Even a hundred Siddaramaiah cannot arrest me: Union Minister HD Kumaraswamy
Bengaluru: ಕಳೆದ ಕೆಲ ದಿನಗಳಿಂದ ರಾಜ್ಯ ಕಾಂಗ್ರೆಸ್(State Congress) ಸರ್ಕಾರ ನನ್ನ ವಿರುದ್ಧ ದ್ವೇಷದ ರಾಜಕೀಯ ಮಾಡುತ್ತಿದೆ. ನನ್ನ ಸಹಿಯೇ ಇಲ್ಲದ, ಫೋರ್ಜರಿ ಸಹಿಯ ಪ್ರಕರಣವನ್ನಿಟ್ಟುಕೊಂಡು ನನ್ನ ಮೇಲೆ ದಾಳಿ ನಡೆಸುತ್ತಿದೆ ನನ್ನ ವಿರುದ್ಧ ರಾಜ್ಯಪಾಲರ (Governor) ಬಳಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆಯಿಂದ ನನಗೆ ಯಾವುದೇ ಭಯ ಇಲ್ಲ. ನನ್ನನ್ನು ಬಂಧಿಸಲು ನೂರು ಸಿದ್ದರಾಮಯ್ಯಗಳು ಬರಬೇಕು ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ(H D Kumaraswamy)ಸವಾಲು ಹಾಕಿದ್ದಾರೆ.
ಬುಧವಾರ ಜೆಡಿಎಸ್(JDS)ಕಚೇರಿ ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿ(Press Meet)ನಡೆಸಿ ಎಚ್.ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಮುಖ್ಯಮಂತ್ರಿಗಳು ಕಳೆದ ವಾರದಿಂದ ಹೇಗೆ ನಡೆದುಕೊಂಡಿದ್ದಾರೆ ಎಂಬುದು ಗೊತ್ತಿದೆ. ನನಗೆ ಭಯ ಶುರುವಾಗಿದೆ ಎಂಬುದು ನನ್ನ ನೋಡಿದರೆ ಅನಿಸುತ್ತದೆಯೇ? ನಾನು ತಪ್ಪು ಮಾಡಿಲ್ಲ.ಸರಿಯಾದ ಮಾರ್ಗದಲ್ಲಿ ನಾನಿರುವಾಗ ನನಗ್ಯಾರ ಭಯವೂ ಇಲ್ಲ.ಇವರ ಆರೋಪಗಳಿಗೆ ಸಮಯ ಬಂದಾಗ ತಕ್ಕ ಉತ್ತರ ನೀಡುತ್ತೇನೆ ಎಂದು ತಿರುಗೇಟು ನೀಡಿದ್ದಾರೆ.
ಇನ್ನು ಮೈಸೂರಿನ ಮುಡಾ(Muda of Mysore) ಆಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಆಸ್ತಿ ಎನ್ನುತ್ತಿದ್ದಾರೆ. ಇಂತಹ ಭಂಡತನವನ್ನು ಈ ಹಿಂದೆ ಯಾವ ಮುಖ್ಯಮಂತ್ರಿಗಳು (Chief Ministers) ಸಹ ತೋರಿಲ್ಲ. ಈಗಾಗಲೇ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ (Lokayukta) 61 ಪ್ರಕರಣಗಳು ದಾಖಲಾಗಿವೆ. ಈ ಪೈಕಿ 50 ಪ್ರಕರಣಗಳ ತನಿಖೆಯೇ ಆಗಿಲ್ಲ. ಆಗುವುದೂ ಅನುಮಾನ ಎಂದು ಕಟುವಾಗಿ ಪ್ರಶ್ನಿಸಿದ್ದಾರೆ.ಮಾತೆತ್ತಿದರೆ ತಾವು ಕಪ್ಪು ಚುಕ್ಕೆ ಇಲ್ಲದ ನಾಯಕ, ಹಿಂದುಳಿದ ನಾಯಕ ಎಂದು ಸಿದ್ದರಾಮಯ್ಯ ಹೇಳಿಕೊಳ್ಳುತ್ತಾರೆ.
ಹಾಗಾದರೆ ಇವರು ಐದು ವರ್ಷ ಮುಖ್ಯಮಂತ್ರಿಯಾಗಿದ್ದಾಗ ಲೋಕಾಯುಕ್ತವನ್ನು ಏನು ಮಾಡಿದರು? ಎಸಿಬಿಯನ್ನು (ACB) ಯಾಕೆ ಹುಟ್ಟು ಹಾಕಿದರು ಎಂದು ಕಿಡಿಕಾರಿದ ಅವರು, ಕಾಂಗ್ರೆಸ್ ಸರ್ಕಾರದ(Congress Government) ಕಾನೂನು ಬಾಹಿರ (Illegal) ಕೃತ್ಯಗಳ ಬಗ್ಗೆ ಮೊದಲ ದಿನದಿಂದಲೂ ಮಾತನಾಡುತ್ತಲೇ ಇದ್ದೇನೆ. ಇದನ್ನು ಸಹಿಸಲಾಗದೆ ಸರ್ಕಾರದಲ್ಲಿ ದೊಡ್ಡ ಮಟ್ಟದ ಒಳಸಂಚು ನಡೆಯುತ್ತಿದೆ. ನನ್ನ ವಿರುದ್ಧ ಮಸಲತ್ತು ಮಾಡುತ್ತಿದ್ದಾರೆ ಎನ್ನುವ ವಿಷಯ ಗೊತ್ತಾಗುತ್ತಿದೆ ಎಂದು ಹೇಳಿದ್ದಾರೆ.