ಮೋದಿ ಮೂಲಗುರಿ ಪ್ರಾದೇಶಿಕ ಪಕ್ಷಗಳ ಮೂಲೋತ್ಪಾಟನೆ : ಹೆಚ್.ಡಿ ಕುಮಾರಸ್ವಾಮಿ!

HDK

ಪ್ರಧಾನಿ ನರೇಂದ್ರ ಮೋದಿಯವರು(Narendra Modi) ಪ್ರಾದೇಶಕ ಪಕ್ಷಗಳನ್ನು(Regional Party) ಮೂಲೆಗುಂಪು ಮಾಡಲು ಪ್ರಯತ್ನ ನಡೆಸಿದ್ದಾರೆ.

ಬಿಜೆಪಿಯ(BJP) ಪ್ರಮುಖ ರಾಜಕೀಯ ವೈರಿ ಪ್ರಾದೇಶಿಕ ಪಕ್ಷಗಳಾಗಿವೆ ಎಂದು ಎಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್(Tweet) ಮೂಲಕ ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಎಚ್‍ಡಿಕೆ ಮಾಡಿರುವ ಟ್ವೀಟ್‍ಗಳ ವಿವರ ಇಲ್ಲಿದೆ ನೋಡಿ. ದೇಶಕ್ಕೆ ಅಪಾಯ ಇರುವುದು ಕುಟುಂಬವಾದಿ ಪಕ್ಷಗಳಿಂದಲ್ಲ, ಬಿಜೆಪಿಯಂಥ ಕೋಮುವಾದಿ ಪಕ್ಷದಿಂದ. ಭಾವನಾತ್ಮಕವಾಗಿ ಜನರನ್ನು ಜಗಳಕ್ಕಿಳಿಸಿ ಜಾಗ ಹಿಡಿಯುವ ಪರಿಪಾಠ ಪ್ರಜಾಪ್ರಭುತ್ವದ(Democracy) ನಿಜವಾದ ದೊಡ್ಡ ಶತ್ರು.

ಸಂವಿಧಾನಕ್ಕೆ(Constitution) ಗಂಡಾಂತರಕಾರಿ. ಮಾನ್ಯ ಮೋದಿ ಅವರಿಗೆ ಈ ವಿಷಯ ಗೊತ್ತಿಲ್ಲವೆಂದು ನಾನು ಭಾವಿಸುವುದಿಲ್ಲ. ಇತ್ತೀಚೆಗೆ, ನಿತ್ಯವೂ ಕುಟುಂಬ ರಾಜಕಾರಣ-ಭ್ರಷ್ಟಾಚಾರದ ಬಗ್ಗೆ ಹೇಳುವ ಅವರ ಪಕ್ಷದಲ್ಲೇ ಇರುವ ʼವಂಶವೃಕ್ಷದ ಘೋಂಡಾರಣ್ಯ & ಭ್ರಷ್ಟಾಚಾರʼ ಕೂಪದ ಬಗ್ಗೆ ಅವರೇಕೆ ದಿವ್ಯಮೌನ ವಹಿಸುತ್ತಾರೆ! ಕರ್ನಾಟಕದಿಂದ ಹಿಡಿದು, ವಿಂಧ್ಯ ಪರ್ವತದ ಆಚೆಗೂ ಬಿಜೆಪಿಗರ ಕುಟುಂಬಗಳ ಕುಲಕಸುಬು ರಾಜಕೀಯವೇ ಆಗಿ, ಭ್ರಷ್ಟಾಚಾರವು ಅವರ ನಿತ್ಯ ಆಚಾರ ಆಗಿದೆ.


ಲೋಕಸಭೆಯಲ್ಲಿ ಈಗ ಬಿಜೆಪಿಗೆ 303 ಸೀಟುಗಳಿವೆ. ಆದರೆ, ಎಷ್ಟು ಸೀಟುಗಳಿಂದ ಈ ಅಂಕಿ ಆರಂಭವಾಯಿತು? ಆ ಪಕ್ಷದ ಪ್ರಯಾಣ ಶುರುವಾಗಿದ್ದು ಎಲ್ಲಿಂದ? ಮೊದಲಿನದ್ದೆಲ್ಲವನ್ನೂ ಮೋದಿ ಮರೆತರೆ ಹೇಗೆ? ಈಗಲೂ ಅವರು ಟೀಕಿಸಿದ ಕುಟುಂಬ ಕೇಂದ್ರಿತ ಪಕ್ಷಗಳು ಓಆಂ ಕೂಟದಲ್ಲಿವೆಯಲ್ಲಾ! ಜನಸಂಘ ಬಿಜೆಪಿಯಾಗಿ ರೂಪಾಂತರಗೊಂಡು ಕೇಂದ್ರದಲ್ಲಿ ಅಧಿಕಾರ ಹಿಡಿದಿದ್ದು ತನ್ನ ಸ್ವಂತ ಶಕ್ತಿಯಿಂದೇನಲ್ಲ. ಇದೇ ಕುಟುಂಬ ಕೇಂದ್ರಿತ ಪಕ್ಷಗಳ ಊರುಗೋಲಿನಿಂದ. ಓಆಂ ಹುಟ್ಟಿದ್ದು ಹೇಗೆ? ಹುಟ್ಟಿದಾಗ ಎಷ್ಟು ಪಕ್ಷಗಳಿದ್ದವು? ಈಗೆಷ್ಟಿವೆ? ಈ ಮಾಹಿತಿ ಮೋದಿ ಅವರ ಮನದಲ್ಲಿ ಇರಬೇಕಿತ್ತು.

ಜನತಾ ಪರಿವಾರದ ಟಿಸಿಲುಗಳು ದೇಶದ ಉದ್ದಗಲಕ್ಕೂ ಬೃಹತ್ ವೃಕ್ಷಗಳಾಗಿ ಬೆಳೆದು ನಿಂತಿವೆ. ಅವುಗಳ ಬೇರುಗಳು ಆಳಕ್ಕಿಳಿದು ಬಲಿಷ್ಠವಾಗಿವೆ. ಕೀಳುವುದು, ಅಲ್ಲಾಡಿಸುವುದು ಸುಲಭವಲ್ಲ. ಮೋದಿ ಅವರಿಗೆ ಈ ವಿಷಯವೂ ತಿಳಿಯದ್ದೇನಲ್ಲ.” ಈ ಪರಿವಾರ ಹಂತಹಂತವಾಗಿ ಬೆಳೆದು ಹೆಮ್ಮರವಾಗಿ, ಕ್ರಮೇಣ ಅನೇಕ ಟಿಸಿಲುಗಳೊಡೆದು ಬೇರೆ ಬೇರೆಯಾಯಿತು. ಬಿಜೆಪಿಯೂ ಈ ಪರಿವಾರದ ಒಂದು ತುಣುಕಷ್ಟೇ. ಜೆಡಿಎಸ್, ಜೆಡಿಯು, ಆರ್‍ಜೆಡಿ, ಬಿಜೆಡಿ, ಸಮಾಜವಾದಿ ಪಕ್ಷಗಳೆಲ್ಲ ಈ ಮಹಾವೃಕ್ಷದ ರೆಂಬೆ-ಕೊಂಬೆಗಳೇ.

ಲೋಕನಾಯಕ ಜಯಪ್ರಕಾಶ ನಾರಾಯಣ ಅವರ ಹೋರಾಟದ ಫಲಗಳಲ್ಲಿ ಜನಸಂಘವೂ ಒಂದು. ತುರ್ತು ಪರಿಸ್ಥಿತಿ ಹೇರಿದಾಗ ತಮ್ಮ ಆರೋಗ್ಯವನ್ನೂ ಲೆಕ್ಕಿಸದೇ ನೂರಾರು ಸಣ್ಣಪುಟ್ಟ ಪಕ್ಷಗಳನ್ನು ಒಗ್ಗೂಡಿಸಿದ್ದು ಅವರೇ. ಇವೆಲ್ಲಾ ಒಟ್ಟಾಗಿ `ಜನತಾ ಪರಿವಾರʼ ಉದಯ ಆಯಿತು. ಕುಟುಂಬ ಪಕ್ಷಗಳ ಟೀಕೆ ನೆಪವಷ್ಟೇ. ಪ್ರಧಾನಿಯವರ ಮೂಲಗುರಿ ಪ್ರಾದೇಶಿಕ ಪಕ್ಷಗಳ ಮೂಲೋತ್ಪಾಟನೆ. ಕಾಂಗ್ರೆಸ್ ನೆಲಕಚ್ಚಿದ ಮೇಲೆ ಬಿಜೆಪಿಗೆ ಪ್ರತಿರಾಜ್ಯದಲ್ಲಿ ಎದುರಾಗುತ್ತಿರುವ ರಾಜಕೀಯ ವೈರಿಗಳೆಂದರೆ ಪ್ರಾದೇಶಿಕ ಪಕ್ಷಗಳೇ. ಇಂಥ ಬಲಿಷ್ಠ ಪಕ್ಷಗಳನ್ನು ಮುಗಿಸಲು ಬಿಜೆಪಿ ಏನೆಲ್ಲ ಅಡ್ಡದಾರಿ ಹಿಡಿಯಿತು ಎನ್ನುವುದು ಗುಟ್ಟೇನಲ್ಲ.

ಕುಟುಂಬ ಆಧರಿತ ಪಕ್ಷಗಳು ದೇಶಕ್ಕೆ ಮತ್ತು ಯುವಜನರ ಪಾಲಿಗೆ ದೊಡ್ಡ ಶತ್ರು. ಇದು ರಾಜಕಾರಣದ ದೊಡ್ಡ ಸಮಸ್ಯೆಯೂ ಹೌದು.
ಪ್ರಧಾನಿ ಮೋದಿ ಅವರ ಹೊಸ ಉಪದೇಶವಿದು. ವಾಸ್ತವ ಗುರುತಿಸಿ, ಬಿಜೆಪಿಯ ಬೆಳವಣಿಗೆಯ ಹಿನ್ನೆಲೆ ಅರಿತು ಅವರು ಭಾಷಣ ಮಾಡಬೇಕಿತ್ತು. ಕೇವಲ ಚುನಾವಣಾ ಪ್ರಚಾರ ಶೈಲಿಯ ಭಾಷಣ ಮಾಡಿದ್ದಾರಷ್ಟೇ.

Exit mobile version