• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಮಹಾಪುರುಷರು ಜನ್ಮತಳೆದ ನೆಲವನ್ನು ‘ರಿಯಲ್ ಎಸ್ಟೇಟ್ ಪಾಪಕುಂಡ’ವನ್ನಾಗಿ ಮಾಡಿದ್ದು ಯಾರಪ್ಪ ಡಿ.ಕೆ.ಶಿವಕುಮಾರ್? – ಎಚ್ಡಿಕೆ ಪ್ರಶ್ನೆ

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಮಹಾಪುರುಷರು ಜನ್ಮತಳೆದ ನೆಲವನ್ನು ‘ರಿಯಲ್ ಎಸ್ಟೇಟ್ ಪಾಪಕುಂಡ’ವನ್ನಾಗಿ ಮಾಡಿದ್ದು ಯಾರಪ್ಪ ಡಿ.ಕೆ.ಶಿವಕುಮಾರ್? – ಎಚ್ಡಿಕೆ ಪ್ರಶ್ನೆ
0
SHARES
492
VIEWS
Share on FacebookShare on Twitter

ನಾಡಪ್ರಭು ಶ್ರೀ ಕೆಂಪೇಗೌಡರು (Shree Kempegowda), ಶ್ರೀ ಕೆಂಗಲ್ ಹನುಮಂತಯ್ಯನವರು, ಶ್ರೀ ಶ್ರೀ ಶ್ರೀ ಶಿವಕುಮಾರ (HDK Tweet against on DKS) ಮಹಾಸ್ವಾಮೀಜಿಗಳು,

ಶ್ರೀ ಶ್ರೀ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಗಳು ರಾಮನಗರದವರು ಎಂದು ನಿಮಗೆ ಈಗ ಜ್ಞಾನೋದಯ ಆಗಿದೆ. ಇಂಥ ಮಹಾಪುರುಷರು ಜನ್ಮತಳೆದ, ಅವರು ನಡೆದಾಡಿದ ನೆಲವನ್ನು

ʼರಿಯಲ್ ಎಸ್ಟೇಟ್ (Real Estate) ಪಾಪಕುಂಡʼವನ್ನಾಗಿ ಮಾಡಿದ್ದು ಯಾರಪ್ಪ ಡಿ.ಕೆ.ಶಿವಕುಮಾರ್ (D K Shivakumar)? ಈ ಪುಣ್ಯಪುರುಷರ ಹೆಸರು ಹೇಳುವ ನೈತಿಕತೆ ನಿಮಗೆ ಇದೆಯಾ?

ರಾಮದೇವೇರ ಬೆಟ್ಟದಲ್ಲಿ ನೆಲೆಸಿರುವ ಶ್ರೀರಾಮಚಂದ್ರ ಪ್ರಭು ನಿಮ್ಮ ದುಷ್ಟ ಹುನ್ನಾರವನ್ನು ಮೆಚ್ಚಾನೆಯೇ? ಎಂದು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ (H D Kumaraswamy)

ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ವಿರುದ್ದ (HDK Tweet against on DKS) ವಾಗ್ದಾಳಿ ನಡೆಸಿದ್ದಾರೆ.

HDK Tweet against on DKS

ಈ ಕುರಿತು ಟ್ವೀಟ್ ಮಾಡಿರುವ ಅವರು, ಈ ಜನ್ಮವಷ್ಟೇ ಅಲ್ಲ, ಇನ್ನು ಏಳು ಜನ್ಮ ಎತ್ತಿ ಬಂದರೂ ರಾಮನಗರ (Ramanagara) ಜಿಲ್ಲೆಯನ್ನು ಛಿದ್ರ ಮಾಡಲು ಸಾಧ್ಯವಿಲ್ಲ. ಇದನ್ನು ಡಿ.ಕೆ.ಶಿವಕುಮಾರ

ಅರಿತುಕೊಳ್ಳಬೇಕು. ಜನರ ಅನುಕೂಲ, ಅನನುಕೂಲಗಳನ್ನು ವೈಜ್ಞಾನಿಕವಾಗಿ ಪರಿಗಣಿಸಿ, ಪರಿಶೀಲಿಸಿ ರಾಮನಗರ ಜಿಲ್ಲೆ ರಚನೆ ಮಾಡಲಾಗಿದೆ. ಈಗ ಜಿಲ್ಲೆ ಒಡೆದು ಕನಕಪುರವನ್ನು (Kanakapura)

ಬೆಂಗಳೂರಿಗೆ ಸೇರಿಸುತ್ತೇವೆ ಎಂದರೆ ಇಡೀ ಜಿಲ್ಲೆಯ ಜನ ತಿರುಗಿಬೀಳುತ್ತಾರೆ, ಜೋಕೆ.

ಒಡೆದು ಚೂರುಚೂರು ಮಾಡುವುದಕ್ಕೆ ರಾಮನಗರವೇನು ಕಲ್ಲುಬಂಡೆಯೇ? ಈ ದೇಶಕ್ಕೆ ವಿದ್ಯಾವಂತರು ಅಲ್ಲದಿದ್ದರೂ, ಬುದ್ದಿವಂತರು ಅಲ್ಲದಿದ್ದರೂ ಪ್ರಜ್ಞಾವಂತರು ಬೇಕು. ನಾನು ಕುಮಾರಸ್ವಾಮಿ

ಅವರನ್ನು ಪ್ರಜ್ಞಾವಂತರು ಅಂದುಕೊಂಡಿದ್ದೆ. ಅವರ ತಂದೆಯವರನ್ನು ಕೇಳಿ ತಿಳಿದುಕೊಳ್ಳಬೇಕು” ಎಂದು ದರ್ಪದ ಮಾತು ಹೇಳಿದ್ದಾರೆ ಡಿಸಿಎಂ (DCM). ವಿದ್ಯೆ, ಬುದ್ಧಿ ಇಲ್ಲದಿದ್ದರೆ ಪ್ರಜ್ಞಾವಂತರು

ಹೇಗಾದಾರು? ಎನ್ನುವ ಸಾಮಾನ್ಯ ಜ್ಞಾನ ಅವರಿಗಿಲ್ಲ. ಅವರ ಪ್ರಜ್ಞಾವಂತಿಕೆ ಎಂಥಹುದು ಎಂಬುದು ಜನಜನಿತ.

ಬಡವರ ಹೊಟ್ಟೆ ಮೇಲೆ ಒಡೆಯುವ, ಕಂಡೋರ ಭೂಮಿಗೆ ಬೇಲಿ ಹಾಕುವ, ಬೆಟ್ಟಗುಡ್ಡಗಳನ್ನು ಲೂಟಿ ಮಾಡಿ ವಿದೇಶಗಳಿಗೆ ಸಾಗಿಸಿ ಹಣ ಮಾಡಿಕೊಳ್ಳುವ, ಅದಕ್ಕೆ ಅಡ್ಡ ಬಂದವರ ಜೀವ ತೆಗೆಯುವ

‘ದುಷ್ಟ’ಪ್ರಜ್ಞೆ, ‘ಅತಿ’ ಬುದ್ಧಿವಂತಿಕೆ, ‘ಅಸಾಮಾನ್ಯ’ ಜ್ಞಾನ ಖಂಡಿತವಾಗಿಯೂ ನನಗಿಲ್ಲ. ಅದು ನನಗೆ ಬೇಕಾಗಿಯೂ ಇಲ್ಲ. “ಕುಮಾರಸ್ವಾಮಿ ಏನೇನೋ ಹೇಳುತ್ತಾರೆ. ನನ್ನ ತಲೆಯಲ್ಲಿ ಏನೋ ಯೋಚನೆ

ಇದೆ” ಎನ್ನುತ್ತಾರೆ ಡಿಸಿಎಂ.

HDK Tweet against on DKS

ಇಷ್ಟಕ್ಕೂ ಅವರ ತಲೆಯಲ್ಲಿ ಏನಿದೆ? ಚಿನ್ನದ ಬೆಲೆಯ ಕನಕಪುರದ ಭೂಮಿಗಳನ್ನು ಕೊಳ್ಳೆ ಹೊಡೆದು ಬಿಲ್ಡರುಗಳಿಗೆ (Builder) ಒಪ್ಪಿಸುವುದೇ? ಅಥವಾ ತಾವು ಈಗಾಗಲೇ ಎಗ್ಗಿಲ್ಲದೆ ಬೇಲಿ ಹಾಕಿಕೊಂಡಿರುವ

ಬೇನಾಮಿ ಭೂಮಿಗಳಲ್ಲಿ ಕೋಟೆ ಕಟ್ಟಿಕೊಳ್ಳುವುದೇ? ಬಿಡಿಸಿ ಹೇಳಿದರೆ ನಾವು ಕೃತಾರ್ಥರಾಗುತ್ತೇವೆ. ಇವರು ಹೇಳಲ್ಲ, ಜನರೂ ನಂಬಲ್ಲ.. ಎಲ್ಲವೂ ನಿಗೂಢ. ಚಿಕ್ಕಬಳ್ಳಾಪುರ (Chikkaballapura),

ಚಾಮರಾಜನಗರ, ಯಾದಗಿರಿ, ಕೊಪ್ಪಳ, ಗದಗ ಸೇರಿ ಅನೇಕ ಹೊಸ ಜಿಲ್ಲೆಗಳು ರಚನೆ ಆಗಿವೆ. ಅವೆಲ್ಲವನ್ನೂ ಸುಖಾಸುಮ್ಮನೆ ಮಾಡಲಾಯಿತೆ? ಜನಹಿತ ಪರಿಗಣಿಸಿ ಹೊಸ ಜಿಲ್ಲೆಗಳನ್ನು ರಚಿಸಲಾಯಿತು.

ಅಲ್ಲಿ ಜಿಲ್ಲೆಗಳನ್ನು ರಚನೆ ಮಾಡಿದ ಮುಖ್ಯಮಂತ್ರಿಯ ಸ್ವಹಿತ ಇರಲಿಲ್ಲ.

ಕನಕಪುರವನ್ನು ಬೆಂಗಳೂರಿಗೆ (Bengaluru) ಸೇರಿಸಬೇಕೆನ್ನುವುದರ ಹಿಂದೆ ಯಾರ ಹಿತ ಅಡಗಿದೆ? ಕನಕಪುರದ ಪ್ರತಿಯೊಬ್ಬರಿಗೂ ಅಸಲಿ ಸತ್ಯ ಗೊತ್ತಿದೆ. ಇರುವ ಶ್ರೀಮಂತಿಕೆ, ಸಂಪತ್ತು ಸಾಲದೆ?

ಇನ್ನೆಷ್ಟನ್ನು ಕೂಡಿ ಹಾಕಬೇಕು? ಕನಕಪುರದ ಅಭಿವೃದ್ಧಿ ಈಗ ನೆನಪಾಗಿದೆಯಾ? 1983ಕ್ಕೆ ಮೊದಲು ಇದೇ ಕನಕಪುರ, ಸಾತನೂರು ಹೇಗಿದ್ದವು? ರಾಮಕೃಷ್ಣ ಹೆಗಡೆ (Ramakrishna Hegde) ಅವರನ್ನು

ಅಭ್ಯರ್ಥಿಯನ್ನಾಗಿ ಮಾಡಲು ಬಂದ ದೇವೇಗೌಡರಿಗೆ ಅವರಿಗೆ, ಅಲ್ಲಿನ ಸ್ಥಿತಿ ಕಂಡು ಕಣ್ಣೀರು ಬಂತು. ಒಂದು ವಿದ್ಯುತ್ ಸಂಪರ್ಕ ಇರಲಿಲ್ಲ, ರಸ್ತೆ-ಚರಂಡಿ ಇರಲಿಲ್ಲ. ಕುಡಿಯಲು ನೀರು ಇರಲಿಲ್ಲ.

ಆ ಪರಿಸ್ಥಿತಿಯನ್ನು ದೇವೇಗೌಡರು (Devegowda) ಈಗಲೂ ನೆನಪು ಮಾಡಿಕೊಳ್ಳುತ್ತಾರೆ.

ಅಂದು ಲೋಕೋಪಯೋಗಿ, ಬೃಹತ್ ನೀರಾವರಿ ಮಂತ್ರಿಗಳಾಗಿದ್ದ ಅವರು ಕನಕಪುರ, ರಾಮನಗರಕ್ಕೆ ಕಾಯಕಲ್ಪ ನೀಡಿದರು, ಆ ದುಸ್ಥಿತಿಯನ್ನು ಬದಲಿಸಿದರು. ಅವರ ಕೆಲಸವನ್ನೇ ನಾನೂ ಮುಂದುವರಿಸಿದೆ.

ನೀವೇನು ಮಾಡಿದ್ದೀರಿ ಡಿ.ಕೆ.ಶಿವಕುಮಾರ್ ರವರೇ..? ಬಡವರ ಜಮೀನಿಗೆ ಬೇಲಿ ಹಾಕಿದ್ದು, ಅಡ್ಡ ಬಂದವರ ಜೀವ ತೆಗೆದದ್ದು, ಕಲ್ಲುಬಂಡೆಗಳನ್ನು ಲೂಟಿ ಮಾಡಿದ್ದು, ಕನಕಪುರದಲ್ಲಿ ದಾದಾಗಿರಿ, ಗೂಂಡಾಗಿರಿ

ಮಾಡಿದ್ದು. ಈಗ ಕನಕಪುರವನ್ನು ಬೆಂಗಳೂರಿಗೆ (Bengaluru) ಸೇರಿಸಿ ಇನ್ನೊಂದು ಮಾಫಿಯಾ (Mafia) ಕಟ್ಟುವುದಾ? ಇದಾ ನಿಮ್ಮ ತಲೆಯಲ್ಲಿ ಇರುವ ಆಲೋಚನೆ? ಎಂದು ಪ್ರಶ್ನಿಸಿದ್ದಾರೆ.

ಇದನ್ನು ಓದಿ: ಅಮೆರಿಕದಲ್ಲಿ ನಡೆದ ಭೀಕರ ಗುಂಡಿನ ದಾಳಿಗೆ 22 ಮಂದಿ ಬಲಿ: ಬಂದೂಕುಧಾರಿಗಾಗಿ ಮುಂದುವರೆದ ಹುಡುಕಾಟ

Tags: bengalurudkshivakumarHDKumaraswamyKarnatakaquestionramanagara

Related News

ಪಾಕಿಸ್ತಾನ-ISI ಬೇಹುಗಾರಿಕೆ ಜಾಲ ಬಯಲು ಮಾಡಿದ ದಿಲ್ಲಿಯ ವಿಶೇಷ ಘಟಕ
ದೇಶ-ವಿದೇಶ

ಪಾಕಿಸ್ತಾನ-ISI ಬೇಹುಗಾರಿಕೆ ಜಾಲ ಬಯಲು ಮಾಡಿದ ದಿಲ್ಲಿಯ ವಿಶೇಷ ಘಟಕ

April 11, 2026
ಡ್ರಂಕ್ & ಡ್ರೈವ್ ಪ್ರಕರಣಗಳಲ್ಲಿ ವಾಹನ ಸೀಜ್‌ಗೆ ಬ್ರೇಕ್: ಹೈಕೋರ್ಟ್ ಮಹತ್ವದ ತೀರ್ಪು
ಮಾಹಿತಿ

ಡ್ರಂಕ್ & ಡ್ರೈವ್ ಪ್ರಕರಣಗಳಲ್ಲಿ ವಾಹನ ಸೀಜ್‌ಗೆ ಬ್ರೇಕ್: ಹೈಕೋರ್ಟ್ ಮಹತ್ವದ ತೀರ್ಪು

April 11, 2026
ಆನ್‌ಲೈನ್ ಪೇಮೆಂಟ್ ಮೇಲೆ RBI ಕಟ್ಟುನಿಟ್ಟಿನ ಕ್ರಮ: ₹10,000 ಮೇಲ್ಪಟ್ಟ ವ್ಯವಹಾರಕ್ಕೆ ‘ಕೂಲಿಂಗ್ ಅವಧಿ’
ಡಿಜಿಟಲ್ ಜ್ಞಾನ

ಆನ್‌ಲೈನ್ ಪೇಮೆಂಟ್ ಮೇಲೆ RBI ಕಟ್ಟುನಿಟ್ಟಿನ ಕ್ರಮ: ₹10,000 ಮೇಲ್ಪಟ್ಟ ವ್ಯವಹಾರಕ್ಕೆ ‘ಕೂಲಿಂಗ್ ಅವಧಿ’

April 11, 2026
ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಹೊಸ ತಿರುವು: ಇಸ್ಲಾಮಾಬಾದ್‌ನಲ್ಲಿ ಇರಾನ್-ಅಮೆರಿಕಾ ಮಹತ್ವದ ಮಾತುಕತೆ
ದೇಶ-ವಿದೇಶ

ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಹೊಸ ತಿರುವು: ಇಸ್ಲಾಮಾಬಾದ್‌ನಲ್ಲಿ ಇರಾನ್-ಅಮೆರಿಕಾ ಮಹತ್ವದ ಮಾತುಕತೆ

April 11, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.