ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ: ಎಚ್.ಡಿ.ಕುಮಾರಸ್ವಾಮಿ

Ayodhya: ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ. ಅಸಂಖ್ಯಾತ (HDK Tweet About Rama Mandir) ಕರಸೇವಕರ ಹೋರಾಟ, ತ್ಯಾಗ-ಬಲಿದಾನದ

ಫಲ ಸಾಕಾರವಾಗಿದೆ ಎಂದು ಜೆಡಿಎಸ್ (JDS) ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅಯೋಧ್ಯೆಯಲ್ಲಿ ಉದ್ಘಾಟನೆಯಾಗುತ್ತಿರುವ ರಾಮ ಮಂದಿರ ಕುರಿತು ತಮ್ಮ

ಅಭಿಪ್ರಾಯವನ್ನು (HDK Tweet About Rama Mandir) ಹಂಚಿಕೊಂಡಿದ್ದಾರೆ.

ತಂದೆ ಎಚ್.ಡಿ.ದೇವೇಗೌಡರು (H D Devegowda), ತಾಯಿ ಚೆನ್ನಮ್ಮ ಹಾಗೂ ಮಗ ನಿಖಿಲ್ ಕುಮಾರಸ್ವಾಮಿ ಅವರೊಂದಿಗೆ ರಾಮ ಮಂದಿರ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಲು

ಅಯೋಧ್ಯೆಗೆ ವಿಶೇಷ ವಿಮಾನದಲ್ಲಿ ತೆರಳಿರುವ ಅವರು, ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ. ಅಸಂಖ್ಯಾತ ಕರಸೇವಕರ ಹೋರಾಟ, ತ್ಯಾಗ-ಬಲಿದಾನದ ಫಲ

ಸಾಕಾರವಾಗಿದೆ. ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗಿ ಶ್ರೀ ಬಾಲರಾಮ ದೇವರ ಪ್ರಾಣ ಪ್ರತಿಷ್ಠೆ ಪ್ರಧಾನಿಗಳಾದ ಮಾನ್ಯ ಶ್ರೀ ನರೇಂದ್ರ ಮೋದಿ (Narendra Modi) ಅವರ ನೇತೃತ್ವದಲ್ಲಿ

ಇಂದು ನೆರವೇರುತ್ತಿದೆ.

ಈ ಎಲ್ಲಾ ಕರಸೇವಕರ ಪರಿಶ್ರಮದ ಫಲದಿಂದ ಇಂತಹ ದಿವ್ಯಕ್ಷಣಕ್ಕೆ ಪ್ರತ್ಯಕ್ಷ ಸಾಕ್ಷಿಯಾಗುವ ಪುಣ್ಯ ನನಗೆ ಧಕ್ಕಿದೆ ಮತ್ತು ಶ್ರೀರಾಮ (Shree Rama) ದೇವರಿಗೆ ಭಕ್ತಿ ಸಮರ್ಪಣೆ ಮಾಡುವ ಸುದೈವವೂ,

ಅವಕಾಶವು ನನ್ನದಾಗಿದೆ. ಎಲ್ಲ ಕರಸೇವಕರನ್ನೂ ಸ್ಮರಿಸುತ್ತಾ, ಈ ಸುಸಂದರ್ಭದಲ್ಲಿ ಸಮಸ್ತ ರಾಮಭಕ್ತರಿಗೆ ಶುಭಾಶಯಗಳನ್ನು ಕೋರುತ್ತೇನೆ. ಪ್ರತಿಯೊಬ್ಬರಿಗೂ ಆ ರಾಮದೇವರು ಸುಖ-ಶಾಂತಿ, ನೆಮ್ಮದಿ-

ಸಮೃದ್ಧಿಯನ್ನು ಕರುಣಿಸಲಿ ಎಂದು ಭಕ್ತಿಪೂರ್ವಕವಾಗಿ ಪ್ರಾರ್ಥಿಸುತ್ತೇನೆ (HDK Tweet About Rama Mandir) ಎಂದು ಟ್ವೀಟ್ ಮಾಡಿದ್ದಾರೆ.

ಇನ್ನು ರಾಮ ಮಂದಿರ (Rama Mandir) ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅಯೋಧ್ಯೆಗೆ ಭಾರತೀಯ ಸಿನಿಮಾ ರಂಗದ ಅನೇಕ ತಾರೆಯರು ಬಂದಿದ್ದಾರೆ. ನಿರ್ದೇಶಕ ರಿಷಬ್ ಶೆಟ್ಟಿ

(Rishabh Shetty), ಯಶ್, ಬಾಲಿವುಡ್ ಖ್ಯಾತ ನಟ ಅಮಿತಾಬ್ ಬಚ್ಚನ್, ರಣವೀರ್ ಕಪೂರ್, ಅನುಪಮ್ ಖೇರ್, ಅಕ್ಷಯ ಕುಮಾರ್ (Akshay Kumar), ವಿವೇಕ್ ಒಬೆರಾಯ್, ತೆಲುಗು

ನಟರಾದ ಚಿರಂಜೀವಿ, ರಾಮ್ಚರಣ್, ಪವನ್ ಕಲ್ಯಾಣ್ ಬಾಲಿವುಡ್ ಖ್ಯಾತ ನಟಿ ಕಂಗನಾ ರಣಾವತ್ತ್, ಕತ್ರಿನಾ ಕೈಫ್ (Katrina Kaif), ಗಾಯಕರಾದ ಸೋನು ನಿಗಮ್, ಕೈಲಾಶ್ ಖೇರ್,

ಕ್ರೀಡಾ ತಾರೆ ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ವೆಂಕಟೇಶ್ ಪ್ರಸಾದ್, ಅನಿಲ್ ಕುಂಬ್ಲೆ, ಆರ್.ಅಶ್ವಿನ್, ಸೈನಾ ನೆಹ್ವಾಲ್ (Saina Nehwal) ಸೇರಿದಂತೆ ಅನೇಕ ಗಣ್ಯರು ಅಯೋಧ್ಯೆಗೆ ಆಗಮಿಸಿದ್ದಾರೆ.

Exit mobile version