಕುರಿತು ಟ್ವೀಟ್‌(Tweet) ಮಾಡಿರುವ ಅವರು, ವೈಫಲ್ಯ ಮುಚ್ಚಿಕೊಳ್ಳಲು ಬೊಮ್ಮಾಯಿ ಈಗ ಬುಲ್ಡೋಜರ್ʼ ಜಪ ಮಾಡುತ್ತಿದ್ದಾರೆ. `ಯೋಗಿ ಅದಿತ್ಯನಾಥ್ ಮಾದರಿʼ(Yogi Adityanath Model) ಎನ್ನುತ್ತಿದ್ದಾರೆ.

ಉತ್ತರ ಪ್ರದೇಶದ ಎನ್ನುವುದು ಕರ್ನಾಟಕಕ್ಕೆ ಮಾತ್ರವಲ್ಲ, ಯಾರಿಗೂ ಮಾದರಿ ಅಲ್ಲ. ಸಹಜ ನ್ಯಾಯ, ಸಂವಿಧಾನಕ್ಕೆ ವಿರುದ್ಧದ ಉತ್ತರಪ್ರದೇಶದ ಆಡಳಿತವನ್ನು ಮಾದರಿ ಅನುಕರಣೆ ಎನ್ನುವುದು ಹೊಣೆಗೇಡಿತನದ ಪರಮಾವಧಿ. ರಕ್ತದಲ್ಲಿ ಜಾತಿ-ಧರ್ಮಗಳ ಗುಂಪುಗಳಿವೆಯಾ? ಅಷ್ಟು ಸರಳ ವಿಷಯ ಮುಖ್ಯಮಂತ್ರಿಗೇ ಗೊತ್ತಿಲ್ಲದಿದ್ದರೆ ಹೇಗೆ? ಅವರು ಇದ್ದಾಗಲೇ ಮಂಗಳೂರಿನಲ್ಲಿ ಇನ್ನೊಂದು ಕೊಲೆ ನಡೆಯಿತು ಎಂದರೆ ಆಡಳಿತ ವೈಫಲ್ಯಕ್ಕೆ ಇದಕ್ಕಿಂತ ದೊಡ್ಡ ಉದಾಹರಣೆ ಬೇಕಾ?

HDK

ಕೊಲೆಗೆ ಕೊಲೆಯೇ ಉತ್ತರವಲ್ಲ. ಪ್ರತೀಕಾರಕ್ಕೆ ಪ್ರತೀಕಾರ ಪ್ರತ್ಯುತ್ತರವಲ್ಲ. ಮುಖ್ಯಮಂತ್ರಿ ನಡೆ ಹಿಂಸೆಯನ್ನು ಪ್ರಚೋದಿಸುವಂತಿದೆ. ಕೊಲೆಯಾದ ಇಬ್ಬರೂ ಯುವಕರ ಮನೆಗಳಿಗೆ ಮುಖ್ಯಮಂತ್ರಿ ಭೇಟಿ ನೀಡಿ ಕೊಲೆಗಡುಕರಿಗೆ ಕಠಿಣ ಸಂದೇಶ ರವಾನಿಸಬೇಕಿತ್ತು. ಹಾಗೆ ಮಾಡಲಿಲ್ಲ ಎಂದಿದ್ದಾರೆ.
ಬೊಮ್ಮಾಯಿ ಅವರು ಇಡೀ ಕರ್ನಾಟಕದ ಮುಖ್ಯಮಂತ್ರಿ. ಕೇವಲ ಬಿಜೆಪಿಗಷ್ಟೇ ಅಲ್ಲ. ನಿನ್ನೆಯ ದಿನ ಅವರು ಮಸೂದ್ ಮತ್ತು ಪ್ರವೀಣ್ ನಿಟ್ಟಾರು ಹತ್ಯೆಯಾದ ಬೆಳ್ಳಾರೆ ಗ್ರಾಮಕ್ಕೆ ಭೇಟಿ ನೀಡಿದಾಗ ಸಂವಿಧಾನದತ್ತವಾಗಿ ಸ್ವೀಕರಿಸಿದ ಪ್ರಮಾಣವಚನದ ಪಾವಿತ್ರ್ಯತೆಗೆ ಚ್ಯುತಿ ತಂದಿದ್ದಾರೆ.

ರಾಜಧರ್ಮ ಪಾಲಿಸಿ ಎಂದು ಹಿಂದೊಮ್ಮೆ ಶ್ರೀ ಅಟಲ್ ಬಿಹಾರಿ ವಾಜಪೇಯಿ(Atal Bihari Vajpayee) ಅವರು ಹೇಳಿದ್ದರು. ರಾಜಧರ್ಮ ಪಾಲಿಸುವುದಿರಲಿ, ಸ್ವಧರ್ಮವೇ ಹೇಳಿದ `ಸರ್ವೇ ಜನೋ ಸುಖಿನೋ ಭವಂತುʼ ಎನ್ನುವ ತತ್ತ್ವವನ್ನೂ ಪಾಲಿಸುತ್ತಿಲ್ಲ ಎಂದು ಟೀಕಿಸಿದ್ದಾರೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.