• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಸಂವಿಧಾನಕ್ಕೆ ಶಿರಸಾಷ್ಟಾಂಗ ನಮಸ್ಕಾರ, ಇತ್ತ ‘ಆಪರೇಷನ್ ಕಮಲ’ : ಮೋದಿಗೆ ಹೆಚ್.ಡಿ.ಕೆ ಟಾಂಗ್!

Mohan Shetty by Mohan Shetty
in ರಾಜಕೀಯ, ರಾಜ್ಯ
Narendra modi
0
SHARES
0
VIEWS
Share on FacebookShare on Twitter

ಪ್ರಧಾನಿ(PrimeMinister) ನರೇಂದ್ರ ಮೋದಿ(Narendra Modi) ಅವರು ‘ಕುಟುಂಬ ರಾಜಕಾರಣ ದೇಶಕ್ಕೆ ಅಪಾಯ’ ಎಂದು ಹೇಳಿಕೆ ನೀಡಿದ ಬೆನ್ನಲ್ಲೇ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ(HD Kumarswamy) ಅವರು ಪ್ರಧಾನಿ ಮೋದಿ ಮತ್ತು ಬಿಜೆಪಿ(BJP) ವಿರುದ್ದ ಟ್ವೀಟ್‍ಗಳ ಮೂಲಕ ವಾಗ್ದಾಳಿ ನಡೆಸಿದ್ದಾರೆ.

Narendra modi

ಈ ಕುರಿತು ಕುಮಾರಸ್ವಾಮಿ ಅವರು ಮಾಡಿರುವ ಟ್ವೀಟ್‍ಗಳ ವಿವರ ಇಲ್ಲಿದೆ ನೋಡಿ. ಕುಟುಂಬ ರಾಜಕಾರಣದ ನೆಪವೊಡ್ಡಿ ಪ್ರಾದೇಶಿಕ ಪಕ್ಷಗಳನ್ನು ಮುಗಿಸುವ ತಂತ್ರ ಫಲಿಸದು. ಭಾರತವೆಂದರೆ; ಬಿಜೆಪಿಯವರೇ ಅಲ್ಲ, 140 ಕೋಟಿಗೂ ಹೆಚ್ಚು ಭಾರತೀಯರು ಸೇರಿದರೆ ಮಾತ್ರ ಭಾರತ. ಪ್ರಧಾನಿಗಳು ಈ ಆಶಯವನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂದು ನಂಬಿದ್ದೇನೆ. ಹೋಗಲಿ.. ಮೋದಿ ಅವರೂ ಸಿಎಂ ಕುರ್ಚಿ ಮಾರಾಟದ ಬಗ್ಗೆ ಮಾತನಾಡಲಿಲ್ಲ. ಈ ಘನಘೋರ ಆರೋಪದ ಬಗ್ಗೆಯೂ ಅವರದ್ದು ಮುಂದುವರಿದ ಮೌನ!

ಇದನ್ನೂ ಓದಿ : https://vijayatimes.com/siddaramaiah-angry-on-rss/

ಅಲ್ಲಿಗೆ ಶಾಸಕರ ಹೇಳಿಕೆ ಸತ್ಯ ಎಂದಾಯಿತಲ್ಲ. ಪಿಎಸ್‍ಐ ಹುದ್ದೆಗಳಂತೆ ಸಿಎಂ ಪದವಿಯನ್ನೂ ಮಾರಿಕೊಳ್ಳುವುದು ದೇಶಕ್ಕೆ ಸೌಭಾಗ್ಯವಾ? ಯುವಕರಿಗೆ ಆದರ್ಶವಾ? ಮುಖ್ಯಮಂತ್ರಿ ಸ್ಥಾನವನ್ನು ಕರ್ನಾಟಕದಲ್ಲಿ ಮಾರಾಟಕ್ಕೆ ಇಟ್ಟಿದ್ದು ಯಾರು? ಕುಟುಂಬ ರಾಜಕಾರಣದ ಪಕ್ಷವೋ? ಬಿಜೆಪಿಯೋ? “ರೂ.2,500 ಕೋಟಿ ಕೊಡಿ, ನಿಮ್ಮನ್ನು ಸಿಎಂ ಮಾಡುತ್ತೇವೆ” ಎಂದು ಕೇಳಿದ ಪಾರ್ಟಿ ಬಿಜೆಪಿ. ಇದನ್ನು ಹೇಳಿದ್ದು ನಾವಲ್ಲ, ಸ್ವತಃ ಬಿಜೆಪಿ ಶಾಸಕರೇ! ಆ ಶಾಸಕರ ಮೇಲೆ ಶಿಸ್ತುಕ್ರಮ ಇರಲಿ, ಒಂದು ನೊಟೀಸನ್ನೂ ಕೊಡಲಿಲ್ಲ.

Politics

ಒಂದೆಡೆ ಸಂಸತ್ತು-ಸಂವಿಧಾನಕ್ಕೆ ಶಿರಸಾಷ್ಟಾಂಗ ನಮಸ್ಕಾರ! ಇನ್ನೊಂದೆಡೆ, ಆಪರೇಷನ್ ಕಮಲದ ಮೂಲಕ ಸಂವಿಧಾನದ ಶಿರಚ್ಛೇದ! ಇದೆಂಥಾ ರಾಜಕಾರಣ? ಇದು ರಾಷ್ಟ್ರೀಯವಾದಿ ಪಕ್ಷದ ಸೊಗಲಾಡಿತನ. ‘ಆಪರೇಷನ್ ಕಮಲವನ್ನೇ ರಾಷ್ಟ್ರೀಕರಣ’ ಮಾಡಿದ ಕಿರಾತಕ ರಾಜಕಾರಣಕ್ಕೆ ಮೌನಸಮ್ಮತಿ ತೋರಿದವರು ಮೋದಿ ಅವರಲ್ಲವೇ? ಜನಾದೇಶದಂತೆ ರಚನೆಯಾಗಿದ್ದ ಮಧ್ಯಪ್ರದೇಶದ ಸರಕಾರವನ್ನು ಕೆಡವಿದ್ದು ಇವರ ಪಕ್ಷವೇ ಅಲ್ಲವೆ?

ಇದನ್ನೂ ಓದಿ : https://vijayatimes.com/dont-worry-for-tored-notes/

ಮೋದಿ ಅವರು ಈ ನೀತಿಹೀನ ಸರಕಾರಕ್ಕೆ ಅಧಿಕೃತ ಮುದ್ರೆ ಒತ್ತಿದ್ದು ಸುಳ್ಳಾ? ಕೋಟಿ ಕೋಟಿ ಲೂಟಿ ಹೊಡೆದು ಅಕ್ಕಪಕ್ಕದ ಪಕ್ಷಗಳ ಶಾಸಕರನ್ನು ಎಗರಿಸಿಕೊಂಡು ಹೋಗಿದ್ದು ದೇಶಕ್ಕೆ ಒಳ್ಳೆಯದಾ? ಯುವಜನರಿಗೆ ದಾರಿದೀಪವಾ? ಈ ಬಗ್ಗೆ ಮೋದಿ ಅವರ ಮನ್ ಕೀ ಬಾತ್ ಮೌನವಾಗಿದೆ! ಏಕೆ? ಕರ್ನಾಟಕದಲ್ಲಿ ಎರಡು ಸಲ ಬಿಜೆಪಿ ಸರಕಾರ ಬಂದಿದ್ದು ಹೇಗೆ? ರಾಜಮಾರ್ಗದಲ್ಲಿ ಬಂತಾ? ಇಲ್ಲ, ಶಾಸಕರನ್ನು ಸಂತೆಯಲ್ಲಿ ರಾಸುಗಳಂತೆ ನಿರ್ಲಜ್ಜವಾಗಿ ಖರೀದಿಸಿದ್ದರಿಂದಲೇ ಬಂದ ʼಅಕ್ರಮ ಸರಕಾರʼವಿದು! ಪ್ರಧಾನಿಯವರು ಇದನ್ನು ನಿರಾಕರಿಸುತ್ತಾರಾ?

hdk

ಜಾತಿ, ಧರ್ಮ, ಸಂಸ್ಕೃತಿ, ಭಾಷೆ, ಆಹಾರ, ವ್ಯಾಪಾರ ಇತ್ಯಾದಿಗಳ ಮೂಲಕ ವಿವಿಧತೆಯಲ್ಲಿ ಏಕತೆ ಸಾಧಿಸಿದ್ದ ಭಾರತದ ಭಾವೈಕ್ಯತೆಯ ಬುಡಕ್ಕೆ ಕೊಡಲಿ ಹಾಕಿದವರು ಯಾರು? ಪ್ರಜಾಸತ್ತೆಯ ಅಖಂಡ ರಕ್ಷಕನಾದ ಸಂವಿಧಾನಕ್ಕೇ ಅಪಚಾರವೆಸಗಿ `ಆಪರೇಷನ್ ಕಮಲʼವೆಂಬ ಅನೈತಿಕ ರಾಜಕಾರಣ ಆರಂಭ ಮಾಡಿದ್ದು ಯಾರು?

Tags: bjpJDSKarnatakapoliticalpolitics

Related News

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023
ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ
ಮಾಹಿತಿ

ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ

March 28, 2023
ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 28, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.