ಹೃದಯ ಸಂಬಂಧಿ ಕಾಯಿಲೆಗಳು ಇತ್ತೀಚಿನ ದಿನಗಳಲ್ಲಿ ಯುವ ಜನತೆಯಲ್ಲಿ ಕಾಡುತ್ತಿದೆ ಆದರೆ ಇದನ್ನು ತಡೆಗಟ್ಟಲು ಪರಿಹಾರ ಇಲ್ಲಿದೆ. ಹೃದಯದ ಆಂತರಿಕ ಸಮಸ್ಯೆಗಳು ಮತ್ತು ಇತರ ಅಂಗಗಳ ಕಾಯಿಲೆಯಿಂದ ಹೃದಯದ ಮೇಲೆ ಆಗುವ ಪರೋಕ್ಷ ಪರಿಣಾಮಗಳು – ಎರಡೂ ಅಪಾಯಕಾರಿ. ಆಂತರಿಕ ಸಮಸ್ಯೆಗಳಲ್ಲಿ ಪ್ರಮುಖವಾದದ್ದು ಕರೊನರಿ ರಕ್ತನಾಳಗಳ ಸಮಸ್ಯೆ. ಈ ರಕ್ತನಾಳಗಳು ಅಗತ್ಯ ಆಕ್ಸಿಜನ್ ಮತ್ತು ಪೋಷಕಾಂಶಗಳನ್ನು ರಕ್ತದ ಮೂಲಕ ಹೃದಯಕ್ಕೆ ತಲುಪಿಸುವ ಏಕೈಕ ಮಾರ್ಗ. ಯಾವುದೇ ಕಾರಣದಿಂದ ಈ ರಕ್ತನಾಳಗಳ ಒಳಭಾಗ ಪೂರ್ತಿಯಾಗಿ ಕಟ್ಟಿಕೊಂಡು ರಕ್ತಸಂಚಾರ ಸಾಧ್ಯವಿಲ್ಲದಂತಾದರೆ, ಆಗ ಹೃದಯದ ಸ್ನಾಯುಗಳಿಗೆ ಆಕ್ಸಿಜನ್ ಸರಬರಾಜು ನಿಂತುಹೋಗುತ್ತದೆ.

ಒಂದು ಕ್ಷಣವೂ ಬಿಡುವಿಲ್ಲದಂತೆ ಕೆಲಸ ಮಾಡುವ ಹೃದಯಕ್ಕೆ ನಿರಂತರವಾಗಿ ಆಕ್ಸಿಜನ್ ಸರಬರಾಜು ಆಗುತ್ತಲೇ ಇರಬೇಕು. ಇದು ಕೆಲವು ನಿಮಿಷಗಳ ಕಾಲ ಸಂಪೂರ್ಣವಾಗಿ ನಿಂತುಹೋದರೆ ಹೃದಯದ ಸ್ನಾಯುಗಳು ಇಂಚಿಂಚಾಗಿ ಮರಣಿಸುತ್ತವೆ. ಇದು ಒಂದು ಹಂತ ತಲುಪಿದಾಗ ಹೃದಯದ ಕಾರ್ಯಕ್ಷಮತೆ ಹಠಾತ್ತಾಗಿ ಇಳಿದುಹೋಗುತ್ತದೆ. ರಕ್ತವನ್ನು ಪಂಪ್ ಮಾಡುವ ಸಾಮರ್ಥ್ಯ ತೀವ್ರವಾಗಿ ಕುಂದುತ್ತದೆ. ಆಗ ಶರೀರದ ಯಾವ ಅಂಗಕ್ಕೂ ರಕ್ತದ ಸರಬರಾಜು ಸರಿಯಾಗಿ ಆಗುವುದಿಲ್ಲ. ಎಲ್ಲಾ ಅಂಗಗಳೂ ಘಾಸಿಗೊಳ್ಳುತ್ತವೆ. ಈ ಪ್ರಕ್ರಿಯೆಗೆ ಹೃದಯಾಘಾತ ಎಂದು ಹೆಸರು. ಹೃದಯದ ಎಡಭಾಗಕ್ಕೆ ರಕ್ತ ಪೂರೈಸುವ ಕರೊನರಿ ರಕ್ತನಾಳ ಸಂಪೂರ್ಣವಾಗಿ ಕಟ್ಟಿಕೊಂಡರೆ ಹೃದಯಾಘಾತದ ಪ್ರಕ್ರಿಯೆ ವೇಗವಾಗಿ ಆಗುತ್ತದೆ.

ಹೀಗೆ ಕೆಲವೇ ನಿಮಿಷಗಳಲ್ಲಿ ಶರೀರವನ್ನು ಸ್ತಬ್ಧಗೊಳಿಸಬಲ್ಲದು. ಇದನ್ನು ತೀವ್ರ ಹೃದಯಾಘಾತ ಎನ್ನಬಹುದು. ಹೃದಯದ ಆಂತರಿಕ ಸಮಸ್ಯೆಗಳು ಮತ್ತು ಇತರ ಅಂಗಗಳ ಕಾಯಿಲೆಯಿಂದ ಹೃದಯದ ಮೇಲೆ ಆಗುವ ಪರೋಕ್ಷ ಪರಿಣಾಮಗಳು – ಎರಡೂ ಅಪಾಯಕಾರಿ. ಆಂತರಿಕ ಸಮಸ್ಯೆಗಳಲ್ಲಿ ಪ್ರಮುಖವಾದದ್ದು ಕರೊನರಿ ರಕ್ತನಾಳಗಳ ಸಮಸ್ಯೆ. ಈ ರಕ್ತನಾಳಗಳು ಅಗತ್ಯ ಆಕ್ಸಿಜನ್ ಮತ್ತು ಪೋಷಕಾಂಶಗಳನ್ನು ರಕ್ತದ ಮೂಲಕ ಹೃದಯಕ್ಕೆ ತಲುಪಿಸುವ ಏಕೈಕ ಮಾರ್ಗ. ಯಾವುದೇ ಕಾರಣದಿಂದ ಈ ರಕ್ತನಾಳಗಳ ಒಳಭಾಗ ಪೂರ್ತಿಯಾಗಿ ಕಟ್ಟಿಕೊಂಡು ರಕ್ತಸಂಚಾರ ಸಾಧ್ಯವಿಲ್ಲದಂತಾದರೆ, ಆಗ ಹೃದಯದ ಸ್ನಾಯುಗಳಿಗೆ ಆಕ್ಸಿಜನ್ ಸರಬರಾಜು ನಿಂತುಹೋಗುತ್ತದೆ. ಒಂದು ಕ್ಷಣವೂ ಬಿಡುವಿಲ್ಲದಂತೆ ಕೆಲಸ ಮಾಡುವ ಹೃದಯಕ್ಕೆ ನಿರಂತರವಾಗಿ ಆಕ್ಸಿಜನ್ ಸರಬರಾಜು ಆಗುತ್ತಲೇ ಇರಬೇಕು. ಇದು ಕೆಲವು ನಿಮಿಷಗಳ ಕಾಲ ಸಂಪೂರ್ಣವಾಗಿ ನಿಂತುಹೋದರೆ ಹೃದಯದ ಸ್ನಾಯುಗಳು ಇಂಚಿಂಚಾಗಿ ಮರಣಿಸುತ್ತವೆ.

ಹೃದಯದ ನಿರ್ವಹಣೆ ನಮ್ಮ ಜೀವನಶೈಲಿಗೆ ಸಂಬಂಧಿಸಿದ್ದು. ಕಾಯಿಲೆ ಬಂದ ನಂತರ ಚಿಕಿತ್ಸೆ ಪಡೆಯುವುದಕ್ಕಿಂತಲೂ ಕಾಯಿಲೆ ಬಾರದಂತೆ ನಿರ್ವಹಿಸುವುದು ಉತ್ತಮ. ತಾಜಾ ಹಣ್ಣು, ತರಕಾರಿ, ಧಾನ್ಯಗಳು, ಪ್ರೋಟೀನ್ ಅಂಶ ಅಧಿಕವಾಗಿರುವ ಆಹಾರ, ಜಿಡ್ಡಿನ ಅಂಶ ಕಡಿಮೆ ಇರುವ ಹೈನು ಪದಾರ್ಥಗಳನ್ನು ಹೆಚ್ಚಾಗಿ ಸೇವಿಸಬೇಕು. ಆರೋಗ್ಯಕರ ಹೃದಯಕ್ಕಾಗಿ ದಿನಕ್ಕೆ ಕನಿಷ್ಠ ಮೂವತ್ತು ನಿಮಿಷಗಳ ಕಾಲ ಉಸಿರಾಟದ ಗತಿಯನ್ನು ಏರಿಸುವ ಶಾರೀರಿಕ ವ್ಯಾಯಾಮ ಮಾಡಬೇಕು. ವಾರಕ್ಕೆ ಎರಡು ದಿನ ಮಾಂಸಖಂಡಗಳ ಬಲವನ್ನು ಹೆಚ್ಚಿಸುವ ವ್ಯಾಯಾಮ ಇರಬೇಕು. ಪ್ರತಿದಿನವೂ ತಪ್ಪದೆ ವ್ಯಾಯಾಮ ಮಾಡುವುದು ಸೂಕ್ತ. ಧೂಮಪಾನ ಮತ್ತು ಮದ್ಯಪಾನಗಳು ಹೃದಯದ ಶತ್ರುಗಳು. ಉಪ್ಪು ಅಥವಾ ಸಕ್ಕರೆಯ ಅಂಶ ಅಧಿಕವಾಗಿರುವ ತಿನಿಸು ಮತ್ತು ಪಾನೀಯಗಳು, ಅಧಿಕ ಜಿಡ್ಡಿನ ಆಹಾರ ಹೃದಯದ ಅನಾರೋಗ್ಯಕ್ಕೆ ಕಾರಣವಾಗಬಹುದು. ದೈಹಿಕ ಮತ್ತು ಮಾನಸಿಕ ಒತ್ತಡದ ನಿಯಂತ್ರಣ ಹೃದಯದ ಮೇಲೆ ಬಹಳ ಉತ್ತಮ ಪರಿಣಾಮ ಬೀರಬಲ್ಲದು. ನಿದ್ರಾಹೀನತೆಯಿಂದ ಹೃದ್ರೋಗಗಳ ಸಾಧ್ಯತೆ ಅಧಿಕವಾಗುತ್ತದೆ.

ಹೃದಯದ ನಿರ್ವಹಣೆ ನಮ್ಮ ಜೀವನಶೈಲಿಗೆ ಸಂಬಂಧಿಸಿದ್ದು. ಕಾಯಿಲೆ ಬಂದ ನಂತರ ಚಿಕಿತ್ಸೆ ಪಡೆಯುವುದಕ್ಕಿಂತಲೂ ಕಾಯಿಲೆ ಬಾರದಂತೆ ನಿರ್ವಹಿಸುವುದು ಉತ್ತಮ. ತಾಜಾ ಹಣ್ಣು, ತರಕಾರಿ, ಧಾನ್ಯಗಳು, ಪ್ರೋಟೀನ್ ಅಂಶ ಅಧಿಕವಾಗಿರುವ ಆಹಾರ, ಜಿಡ್ಡಿನ ಅಂಶ ಕಡಿಮೆ ಇರುವ ಹೈನು ಪದಾರ್ಥಗಳನ್ನು ಹೆಚ್ಚಾಗಿ ಸೇವಿಸಬೇಕು. ಆರೋಗ್ಯಕರ ಹೃದಯಕ್ಕಾಗಿ ದಿನಕ್ಕೆ ಕನಿಷ್ಠ ಮೂವತ್ತು ನಿಮಿಷಗಳ ಕಾಲ ಉಸಿರಾಟದ ಗತಿಯನ್ನು ಏರಿಸುವ ಶಾರೀರಿಕ ವ್ಯಾಯಾಮ ಮಾಡಬೇಕು. ವಾರಕ್ಕೆ ಎರಡು ದಿನ ಮಾಂಸಖಂಡಗಳ ಬಲವನ್ನು ಹೆಚ್ಚಿಸುವ ವ್ಯಾಯಾಮ ಇರಬೇಕು.