1980ರಲ್ಲೇ ಡಿಕೆಶಿ ಸಿಡಿ ಫ್ಯಾಕ್ಟರಿ ಆರಂಭಿಸಿದ್ದಾರೆ-ಡಿಕೆಶಿ ವಿರುದ್ಧ ಗಂಭೀರ ಆರೋಪ ಮಾಡಿದ ಎಚ್ಡಿಕೆ

Mysore: ರಾಜ್ಯ ರಾಜಕಾರಣದಲ್ಲಿ ಆಗಾಗ ಸಂಚಲನ ಮೂಡಿಸುವ ಮಹಾನುಭಾವರು 1980ರಲ್ಲೇ ಸಿಡಿ ಫ್ಯಾಕ್ಟರಿ ಓಪನ್ ಮಾಡಿದ್ದಾರೆ. ಅವರಿಂದಲೇ ಪ್ರಜ್ವಲ್ ರೇವಣ್ಣ (Prajwal Revanna) ಅವರಿಗೆ ಸಂಬಂಧಿಸಿದ ಅಶ್ಲೀಲ ವಿಡಿಯೋಗಳು ಹರಿದಾಡಿವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (D K Shivakumar) ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತೊಮ್ಮೆ ಆರೋಪ ಮಾಡಿದ್ದಾರೆ.

ಅಶ್ಲೀಲ ದೃಶ್ಯಗಳನ್ನು ವಿಡಿಯೋ ಮಾಡಿರುವುದು ಒಂದು ಅಪರಾಧವಾದರೆ, ಅದರ ವೀಡಿಯೋವನ್ನು ಚುನಾವಣೆಯ ದುರುದ್ದೇಶಕ್ಕಾಗಿ ಸಾರ್ವಜನಿಕರಿಗೆ ವಿತರಿಸಿದ್ದು ಅಪರಾಧವಲ್ಲವೇ? ಎಂದು ಅವರು ಪ್ರಶ್ನಿಸಿದ್ದಾರೆ.ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪ್ರಕರಣದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಹಗರಣಕ್ಕೆ (Hassan Pendrive Case) ಸಂಬಂದಿಸಿದ ಅಶ್ಲೀಲ ದೃಶ್ಯಗಳನ್ನು ವಿಡಿಯೋ ಕಿಂಗ್ ಪಿನ್ ಇವರೇ ಎಂದು ಹರಿ ಹಾಯ್ದಿದ್ದಾರೆ.

ಇನ್ನು ತಮಗೆ ಡಿಕೆಶಿಯವರನ್ನು ಕಂಡರೆ ಅಸೂಯೆ ಎಂದು ಟೀಕಿಸಿರುವ ಕಾಂಗ್ರೆಸ್ (Congress) ನಾಯಕರ ಹೇಳಿಕೆಗಳಿಗೆ ಉತ್ತರಿಸಿದ ಅವರು ನನಗೆ ಡಿಕೆ ಶಿವಕುಮಾರ್ ಕಂಡರೆ ಅಸೂಯೆ ಅಂತಾ ಹೇಳಿದ್ದಾರೆ. ನಾನು ಯಾಕೆ ಅವರನ್ನು ನೋಡಿ ಅಸೂಯೆ ಪಡಲಿ. ಅಧಿಕಾರ ಅವರ ಅಪ್ಪನ ಆಸ್ತಿಯಲ್ಲ. ರಾಜಕೀಯದಲ್ಲಿ ಏಳು ಬೀಳು ಅದು ಭಗವಂತ ಇಚ್ಚೆ. ಇದರಲ್ಲಿ ಅಸೂಯೆ ಯಾಕೆ? ಪ್ರಧಾನಿ ಸ್ಥಾನವನ್ನೇ ಅತ್ಯಂತ ಸುಲಭವಾಗಿ ಬಿಟ್ಟು ಕೊಟ್ಟಿರುವ ವಂಶ ನಮ್ಮದು. ಎಲ್ಲಾ ಅಧಿಕಾರವನ್ನು ನಾವು ನೋಡಿ ಆಗಿದೆ. ನಮಗೆ ಅಧಿಕಾರ ಬೇಡ ಅಂದರೂ ಹಿಂದೆಲ್ಲಾ ಅದು ನಮ್ಮ ಹಿಂದೆ ಬಂದಿದೆ. ನಾವು ಅಧಿಕಾರ ಹುಡುಕಿಕೊಂಡು ಹೋಗಿಲ್ಲ. ನಿಮಗೆ ಇದು ನೆನಪಿರಲಿ ಎಂದು ಕಿಡಿ ಕಾರಿದ್ದಾರೆ.

Exit mobile version