ಕಾಂಗ್ರೆಸ್‍ಗೆ 2ನೇ ಪ್ರಾಶಸ್ತ್ಯ ಮತ : ಹೆಚ್‍ಡಿಕೆ ಘೋಷಣೆ!

ರಾಜ್ಯಸಭಾ ಚುನಾವಣೆಯಲ್ಲಿ(Rajyasabha Election) ಕಾಂಗ್ರೆಸ್(Congress) ಅಭ್ಯರ್ಥಿ ಮನ್ಸೂರ್ ಅಲಿ ಖಾನ್(Mansoor Ali Khan) ಅವರಿಗೆ ಜೆಡಿಎಸ್(JDS) ಶಾಸಕರ 2ನೇ ಪ್ರಾಶಸ್ತ್ಯದ ಮತಗಳನ್ನು ನೀಡುವಂತೆ ಮನವೊಲಿಸುತ್ತೇನೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ(HD Kumarswamy) ಹೇಳಿದರು.


ಇನ್ನು ಜೆಡಿಎಸ್ ಪಕ್ಷ ತನ್ನ 32 ಸದಸ್ಯರ 2ನೇ ಪ್ರಾಶಸ್ತ್ಯದ ಮತಗಳನ್ನು ಕಾಂಗ್ರೆಸ್ ಅಭ್ಯರ್ಥಿಗೆ ನೀಡಲು ಸಿದ್ದವಿದೆ. ಅದೇ ರೀತಿ ಕಾಂಗ್ರೆಸ್ ಸದಸ್ಯರು ತಮ್ಮ 2ನೇ ಪ್ರಾಶಸ್ತ್ಯದ ಮತಗಳನ್ನು ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ(Kuppendra Reddy) ಅವರಿಗೆ ನೀಡಲಿ ಎಂದು ಎಚ್.ಡಿ.ಕುಮಾರಸ್ವಾಮಿ ಅವರು ಮನವಿ ಮಾಡಿದರು. ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಕೋಮುವಾದಿ ಬಿಜೆಪಿಯನ್ನು ಸೋಲಿಸಬೇಕಾದರೆ ಕಾಂಗ್ರೆಸ್ ಪಕ್ಷದ 2ನೇ ಅಭ್ಯರ್ಥಿಯನ್ನು ಜೆಡಿಎಸ್ ಬೆಂಬಲಿಸಬೇಕು ಮತ್ತು ಜೆಡಿಎಸ್ ಅಭ್ಯರ್ಥಿ ನಿವೃತ್ತರಾಗಬೇಕೆಂದು ಸಿದ್ದರಾಮಯ್ಯ ಹೇಳಿದ್ದಾರೆ.

ಆದರೆ ಬಿಜೆಪಿಯನ್ನು ಸೋಲಿಸುವುದೇ ಸಿದ್ದರಾಮಯ್ಯನವರ ಉದ್ಧೇಶವಾಗಿದ್ದರೆ, ಚುನಾವಣೆಗೂ ಮುನ್ನವೇ ನಮ್ಮ ಜೊತೆ ಚರ್ಚೆ ನಡೆಸಬೇಕಿತ್ತು. ಜೆಡಿಎಸ್‍ನಿಂದ ಅಭ್ಯರ್ಥಿ ಕಣಕ್ಕಿಳಿಸದಂತೆ ಮನವಿ ಮಾಡಬೇಕಿತ್ತು. ಆದರೆ ಈಗ ಅಭ್ಯರ್ಥಿಯನ್ನು ಘೋಷಿಸಿದ ಮೇಲೆ ನಿವೃತ್ತಿಗೊಳಿಸಲು ಸಾಧ್ಯವಿಲ್ಲ ಎಂದು ಎಚ್‍ಡಿಕೆ ಸ್ಪಷ್ಟಪಡಿಸಿದರು. ಇನ್ನು 2ನೇ ಪ್ರಾಶಸ್ತ್ಯ ಮತಗಳನ್ನು ನಮಗೆ ಕೊಡಿ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ(Randeep Surjewala) ಕರೆ ಮಾಡಿ ಮನವಿ ಮಾಡಿದ್ದಾರೆ.

ನಾವು ನಮ್ಮ 32 ಮತಗಳನ್ನು ನಿಮಗೆ ವರ್ಗಾಯಿಸುತ್ತೇವೆ. ನೀವು ನಿಮ್ಮ 2ನೇ ಅಭ್ಯರ್ಥಿಯ 2ನೇ ಪ್ರಾಶಸ್ತ್ಯದ ಮತಗಳನ್ನು ನಮಗೆ ವರ್ಗಾಯಿಸಿ. ಆಗ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸೋಣ ಎಂದು ನಾನು ಮನವಿ ಮಾಡಿದ್ದಾನೆ. ಈ ಕುರಿತು ಚರ್ಚೆ ನಡೆಸಲು ಪಕ್ಷದ ಮುಖಂಡರನ್ನು ಕಳುಹಿಸುತ್ತೇನೆ ಎಂದು ತಿಳಿಸಿದ್ದರು. ಆದರೆ ಇಲ್ಲಿಯವರೆಗೂ ಯಾರೂ ನನ್ನನ್ನು ಭೇಟಿಯಾಗಿಲ್ಲ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.

Latest News

ರಾಜಕೀಯ

“ಕಾಂಗ್ರೆಸ್ ಬಸ್‍ಗೆ ಎರಡು ಸ್ಟೇರಿಂಗ್” : ಸಚಿವ ಡಾ. ಸುಧಾಕರ್

“ಪ್ರಸ್ತುತ ಕಾಂಗ್ರೆಸ್ ಪಕ್ಷ ಈಗ ಡಂಬಲ್ ಡೋರ್ ಬಸ್‍ನಲ್ಲಿ ಪ್ರಯಾಣಿಸುತ್ತಿದೆ. ಈ ಬಸ್‍ನಲ್ಲಿರುವ ಅವರ ಪಕ್ಷದವರ ಪೈಕಿ ಯಾರನ್ನು ಪ್ರಥಮವಾಗಿ ಕೆಳಗಿಳಿಸುತ್ತಾರೋ ತಿಳಿಯದು.

ದೇಶ-ವಿದೇಶ

ಮನೆ ಮತ್ತು ಕಾರ್ಪೊರೇಟ್ ಕಚೇರಿಗಳ ಮೇಲೆ ಶೇ.18 ರಷ್ಟು ಜಿಎಸ್‌ಟಿ ? ; ಏನಿದು ಗೊಂದಲ ಇಲ್ಲಿದೆ ಮಾಹಿತಿ

ಹೊಸ ನಿಯಮಗಳ ಪ್ರಕಾರ, ಜಿಎಸ್‌ಟಿ ನೋಂದಾಯಿತ ಹಿಡುವಳಿದಾರನು ರಿವರ್ಸ್ ಚಾರ್ಜ್ ಮೆಕ್ಯಾನಿಸಂ (RCM) ಅಡಿಯಲ್ಲಿ ತೆರಿಗೆಯನ್ನು ಪಾವತಿಸಲು ಹೊಣೆಗಾರನಾಗಿರುತ್ತಾನೆ.

ಪ್ರಮುಖ ಸುದ್ದಿ

ತಾಜುದ್ದೀನ್ಜುನೈದೀ ಮತ್ತು  ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಗಣ್ಯರ ಸಂತಾಪ

ಪ್ರಖ್ಯಾತ ಗಾಯಕರು, ತಮ್ಮ ಸುಸ್ವರದ ಮೂಲಕ ಕವಿ ಗೀತೆಗಳಿಗೆ ಮೆರುಗು ತಂದುಕೊಟ್ಟಿದ್ದ ಶ್ರೀ ಶಿವಮೊಗ್ಗ ಸುಬ್ಬಣ್ಣ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಗಿದೆ.