ಮಾಜಿ ಮುಖ್ಯಮಂತ್ರಿ(Former ChiefMinister) ಹೆಚ್.ಡಿ ಕುಮಾರಸ್ವಾಮಿ(HD Kumarswamy) ಅವರು ಬಿಜೆಪಿ(BJP) ವಿರುದ್ಧ ತಿರುಗಿಬಿದ್ದಿದ್ದು, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಮತ್ತು ಇಂದು ಹುಬ್ಬಳ್ಳಿಯಲ್ಲಿ(Hubbali) ಉಂಟಾದ ಘರ್ಷಣೆ(Fight) ಪ್ರಕರಣ ಎರಡು ಘಟನೆಯನ್ನು ಉದ್ದೇಶಿಸಿ ಮಾತನಾಡಿದ್ದು, “ಹುಬ್ಬಳ್ಳಿ ಸದಾ ಶಾಂತಿಯನ್ನು ಬಯಸುವ ನಗರ. ಸಾಹಿತ್ಯ(Literature), ಸಾಂಸ್ಕೃತಿಕ(Culture) ಪರಂಪರೆಯುಳ್ಳ ತಾಣ.
ಕೆಲ ವರ್ಷಗಳಿಂದ ಇಲ್ಲಿ ಎಲ್ಲ ಸಮುದಾಯದವರು ಸಹೋದರರಾಗಿ ಬಾಳಿ ಬದುಕುತ್ತಿದ್ದಾರೆ. ಬವಣೆಯಲ್ಲಿ ಬೇಯುತ್ತಿರುವ ಬದುಕನ್ನು ಕಟ್ಟಿಕೊಳ್ಳುವ ಬದಲು ಕೋಮುದಳ್ಳುರಿ ಹರಡುವುದು ಬೇಡ. ಅಂಜುಮನ್ ಸಂಸ್ಥೆ ಮುಖಂಡರ ಜೊತೆ ತೆರಳಿ ಪೊಲೀಸರಿಗೆ ಮನವಿ ಕೊಡಿ ಎಂದು ಈಗಾಗಲೇ ನಮ್ಮ ಪಕ್ಷದ ಮುಖಂಡರಿಗೂ ಸೂಚಿಸಿದ್ದೇನೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ, ಮುಗ್ದರಿಗೆ ಅನ್ಯಾಯ ಆಗದಿರಲಿ ಎನ್ನುವುದು ನನ್ನ ಮನವಿ. ತಿಳಿಗೇಡಿ ಯುವಕನ ಪ್ರಚೋದನಾತ್ಮಕ ಪೋಸ್ಟ್‍ನಿಂದ ಹುಬ್ಬಳ್ಳಿಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿ, ಕಿಡಿಗೇಡಿಗಳ ಜೊತೆಗೆ ಕೆಲ ಅಮಾಯಕರನ್ನೂ ಪೊಲೀಸರು ಬಂಧಿಸಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ.
ಉದ್ರಿಕ್ತ ಮತಿಗೇಡಿ ಯುವಕರು ಎಸಗಿದ ಕೃತ್ಯಕ್ಕೆ ಸಂಬಂಧವಿಲ್ಲದವರನ್ನೂ ವಶಕ್ಕೆ ಪಡೆಯಲಾಗಿದೆ. ನಿಮ್ಮ ಕತ್ತಲೆ ಮುಖವಾಡ ಮತ್ತು ಪರ್ಸಂಟೆಜ್ ಪಲ್ಲಕಿಯಲ್ಲಿ ಪವಡಿಸಿದ ನಿಮ್ಮ ನಿಜಬಣ್ಣ ಇನ್ನೇನು ಕಳಚಿ ಬೀಳಲಿದೆ. ನಿಮ್ಮ ಸುಳ್ಳು ನಿಮ್ಮನ್ನೇ ಸುಡುವ ಕಾಲ ಹತ್ತಿರದಲ್ಲಿದೆ” ಎಂದು ಸರಣಿ ಟ್ವೀಟ್ ಮಾಡುವ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.