ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಕುಮಾರಸ್ವಾಮಿ ಅವರು #YstTax ಬಗ್ಗೆ ಹೇಳಿ, ʼಕಾಸಿಗಾಗಿ ಹುದ್ದೆʼ #CashForPosting ದಂಧೆಯನ್ನು ದಾಖಲೆ (HDK slams DKS) ಸಮೇತ ಬಿಚ್ಚಿಟ್ಟರೂ ಆ ಅಸಹ್ಯ ತನ್ನದಲ್ಲ ಎನ್ನುವ

‘ ಅವಿವೇಕ ‘ ಕಾಂಗ್ರೆಸ್ ಪಕ್ಷದ್ದು. ಆ ಅವಿವೇಕವನ್ನು ಮುಚ್ಚಿಕೊಳ್ಳಲು ಈಗ ವೆಸ್ಟ್ʼಎಂಡ್ ಎನ್ನುವ ಸವಕಲು ವಿಷಯ ನೆನಪು ಮಾಡಿಕೊಂಡಿದೆ. ವೆಸ್ಟ್ʼಎಂಡ್ ಬಾಡಿಗೆ ಮಾತಿರಲಿ; ಲುಲು ಮಾಲು ವಿಷಯಕ್ಕೆ
ಬರೋಣ. ಹೊಲ ಉತ್ತಿ, ಬೀಜ ಬಿತ್ತಿ ಬೆವರಿನ ಹೊಳೆ ಹರಿಸಿ ತೆಗೆದ ಫಸಲಿಗೆ ಲುಲು ಮಾಡಬಹುದಾ!? ಒಂದು ವೇಳೆ ಮಾಡಬಹುದಾದರೆ, ನಿಮ್ಮ ʼಲುಲುಕುಮಾರ್ʼಗಿಂತ ಬೆಸ್ಟ್ ಎಕನಾಮಿಸ್ಟ್ ಇನ್ನೊಬ್ಬರಿಲ್ಲ!!
ಹಾಗಿದ್ದರೆ, ಅವರನ್ನೇ ವಿತ್ತಮಂತ್ರಿ ಮಾಡಬಹುದಿತ್ತಲ್ಲ!? ಎಂದು ಜೆಡಿಎಸ್ (JDS) ರಾಜ್ಯ ಕಾಂಗ್ರೆಸ್ಗೆ ಟಾಂಗ್ ನೀಡಿದೆ.
ಇದನ್ನು ಓದಿ: ಎಚ್‌ಡಿಎಫ್‌ಸಿ ಮಾದರಿಯಲ್ಲೇ ಐಡಿಎಫ್‌ಸಿ ಫಸ್ಟ್ ಬ್ಯಾಂಕ್‌ನಲ್ಲಿ ವಿಲೀನವಾಗಲಿದೆ ಐಡಿಎಫ್‌ಸಿ ಲಿಮಿಟೆಡ್
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಜೆಡಿಎಸ್, ಸತ್ಯಕ್ಕೆ ಸಮಾಧಿ ಕಟ್ಟುವುದು ಕಾಂಗ್ರೆಸ್ ಚಾಳಿ, ಅದು ಮೂಲತಃ ಸುಳ್ಳುಗಳ ವಾಚಾಳಿ. ಮುಖದ ಮೇಲೆ ಕೊಚ್ಚೆ ಹಾಕಿಕೊಂಡವನು ಆ ಗಲೀಜು
ಅನ್ಯರ ಕಣ್ಣಿಗೆ ಬೀಳದಿರಲೆಂದು ಇನ್ನೊಬ್ಬರ ಮೇಲೆ ಅದನ್ನೇ ಎರಚಿ ಕುಣಿದನಂತೆ ಹಂಗಿದೆ ನೋಡಿ ʼಕಮೀಷನ್ ಕಾಂಗ್ರೆಸ್ʼನ ‘ (Congress) ಹೊಸ ವರಸೆ ಮತ್ತು ಹೊಸ ಕಸವರಿಕೆ. ವೆಸ್ಟ್
ಎಂಡ್ ಲೆಕ್ಕ ಇರಲಿ, ‘ಸಿಎಂ ಟಿಪ್ಪಣಿ ಬಿಕರಿ’ಗೆ ಲೆಕ್ಕ ಇಡಿ.(HDK slams DKS) ಒಂದು ಎಸಿ ಹುದ್ದೆ, 3

ಟಿಪ್ಪಣಿ. ಇದ್ಯಾವ ಸೀಮೆ ಅರ್ಥಶಾಸ್ತ್ರ?? ಕೌಟಿಲ್ಯನೂ ಬೆಚ್ಚಿಬೀಳುವ ಆಡಳಿತ ಹಾಗೂ ರಾಜನೀತಿ. ಈ ಟಿಪ್ಪಣಿಗಳ ಹಣ ಪಕ್ಷದ ಮಂಡಿಗೋ ಅಥವಾ #YstTax ಹುಂಡಿಗೋ? ಇಲ್ಲೇ ಸಾಕ್ಷ್ಯ ಇದೆ.
ಪಾಪ.. ಬೂಟಾಟಿಕೆ ದಾಸಯ್ಯನಿಗೆ ಮೈಯ್ಯೆಲ್ಲಾ ಪಂಗನಾಮ ಎಂದು ಟೀಕಿಸಿದೆ.
ಇದಕ್ಕೂ ಮುನ್ನ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ದ ತೀವ್ರ ಟೀಕಾಪ್ರಹಾರ ನಡೆಸಿದ್ದ ಕಾಂಗ್ರೆಸ್, ವೆಸ್ಟ್ ಎಂಡ್ ಹೋಟೆಲ್ನಲ್ಲಿ ಒಂದು ದಿನದ ಬಾಡಿಗೆ ಎಷ್ಟು ಕುಮಾರಸ್ವಾಮಿ ಅವರೇ? ಅಲ್ಲೊಂದು ಖಾಯಂ
ಅಡ್ಡ ತೆರೆದಿದ್ದೀರಿ ಅಂದರೆ ಅದಕ್ಕೆ ಎಷ್ಟು ಕೋಟಿ ಸುರಿದಿದ್ದೀರಿ? ವೆಸ್ಟ್ ಎಂಡ್ ಹೋಟೆಲಿಗೆ ಜಮೀನಿನಲ್ಲಿ ಉಳುಮೆ ಮಾಡಿ ಬಾಡಿಗೆ ಕಟ್ಟುತ್ತಿದ್ದೀರಾ? ಅಥವಾ “KST” ಸಂಗ್ರಹದ ಹಣ ಬಳಸುತ್ತಿದ್ದೀರಾ? ಎಂದು ಪ್ರಶ್ನಿಸಿತ್ತು.