ಚಿರತೆ ದಾಳಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು? : ಹೆಚ್.ಡಿ ಕುಮಾರಸ್ವಾಮಿ

Bengaluru : ಚಿರತೆಗಳ (HDK Slams Forest Department) ಇರುವಿಕೆಯನ್ನು ಪತ್ತೆ ಹಚ್ಚಿ ಜನರನ್ನು ಎಚ್ಚರಗೊಳಿಸುವುದು ಅರಣ್ಯ ಇಲಾಖೆಯ ಹೊಣೆ.

ಆ ಚಿರತೆಗಳನ್ನು ಹಿಡಿದು ದಟ್ಟ ಕಾಡಿಗೆ ಬಿಡಬೇಕಾದ ಅಗತ್ಯವಿದೆ. ಆದರೆ, (HDK Slams Forest Department) ಅರಣ್ಯ ಇಲಾಖೆ ಗಾಢ ನಿದ್ರೆಯಲ್ಲಿ ಇದ್ದಂತೆ ಇದೆ.

ಹಾಗಾದರೆ, ಇನ್ನೆಷ್ಟು ಜೀವಗಳು ಹೋಗಬೇಕು? ಎಂದು ಜೆಡಿಎಸ್‌ ನಾಯಕ(JDS Leader) ಎಚ್.ಡಿ.ಕುಮಾರಸ್ವಾಮಿ(HD Kumarswamy) ಅವರು ಅರಣ್ಯ ಇಲಾಖೆ ವಿರುದ್ದ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್‌ (Tweet) ಮಾಡಿರುವ ಅವರು, ಅರಣ್ಯಗಳ ಅಕ್ಕಪಕ್ಕ ವಾಸ ಮಾಡುವ ಜನರಿಗೆ ರಕ್ಷಣೆ ಕಲ್ಪಿಸುವುದು,

ಚಿರತೆಗಳ ಹಾವಳಿ ನಿವಾರಿಸುವ ನಿಟ್ಟಿನಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಬೇಕು. ಈ ಉದ್ದೇಶಕ್ಕೆ ಅತ್ಯಾಧುನಿಕ ಕಾರ್ಯಪಡೆ ರಚನೆ ಮಾಡಬೇಕು. ಚಿರತೆಗಳಿಗೆ ಬಲಿಯಾದವರ ಕುಟುಂಬಗಳಿಗೆ ತಕ್ಷಣವೇ ಸೂಕ್ತ ಪರಿಹಾರ ನೀಡಬೇಕು.

ಹಾಗೆಯೇ, ತುರಹಳ್ಳಿ ಅರಣ್ಯ ಪ್ರದೇಶದಲ್ಲಿ ಚಿರತೆ ದಾಳಿಯಿಂದ ಇಬ್ಬರು ಮಹಿಳೆಯರು ತೀವ್ರವಾಗಿ ಗಾಯಗೊಂಡಿದ್ದರು ಎಂಬುದನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೆ.

ಇದನ್ನೂ ಓದಿ : https://vijayatimes.com/congress-ambulance-statement/

ನಂದಿಬೆಟ್ಟದ ಆಸುಪಾಸಿನಲ್ಲಿ ಕೂಡ ಚಿರತೆಗಳ ಹಾವಳಿ ಹೆಚ್ಚಾಗಿದೆ. ರಾತ್ರಿ ಹೊತ್ತು ಜನ ಸಂಚಾರವೇ ಕಷ್ಟವಾಗಿದೆ ಎಂದಿದ್ದಾರೆ. ಕೆಲ ದಿನಗಳ ಹಿಂದೆ ಮತ್ತೊಬ್ಬ ವಿದ್ಯಾರ್ಥಿ ಚಿರತೆ ದಾಳಿಯಿಂದ ಜೀವ ಕಳೆದುಕೊಂಡಿದ್ದ.

ಅರಣ್ಯ ಇಲಾಖೆ ಕಾರ್ಯಕ್ಷಮತೆ ಕ್ಷೀಣಿಸಿದ ಕಾರಣಕ್ಕೆ ಇಂಥ ಘಟನೆಗಳು ನಡೆಯುತ್ತಿವೆ ಎನ್ನುವುದು ನನ್ನ ಸ್ಪಷ್ಟ ಅಭಿಪ್ರಾಯ.

ರಾಜ್ಯದಲ್ಲಿ ಚಿರತೆ ದಾಳಿಗೆ ತುತ್ತಾಗುತ್ತಿರುವವರ ಸಂಖ್ಯೆ ದಿನೇದಿನೆ ಅಧಿಕವಾಗುತ್ತಿದೆ. ಅರಣ್ಯ ಇಲಾಖೆ ಈ ಬಗ್ಗೆ ಅತೀವ ನಿರ್ಲಕ್ಷ್ಯ ವಹಿಸಿರುವುದು ನನ್ನ ಗಮನಕ್ಕೆ ಬಂದಿದೆ. ಮೇಘನಾ ಎಂಬ ವಿದ್ಯಾರ್ಥಿನಿಯೊಬ್ಬರು ಚಿರತೆಗೆ ಬಲಿಯಾಗಿರುವ ಘಟನೆ ನನ್ನ ಮನ ಕಲಕಿದೆ ಎಂದಿದ್ದಾರೆ. 

https://www.facebook.com/Vijayatimeskannada/videos/887831029259382/?flite=scwspnss&mibextid=wDgIVwZBy2PExSHI

ಇನ್ನು ಇತ್ತೀಚಿನ ಕೆಲ ದಿನಗಳಿಂದ ಟಿ.ನರಸೀಪುರ (T Narasipura) ತಾಲೂಕಿನ ಸುತ್ತಮುತ್ತ ಚಿರತೆಗಳ ಹಾವಳಿ ಮೀತಿಮೀರಿದೆ. ಈಗಾಗಲೇ ಒರ್ವ ಯುವಕ ಮತ್ತು ಯುವತಿಯನ್ನು ಚಿರತೆಗಳು ದಾಳಿ ಮಾಡಿಕೊಂದು ಹಾಕಿವೆ.
Exit mobile version