Karnataka: ಹಲವಾರು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು ಖಾಸಗಿ ಸಾರಿಗೆ ಒಕ್ಕೂಟಗಳು (HDK supports Bangalore bandh) ಬೆಂಗಳೂರು ಬಂದ್‌ಗೆ ಕರೆ ನೀಡಿದ್ದು, ಈ ಬಂದ್‌ಗೆ
ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ (H.D. Kumarswamy) ಅವರು ಬೆಂಬಲ ನೀಡಿರುವುದಲ್ಲದೆ ಬದುಕಿಗೆ ಗ್ಯಾರಂಟಿ (Guarantee) ಕೊಡಿ ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಅಷ್ಟೇ ಅಲ್ಲದೆ ಶಕ್ತಿ ಯೋಜನೆಯಿಂದ ಖಾಸಗಿ ಸಂಚಾರ ವ್ಯವಸ್ಥೆ ಬುಡಮೇಲಾಗಿದೆ (HDK supports Bangalore bandh) ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಅವರು ಈ ಕುರಿತು ಸರಣಿ ಟ್ವೀಟ್ ಮಾಡಿದ್ದು, ರಾಜ್ಯ ಕಾಂಗ್ರೆಸ್ (Congress) ಸರ್ಕಾರದ ಗ್ಯಾರಂಟಿಗಳ ‘ಅಡ್ಡ ಪರಿಣಾಮ’ದ ತೀವ್ರತೆ ಜನರಿಗೆ ತಟ್ಟುತ್ತಿದೆ. ಅಲ್ಲದೆ ಸರ್ಕಾರೀ ಸೌಲಭ್ಯಗಳ ಹಂಚಿಕೆಯಲ್ಲಿನ
ಅಸಮಾನತೆ, ಪಕ್ಷಪಾತವು ಅರಾಜಕತೆಯನ್ನು ಸೃಷ್ಟಿಸಿದ್ದು, ಅವೈಜ್ಞಾನಿಕ, ಅರೆಬೆಂದ ‘ಶಕ್ತಿ’ ಯೋಜನೆಯ ಫಲವಾಗಿ ಖಾಸಗಿ ಸಂಚಾರ ವ್ಯವಸ್ಥೆಯು ಇಂದು ಬುಡಮೇಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾಲವನ್ನು ಮಾಡಿಕೊಂಡು ಕ್ಯಾಬ್ (Cab) , ಆಟೋ (Auto) ಓಡಿಸುತ್ತಿದ್ದವರ ಬದುಕು ಬೀದಿ ಪಾಲಾಗಿದ್ದು, ನಿತ್ಯದ ಬದುಕು ಸಾಗಿಸುವುದೇ ಕಷ್ಟಕರ ಎನ್ನುವ ಸ್ಥಿತಿಯಲ್ಲಿ ಅವರಿದ್ದಾರೆ. ಇನ್ನು, ಸರಕಾರಿ
ಸಾರಿಗೆಯಷ್ಟೇ ಉತ್ತಮವಾಗಿ ಸೇವೆ ಒದಗಿಸುತ್ತಿರುವ ಖಾಸಗಿ ಬಸ್ ಜಾಲವನ್ನು ಸರ್ಕಾರ ಹಾಳು ಮಾಡುತ್ತಿದ್ದು, ಅನೇಕರ ಬದುಕಿಗೆ ಗ್ಯಾರಂಟಿ ಇಲ್ಲದಂತೆ ಮಾಡಿದೆ ಎಂದು ಮಾಜಿ ಸಿಎಂ ಕಿಡಿಕಾರಿದ್ದಾರೆ.
ಇನ್ನು ಈ ಬಂದ್ ನಿಂದ ಸರ್ಕಾರಿ ಸಾರಿಗೆಗೆ ಪರ್ಯಾಯವಾಗಿದ್ದ ಖಾಸಗಿ ಸಾರಿಗೆ ಜಾಲ ಸಂಪೂರ್ಣ ಸ್ಥಗಿತವಾಗಿದ್ದು, ಶಾಲಾ ಮಕ್ಕಳು, ಸಾರ್ವಜನಿಕರು, ವಿಮಾನ ನಿಲ್ದಾಣಕ್ಕೆ ತೆರಳುವವರು ಸಂಕಷ್ಟಕ್ಕೆ
ಸಿಲುಕಿದ್ದಾರೆ. ಅಲ್ಲದೆ ಹಣ್ಣು, ತರಕಾರಿ ಸೇರಿ ಅಗತ್ಯ ವಸ್ತುಗಳ ಸಾಗಣೆಯಲ್ಲಿ ವ್ಯತ್ಯಯ ಆಗಿದೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಖಾಸಗಿ ಸಾರಿಗೆ ಒಕ್ಕೂಟದವರ ಬೇಡಿಕೆಗಳನ್ನು ಪ್ರತಿಷ್ಠೆ ಪಕ್ಕಕ್ಕಿಟ್ಟು ಸರ್ಕಾರದವರು ಮಾನವೀಯತೆಯಿಂದ ಪರಿಶೀಲಿಸಬೇಕಾಗಿದ್ದು, ಅವರ ಈ ಬೇಡಿಕೆಗಳು ಈಡೇರಿಸಲಾಗದ ಅಸಾಧ್ಯ ಬೇಡಿಕೆಗಳೇನಲ್ಲ
ಅವರಿಗೂ ಕುಟುಂಬಗಳಿವೆ, ತಂದೆ-ತಾಯಿ, ಮಕ್ಕಳು ಇರುತ್ತಾರೆ ಎನ್ನುವುದನ್ನು ಸರ್ಕಾರ ಮರೆಯಬಾರದು ಎಂದು ಹೇಳಿದರು.
ಸಿಸಿಬಿ ದಾಳಿ: ಅಪ್ರಾಪ್ತವರಿಗೆ ಮಧ್ಯ ಮಾರಾಟ ಹಿನ್ನೆಲೆ ಬೆಂಗಳೂರಿನ ಪಬ್, ಬಾರ್ ಗಳ ಮೇಲೆ ಸಿಸಿಬಿ ದಾಳಿ
ವಾಸ್ತವತೆಗೆ ತಕ್ಕಂತೆ ಕಷ್ಟದಲ್ಲಿರುವ ಅವರಿಗೆ ನೆರವಾಗಬೇಕಾಗಿದ್ದು, ಕಾಟಾಚಾರಕ್ಕೆ ಕರೆದು ಮಾತನಾಡುವುದಲ್ಲ. ಮತ್ತು ನುಡಿದಂತೆಯೇ ನಡೆದು ‘ಗ್ಯಾರಂಟಿ ಬಾಧಿತರ’ ಬದುಕಿಗೆ ಪರಿಹಾರ ಒದಗಿಸಬೇಕು
ಎನ್ನುವುದು ನನ್ನ ಆಗ್ರಹವು ಕೂಡ ಅಲ್ಲದೆ ತಕ್ಷಣವೇ ಬಂದ್ ನಿರತರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಕರೆದು ಮಾತನಾಡಬೇಕು ಎಂದು ಆಗ್ರಹಿಸಿದ್ದಾರೆ.

ಖಾಸಗಿ ಸಾರಿಗೆ ಒಕ್ಕೂಟಗಳ ಬೇಡಿಕೆಗಳು
೧. ಚಾಲಕರಿಗೆ 10 ಸಾವಿರ ರೂ. ಮಾಸಿಕ ಪರಿಹಾರ ಧನ,
೨. ಬೈಕ್, ಅಸಂಘಟಿತ ವಾಣಿಜ್ಯ ಚಾಲಕರ ಹಾಗೂ ರ‍್ಯಾಪಿಡೋ ಟ್ಯಾಕ್ಸಿಗಳ ಸಂಪೂರ್ಣ ನಿಷೇಧ,
೩. ಸಾರಿಗೆ ಅಭಿವೃದ್ಧಿ ನಿಗಮ ಸ್ಥಾಪನೆ,
೪. ಸಾಲ ಸೌಲಭ್ಯ ಯೋಜನೆಯಡಿ ಆಟೋ, ಟ್ಯಾಕ್ಸಿ ಚಾಲಕರಿಗೆ ಕಡಿಮೆ ಬಡ್ಡಿ ಸಾಲ ನೀಡಬೇಕು.
೫. ವೈಟ್ ಬೋರ್ಡ್ ವಾಹನದಲ್ಲಿ ಬಾಡಿಗೆ ಮಾಡೋದಕ್ಕೆ ಬ್ರೇಕ್ ಹಾಕಬೇಕು.
೬. ಚಾಲಕರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಓಲಾ (Ola) , ಊಬರ್ (Uber) ಆಪ್ ಆಧಾರಿತ ಸೇವೆಗಳ ನಿರ್ಬಂಧ.
೭. ಖಾಸಗಿ ಬಸ್ ಗಳಿಗೂ ಶಕ್ತಿ ಯೋಜನೆ ಅಡಿ ಸೇವೆಗೆ ಅವಕಾಶ ನೀಡಬೇಕು.
ಎಂಬ ಈ ಎಲ್ಲಾ ಬೇಡಿಕೆಗಳನ್ನು ಖಾಸಗಿ ಸಾರಿಗೆ ಒಕ್ಕೂಟವು ಸರ್ಕಾರದ ಮುಂದೆ ಪ್ರಸ್ತಾಪ ಮಾಡಿದೆ.
ಭವ್ಯಶ್ರೀ ಆರ್.ಜೆ