ಹೆಚ್.ಡಿ.ಕುಮಾರಸ್ವಾಮಿಗೆ ಕೋವಿಡ್‌ ಸೋಂಕು ದೃಢ

HDK

ಮಾಜಿ ಮುಖ್ಯಮಂತ್ರಿ(Former Chiefminister) ಮತ್ತು ಜೆಡಿಎಸ್‌(JDS) ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ(HD Kumarswamy) ಅವರಿಗೆ ಕೋವಿಡ್‌ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಸ್ವತಃ ಎಚ್.ಡಿ.ಕುಮಾರಸ್ವಾಮಿ ಅವರೇ ಟ್ವೀಟ್‌(Tweet) ಮಾಡಿ ಹೇಳಿಕೊಂಡಿದ್ದಾರೆ. ತಮಗೆ ಕೋವಿಡ್‌ ಸೋಂಕು ತಗುಲಿರುವ ಕುರಿತು ಟ್ವೀಟ್‌ ಮಾಡಿರುವ ಅವರು, ವೈದ್ಯರ ಸೂಚನೆಯಂತೆ, ನಾನು 10 ದಿನಗಳ ಕಾಲ ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯುತ್ತೇನೆ.

ದಯಮಾಡಿ ಯಾರೂ ನನ್ನ ಭೇಟಿಗೆ ಬರಬಾರದೆಂದು ವಿನಂತಿಸುತ್ತೇನೆ. ಯಾರೂ ಅನ್ಯತಾ ಭಾವಿಸಬಾರದು. 3-4 ದಿನಗಳಿಂದ ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದವರೆಲ್ಲರೂ ತಪ್ಪದೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಕೋರುತ್ತೇನೆ. ಸಣ್ಣ ಪ್ರಮಾಣದ ಜ್ವರ, ಮೈಕೈ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾನು ಇಂದು ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಫಲಿತಾಂಶ ಪಾಸಿಟಿವ್ ಎಂದು ಬಂದಿದೆ. ಕೋವಿಡ್ ಲಕ್ಷಣಗಳು ಕಾಣಿಸಿಕೊಂಡಿರುವ ಕಾರಣ, ವೈದ್ಯರು ಹೋಮ್ ಐಸೋಲೇಷನ್ʼನಲ್ಲಿಯೇ ಇದ್ದು, ಚಿಕಿತ್ಸೆ ಪಡೆಯುವಂತೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.

ಇನ್ನು ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕೋವಿಡ್‌ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಅವರು ತಮ್ಮ ಎಲ್ಲ ರಾಜಕೀಯ ಕಾರ್ಯಕ್ರಮಗಳನ್ನು ರದ್ದು ಪಡಿಸಿದ್ದಾರೆ. ಮುಂದಿನ ಹತ್ತು ದಿನಗಳ ಕಾಲ ಕುಮಾರಸ್ವಾಮಿ ಅವರು ಯಾವುದೇ ಸಭೆ, ಸಮಾರಂಭ ಸೇರಿದಂತೆ ಯಾವುದೇ ಕಾರ್ಯಕ್ರಮದಲ್ಲಿ ಸಾರ್ವಜನಿಕವಾಗಿ ಭಾಗಿಯಾಗುವುದಿಲ್ಲ. ಅವರನ್ನು ಭೇಟಿಯಾಗಲು ಯಾರೂ ಬರಕೂಡದು. ಹತ್ತು ದಿನಗಳ ಕಾಲ ಸಾರ್ವಜನಿಕರ ಭೇಟಿಗೂ ಅವಕಾಶ ಇರುವುದಿಲ್ಲ ಎಂದು ಕುಮಾರಸ್ವಾಮಿಯವರ ಆಪ್ತ ಮೂಲಗಳು ತಿಳಿಸಿವೆ.


ಎಚ್.ಡಿ.ಕುಮಾರಸ್ವಾಮಿ ಅವರು ಹತ್ತು ದಿನಗಳ ಕಾಲ ಬಿಡದಿಯ ತಮ್ಮ ತೋಟದ ಮನೆಯಲ್ಲೇ ಚಿಕಿತ್ಸೆ ಪಡೆಯಲಿದ್ದಾರೆ. ಅವರೊಂದಿಗೆ ಸಂಪರ್ಕಕ್ಕೆ ಬಂದವರು ಕೂಡಲೇ ಪರೀಕ್ಷೆ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

Exit mobile version