ಗ್ಯಾರಂಟಿ ಎಫೆಕ್ಟ್ ; ಶಾಲಾ ಮಕ್ಕಳಿಗೆ ಸಿಗುತ್ತಿಲ್ಲ ಬಸ್ ಸೇವೆ ; ನಿತ್ಯವೂ ಪರದಾಟ..!

Bengaluru: ರಾಜ್ಯದಲ್ಲಿ ಕಾಂಗ್ರೆಸ್ (Congress) ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜಾರಿಗೊಳಿಸಿರುವ ಶಕ್ತಿ ಯೋಜನೆಯ ಪರಿಣಾಮದಿಂದಾಗಿ ಇದೀಗ ಶಾಲಾ ಮಕ್ಕಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಶಕ್ತಿ ಯೋಜನೆಯಡಿ (Shakti Scheme) ಮಹಿಳೆಯರಿಗೆ ಉಚಿತ ಬಸ್ ಸೇವೆ ನೀಡಿರುವುದರಿಂದ, ಮಹಿಳೆಯರೇ ಹೆಚ್ಚಾಗಿ ಸರ್ಕಾರಿ ಬಸ್ಗಳಲ್ಲಿ ಪ್ರಯಾಣಿಸುತ್ತಿರುವುದರಿಂದ, ಮಕ್ಕಳಿಗೆ ಶಾಲೆಗೆ ಹೋಗಲು ಬಸ್ಗಳಲ್ಲಿ ಜಾಗವೇ ಸಿಗುತ್ತಿಲ್ಲ. ಪ್ರತಿದಿನವೂ ಶಾಲಾ ಮಕ್ಳಳು (School Children) ಶಾಲೆಗೆ ಹೋಗಲು ಪರದಾಡುವಂತಾಗಿದೆ.

ಈ ಕುರಿತು ಟ್ವೀಟ್ ಮೂಲಕ ರಾಜ್ಯ ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿರುವ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ @HDKumaraswamy ಅವರು, ಚುನಾವಣೆ ಲಾಭಕ್ಕಾಗಿ ಕಾಂಗ್ರೆಸ್ ಪಕ್ಷ ಜಾರಿಗೆ ತಂದಿರುವ ಅಗ್ಗದ ಗ್ಯಾರಂಟಿಗಳು (Guarantee) ಮಕ್ಕಳ ಭವಿಷ್ಯಕ್ಕೂ ಎರವಾಗಿವೆ. ಮಹಿಳೆಯರಿಗೆ ಶಕ್ತಿ ತುಂಬುತ್ತೇವೆ ಎಂದು ಹೊರಟ ಆ ಪಕ್ಷದ ಸರಕಾರ, ಅವರು ಹೆತ್ತ ಮಕ್ಕಳ ಜೀವ ತೆಗೆಯುತ್ತಿದೆ.

ಇದು ಕರ್ನಾಟಕದ (Karnataka) ಮಾದರಿ. ಶಕ್ತಿ ಯೋಜನೆಯ ಪರಿಣಾಮ ನಿತ್ಯವೂ ಶಾಲೆಗೆ ಹೋಗಬೇಕಾಗಿರುವ ಮಕ್ಕಳಿಗೆ ಬಸ್ಸುಗಳಲ್ಲಿ ಪ್ರಯಾಣಕ್ಕೆ ಸ್ಥಳಾವಕಾಶ ಸಿಗುತ್ತಿಲ್ಲ. ಶಿಕ್ಷಕರು, ಕಾರ್ಮಿಕರಿಗೂ ಇದೇ ದುಸ್ಥಿತಿ. ಆಟೋ, ಲಗೇಜ್ ಆಟೋ, ಗೂಡ್ಸ್ (Auto, Luggage Auto, Goods) ವಾಹನಗಳನ್ನು ಹತ್ತಿ ಅಪಾಯಕಾರಿ ರಸ್ತೆಗಳಲ್ಲಿ ಮಕ್ಕಳು ಶಾಲೆಗೆ ಹೋಗಬೇಕು, ಮನೆಗೆ ವಾಪಸ್ಸು ಬರಬೇಕು ಒಂದೆಡೆ ಬಸ್ಸುಗಳ ಕೊರತೆ, ಇನ್ನೊಂದೆಡೆ ಮಹಿಳೆಯರು ಪ್ರವಾಸಿ ತಾಣಗಳಿಗೆ ಮುಗಿಬಿದ್ದ ಪರಿಣಾಮ ಮಕ್ಕಳು ರಾತ್ರಿಯಾದರೂ ಮನೆ ತಲುಪುತ್ತಿಲ್ಲ ಎನ್ನುವ ವರದಿ ಆಘಾತಕಾರಿ.

ಗ್ರಾಮೀಣ ಪ್ರದೇಶದಲ್ಲಿ ಈ ಸಮಸ್ಯೆ ದಿನದಿಂದ ದಿನಕ್ಕೆ ಬಿಗಡಾಯಿಸಿ, ಮಕ್ಕಳ ಪಾಡು ಕೇಳುವವರಿಲ್ಲವಾಗಿದೆ. ಪರೀಕ್ಷೆ ಸಮಯದಲ್ಲಿ ಅವರ ಸಂಕಷ್ಟ ಹೇಳತೀರದು ಎಂದಿದ್ದಾರೆ. ಇನ್ನೊಂದು ಟ್ವೀಟ್ನಲ್ಲಿ, ಶಕ್ತಿ ಯೋಜನೆ ಬಗ್ಗೆ ನನ್ನ ತಕರಾರು ಇಲ್ಲ. ಆದರೆ, ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ಬಸ್ (Bus) ಸೌಲಭ್ಯ ಕಲ್ಪಿಸಬೇಕು ಎನ್ನುವ ಬೇಡಿಕೆಗೆ ನನ್ನ ಸಂಪೂರ್ಣ ಬೆಂಬಲವಿದೆ. ರಾಜ್ಯ ಸರಕಾರ ಕೂಡಲೇ ಈ ಬಗ್ಗೆ ತುರ್ತುಕ್ರಮ ವಹಿಸಿ, ಶಾಲಾ ಮಕ್ಕಳಿಗೆ ಪ್ರತ್ಯೇಕ ಬಸ್ ವ್ಯವಸ್ಥೆ ಕಲ್ಪಿಸಬೇಕು ಎನ್ನುವುದು ನನ್ನ ಆಗ್ರಹವಾಗಿದೆ ಎಂದಿದ್ದಾರೆ.

Exit mobile version