ಮೇಲ್ನೋಟಕ್ಕೆ ಸರಳರಾಮಯ್ಯ, ಒಳಗೆ ಐಶಾರಾಮಯ್ಯ: ಸಿದ್ದರಾಮಯ್ಯ ಅವರ ವಿರುದ್ಧ ಎಚ್‌ಡಿಕೆ ವಾಗ್ದಾಳಿ

Bengaluru: ಸಿಎಂ ಸಿದ್ದರಾಮಯ್ಯ (HDK tweet against Siddaramaiah) ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ನಡುವಿನ ಟ್ವೀಟ್‌ವಾರ್‌ ಜೋರಾಗಿ ನಡೆಯುತ್ತಿದ್ದು, ಗ್ಯಾರಂಟಿ

ವಿಚಾರವಾಗಿ ಪರಸ್ಪರ (HDK tweet against Siddaramaiah) ವಾಗ್ಧಾಳಿ ಮುಂದುವರಿದಿದೆ.

ಕುಮಾರಸ್ವಾಮಿ (Kumaraswamy) ಅವರು ಸೋಮವಾರ ಸುದ್ದಿಗೋಷ್ಟಿ ನಡೆಸಿದ್ದು, 5 ಗ್ಯಾರಂಟಿಗಳ ವೈಫಲ್ಯಗಳ ಬಗ್ಗೆ ಟೀಕಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಸಿಎಂ ಸಿದ್ದರಾಮಯ್ಯ ಬಡವರ ಬಗ್ಗೆ

ನಿಮಗೆ ದ್ವೇಷ ಯಾಕೆ, ಗ್ಯಾರಂಟಿಗಳ ಬಗ್ಗೆ ಸುಳ್ಳು ಆರೋಪ ಯಾಕೆ ಎಂದು ತಿರುಗೇಟು ನೀಡಿದ್ದರು. ಇದೀಗ ಸಿಎಂ ಟ್ವೀಟ್‌ಗೆ (Tweet) ಕುಮಾರಸ್ವಾಮಿ ಮತ್ತೆ ಮರುಟ್ವೀಟ್‌ ಮಾಡಿ ಐಶಾರಾಮಯ್ಯ

ಎಂದು ವ್ಯಂಗ್ಯ ಮಾಡಿದ್ದಾರೆ.

“ಸನ್ಮಾನ್ಯ ಸಿದ್ದರಾಮಯ್ಯನವರೇ.. ನೀವು ಬಡವರ ಬಗ್ಗೆ ಮಾತನಾಡುತ್ತಿರುವುದೇ ಸೋಜಿಗ. ಐಶಾರಾಮಿಯಾದ ನೀವು ಮೇಲೆ ‘ಸರಳರಾಮಯ್ಯ! ಒಳಗೆ ಐಶಾರಾಮಯ್ಯ!!’ ಹೌದಲ್ಲವೇ? ನಾನು

ಹೇಳಿದ್ದನ್ನೇಕೆ ತಿರುಚುತ್ತೀರಿ? ಗ್ಯಾರಂಟಿಗಳ (Guarantee) ಬಗ್ಗೆ ನನಗೇಕೆ ಹೊಟ್ಟೆಯುರಿ? ನಾನು ಹೇಳಿದ್ದೇನು? ನೀವು ವಕ್ರೀಕರಿಸುತ್ತಿರುವುದೇನು? ಕಾಸು ಕೊಟ್ಟು ಸಮೀಕ್ಷೆ ಮಾಡಿಸಿಕೊಂಡ ಹಾಗಲ್ಲ ಇದು.

5 ಗ್ಯಾರಂಟಿ ಕೊಟ್ಟಿದ್ದೀರಿ, ಸರಿ. ಅದನ್ನು ನೆಟ್ಟಗೆ ಕೊಡಲು ವಿಫಲರಾಗಿದ್ದೀರಿ ಎಂದಿದ್ದೇನೆ. ಇಲ್ಲವೆಂದರೆ ಹೇಳಿ, ಬಹಿರಂಗ ಚರ್ಚೆಗೇ ಬರುತ್ತೇನೆ. ಎಲ್ಲಿಗೆ ಬರಲಿ? #ಐಶಾರಾಮಯ್ಯ ಎಂದು ಟ್ವೀಟ್ ಮಾಡಿದ್ದಾರೆ.

ಸತ್ಯ ಹೇಳಿ “ಕೋಟ್ಯಂತರ ಫಲಾನುಭವಿಗಳು ಸಂಭ್ರಮಿಸುತ್ತಿದ್ದಾರೆಯೇ?. ಮಾಧ್ಯಮಗಳು ಸುಳ್ಳು ಹೇಳುತ್ತಿವೆಯೇ? ಪೊಳ್ಳು ಬರೆಯುತ್ತಿವೆಯೇ? ನಿಮ್ಮ ಪ್ರಕಾರ ಮಾಧ್ಯಮಗಳಿಗೆ, ಪ್ರತಿಪಕ್ಷಗಳಿಗೆ ಸುಳ್ಳು

ಹೇಳುವುದೇ ಕೆಲಸವೇ? ಹಿಂದೆ ನೀವು ಮಾಡಿದ್ದೂ ಇದೇನಾ? ನಿಮ್ಮ ‘ಸಮಾಜವಾದಿ ಆತ್ಮಸಾಕ್ಷಿ’ ಹೀಗಂತ ಹೇಳುತ್ತಿದೆಯಾ? ಗ್ಯಾರಂಟಿಗಳನ್ನು ಕಾಂಗ್ರೆಸ್ (Congress) ಮತದಾರರಿಗಷ್ಟೇ ತಂದಿದ್ದೀರಿ

ಎಂದು ನಾನು ಹೇಳಿದ್ದೇನೆಯೇ? ಬಹುಶಃ ನಿಮಗೆ ಅಂಥ ಮನಃಸ್ಥಿತಿ ಇದ್ದರೂ ಇದ್ದೀತು” ಎಂದಿದ್ದಾರೆ.

ಗ್ಯಾರಂಟಿಗಳು ಸರಿಯಾಗಿ ಅನುಷ್ಠಾನವಾಗಿಲ್ಲ ಎಂದು ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದೇನೆ. ಮಾಧ್ಯಮಗಳಿಗೆ ಸತ್ಯ ತಿಳಿಸುವುದೇ ಅಪರಾಧವೇ? ನಿಮ್ಮ ದರ್ಬಾರಿನಲ್ಲಿ ಮಾಧ್ಯಮಗೋಷ್ಠಿಯೂ ಮಹಾಪಾಪವೇ?

ನಿಮ್ಮ ‘ಸಿದ್ದಾಂತರಾಳ’ ಹೀಗೆಂದು ಅಪ್ಪಣೆ ಕೊಟ್ಟಿದೆಯಾ? ಹಳ್ಳಿಗಳಿಗೆ ಹೋಗಿದ್ದೇನೆ, ಫಲಾನುಭವಿಗಳನ್ನು ಮಾತನಾಡಿಸಿದ್ದೇನೆ. ಸತ್ಯ ಹೇಳಿದ್ದೇನೆ. ಬನ್ನಿ, ನಿಮಗೂ ಸತ್ಯದರ್ಶನ ಮಾಡಿಸುತ್ತೇನೆ ಎಂದು

ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಕರ್ನಾಟಕವನ್ನು (Karnataka) ದೂರದೃಷ್ಟಿ ಇಲ್ಲದ ಗ್ಯಾರಂಟಿಗಳು ಆರ್ಥಿಕ ಆಪತ್ತಿಗೆ ದೂಡುತ್ತವೆ ಎಂದು ಆರ್ಥಿಕ ಇಲಾಖೆ ಕಳೆದ ಜೂನ್ (June) 1ರಲ್ಲಿಯೇ ಎಚ್ಚರಿಸಿತ್ತು. ಗೃಹಲಕ್ಷ್ಮೀ

(Gruhalakshmi) ಯೋಜನೆ ರಾಜ್ಯವನ್ನು ಆದಾಯ ಕೊರತೆಗೆ ನೂಕಲಿದೆ, ಪ್ರತೀವರ್ಷ ಇಷ್ಟು ಬೃಹತ್ ಮೊತ್ತ ಹೊಂದಿಸುವುದು ಕಷ್ಟ. ರಾಜ್ಯ ದಿವಾಳಿ ಆಗುತ್ತದೆ ಎಂಬ ಎಚ್ಚರಿಕೆಯನ್ನು ಹಣಕಾಸು

ಸಚಿವರಾಗಿ ಉಪೇಕ್ಷೆ ಮಾಡಿದ್ದು ನೀವಲ್ಲವೇ? ವಿತ್ತೀಯ ಹೊಣೆಗಾರಿಕೆ ಕಾಯ್ದೆಯನ್ನು ಸ್ವತಃ ವಿತ್ತ ಸಚಿವರೇ ಉಲ್ಲಂಘಿಸಿದರೆ ಹೇಗೆ? ಎಂದು ಪ್ರಶ್ನಿಸಿದ್ದಾರೆ.

ಇದನ್ನು ಓದಿ: ಏಕರೂಪ ನಾಗರಿಕ ಸಂಹಿತೆ ಜಾರಿಗೆ ಸಜ್ಜಾದ ಉತ್ತರಾಖಂಡ ; ದೇಶಾದ್ಯಂತ ಜೋರಾದ ಚರ್ಚೆ

Exit mobile version