ಗೋವಾದಲ್ಲಿ ಕನ್ನಡಿಗರ ಮೇಲಿನ ದೌರ್ಜನ್ಯಕ್ಕೆ ಎಚ್ಡಿಕೆ ಕಳವಳ: ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆಯಲು ತೀರ್ಮಾನ

ಬೆಂಗಳೂರು.ಜು.02: ಗೋವಾದಲ್ಲಿ ಕನ್ನಡಿಗರ ಮೇಲಿನ ದೌರ್ಜನ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಈ ಬಗ್ಗೆ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಗೋವಾದಲ್ಲಿ ಪೊಲೀಸರ ದೌರ್ಜನ್ಯಕ್ಕೆ ಒಳಗಾದ ಮುದ್ದೇಬಿಹಾಳ ಮೂಲದ ಒಂದೇ ಕುಟುಂಬದ ಮೂವರು ಮಾನಕ್ಕೆ ಅಂಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಗೋವಾದಲ್ಲಿ ಕನ್ನಡಿಗರ ಬದುಕು ಎಂಥಾ ಡೋಲಾಯಮಾನ ಪರಿಸ್ಥಿತಿಯಲ್ಲಿದೆ, ಅಲ್ಲಿ ಕನ್ನಡಿಗರು ಎಂಥ ಅಪಾಯಕಾರಿ ಜೀವನ ನಡೆಸುತ್ತಿದ್ದಾರೆ ಎಂಬುದಕ್ಕೆ ಈ ಪ್ರಕರಣ ಸಾಕ್ಷಿ.

ಪ್ರಕರಣವೊಂದರಲ್ಲಿ ಕನ್ನಡಿಗ ಕುಟುಂಬಕ್ಕೆ ಗೋವಾದ ಪೊಲೀಸರು ಕಿರುಕುಳ ನೀಡಿದ್ದರು ಎಂಬುದು ಅವರ ಡೆತ್‌ನೋಟ್‌ನಲ್ಲೇ ಇದೆ ಎನ್ನಲಾಗಿದೆ. ಕಳ್ಳತನದಂಥ ಬಂಡ ಬಾಳು ಬದುಕಿದ್ದಿದ್ದರೆ ಆ ಕುಟುಂಬ ಆತ್ಮಹತ್ಯೆಯಂಥ ನಿರ್ಧಾರಕ್ಕೆ ಬರುತ್ತಿರಲಿಲ್ಲ. ಕನ್ನಡಿಗರೆಂಬ ಕಾರಣಕ್ಕೆ ಈ ಕುಟುಂಬದ ಮೇಲೆ ದೌರ್ಜನ್ಯ ನಡೆದಿರುವುದು ಸ್ಪಷ್ಟವಾಗಿ ಕಾಣುತ್ತಿದೆ.

ಮೂವರ ಆತ್ಮಹತ್ಯೆ ನಂತರ ಪೊಲೀಸರೂ ಅನುಮಾನಾಸ್ಪದವಾಗಿ ವರ್ತಿಸಿದ್ದಾರೆ. ತರಾತುರಿಯಲ್ಲಿ ಪಂಚನಾಮೆ ನಡೆಸಿದ್ದಾರೆ ಎಂಬ ಆರೋಪ ಸ್ಥಳೀಯ ಕನ್ನಡ ಸಂಘಟನೆಗಳಿಂದ ವ್ಯಕ್ತವಾಗಿದೆ. ಈ ಬಗ್ಗೆ ಪ್ರಮೋದ್ ಸಾವಂತ್ ಅವರು ಕೂಡಲೇ ಗಮನ ಹರಿಸಬೇಕು. ಪೊಲೀಸ್‌ ಕಿರುಕುಳದ ನಿಟ್ಟಿನಲ್ಲಿ ತನಿಖೆ ನಡೆಯಬೇಕು. ಈ ಮೂಲಕ ಕನ್ನಡಿಗರ ಸುರಕ್ಷತೆಯನ್ನು ಖಾತ್ರಿಪಡಿಸಬೇಕು.

ಗೋವಾದಲ್ಲಿ ಕನ್ನಡಿಗರ ಮೇಲಿನ ದೌರ್ಜನ್ಯಗಳಿಗೆ ಕೊನೆಮೊದಲಿಲ್ಲ ಎಂಬಂತಾಗಿದೆ. ಕನ್ನಡಿಗರನ್ನು ಒಕ್ಕಲೆಬ್ಬಿಸುವುದರಿಂದ ಆರಂಭಿಸಿ, ಸಣ್ಣ ಪುಟ್ಟ ಪ್ರಕರಣಗಳಲ್ಲಿ ಸಿಲುಕಿಸುವ ವರೆಗೆ ವಿಧವಿಧದ ದೌರ್ಜನ್ಯಗಳು ನಡೆಯುತ್ತಲೇ ಇವೆ. ಈ ಬಗ್ಗೆ ಕರ್ನಾಟಕ ಸರ್ಕಾರ ಗಮನಹರಿಸಬೇಕು. ನಾನೂ ಕೂಡ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆಯುತ್ತೇನೆ ಎಂದು ಸರಣಿ ಟ್ವೀಟ್ ಮಾಡಿದ್ದಾರೆ.

Latest News

ಆರೋಗ್ಯ

ಸಕ್ಕರೆ ಖಾಯಿಲೆ ಇರುವವರು ಈ ಹಣ್ಣುಗಳನ್ನು ಸೇವಿಸಬಹುದು ; ತಪ್ಪದೇ ಈ ಮಾಹಿತಿ ಓದಿ

ತಜ್ಞರ ಪ್ರಕಾರ, ಸಕ್ಕರೆ ಕಾಯಿಲೆ ಇರುವವರು ಈ 5 ವಿಧದ ಹಣ್ಣುಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಅಂತಹ ಹಣ್ಣುಗಳ ವಿವರ ಇಲ್ಲಿದೆ ನೋಡಿ.

ದೇಶ-ವಿದೇಶ

ದೇಶದ ಹೆಮ್ಮೆ ತ್ರಿವರ್ಣ ಧ್ವಜವೂ ಕೂಡ ಬಿಜೆಪಿಗೆ ವ್ಯಾಪಾರದ ಸರಕಾಗಿದೆ : ಬಿ.ಕೆ.ಹರಿಪ್ರಸಾದ್

38×11,80,000=4.484 ಕೋಟಿ, ಹೇಗಿದೆ ಮೋದಿ ಸರ್ಕಾರದ ಲೂಟಿ? ಕೇಂದ್ರದ ಮೋದಿ ಸರ್ಕಾರ ವಸೂಲಿ ಬಾಜಿತನಕ್ಕೆ ರಾಷ್ಟ್ರಧ್ವಜವನ್ನ ಬಳಸಿಕೊಂಡಿರುವುದು ಅಕ್ಷಮ್ಯ ಅಪರಾಧ

ಕ್ರೀಡೆ

ಕಾಮನ್‌ವೆಲ್ತ್ ಗೇಮ್ಸ್‌ 2022 ; ಕಂಚಿನ ಪದಕ ಗೆದ್ದ ಪತ್ನಿಯನ್ನು ಅಭಿನಂದಿಸಿದ ದಿನೇಶ್ ಕಾರ್ತಿಕ್

ಭಾರತದ ಸ್ಕ್ವ್ಯಾಶ್ ಆಟಗಾರ್ತಿ ದೀಪಿಕಾ ಪಲ್ಲಿಕ್ಕಲ್(Deepika Pallikal) ಮಿಕ್ಸೆಡ್ ಡಬಲ್ಸ್ ವಿಭಾಗದಲ್ಲಿ ಕಂಚಿನ ಪದಕ(Bronze Medal) ಗೆದ್ದುಕೊಂಡಿದ್ದಾರೆ.

ಆರೋಗ್ಯ

ದೇಹ ನೀಡುವ `ಈ’ ಸೂಚನೆಗಳು ಕಿಡ್ನಿ ವೈಪಲ್ಯವನ್ನು ಸೂಚಿಸುತ್ತವೆ ; ಇಲ್ಲಿದೆ ಮಾಹಿತಿ ಓದಿ

ಕಿಡ್ನಿ(Kidney) ನಮ್ಮ ದೇಹದ ಪ್ರಮುಖ ಅಂಗವಾಗಿದೆ. ದೇಹದಲ್ಲಿ ಶುದ್ಧ ರಕ್ತವನ್ನು ಪರಿಚಲನೆ ಮಾಡುವಲ್ಲಿ ಮೂತ್ರಪಿಂಡಗಳು ಮುಖ್ಯ ಪಾತ್ರವಹಿಸುತ್ತವೆ.