Visit Channel

ಹೃದಯಾಘಾತದ ಬಗ್ಗೆ ಮುನ್ನೆಚ್ಚರಿಕೆ ವಹಿಸಿ

ನಟ ಪುನೀತ್ ರಾಜಕುಮಾರ್ ಅವರ ಸಾವು ಎಲ್ಲರಿಗೂ, ಅದರಲ್ಲೂ ಯುವ ಸಮುದಾಯಕ್ಕೆ ಎಚ್ಚರಿಕೆ ಗಂಟೆಯಾಗಿದೆ.

ಹೃದಯಾಘಾತವು ಸಂಭವಿಸುವ ವ್ಯಕ್ತಿಗೆ 12 ಗಂಟೆ ಅಥವಾ 24 ಗಂಟೆ ಮುಂಚಿತವಾಗಿ ಮುನ್ಸೂಚನೆ ಕೊಡುತ್ತೆ. ಹೃದಯಾಘಾತದ ಲಕ್ಷಣಗಳನ್ನು ನಿರ್ಲಕ್ಷಿಸಬಾರದು, ಗ್ಯಾಸ್ಟ್ರಿಕ್‌ನಿಂದ ಎದೆನೋವು ಎಂದು ಭಾವಿಸಿ ಮುಂದೂಡಬಾರದು,ಎಷ್ಟೋ ಜನಕ್ಕೆ ಇದು ಹೃದಯಾಘಾತದ ಲಕ್ಷಣ,ಮುನ್ಸೂಚನೆ ಎಂದು ಅರಿವಾಗುವುದಿಲ್ಲ ಜೊತೆಗೆ  ಮನೆಯವರಿಗೂ  ಹೇಳುವುದಿಲ್ಲ.

ಹೃದಯಾಘಾತದ ಮುನ್ಸೂಚನೆಗಳು

ವಿಪರೀತ ಬೆವರುವುದು, ಸುಸ್ತಾಗುವುದು, ಯಾವುದಾದರು ರಟ್ಟೆ ವಿಪರೀತ ನೋಯುವುದು, ಎದೆ ಕಿವುಚಿದಂತೆ ಆಗುವುದನ್ನು ನಿರ್ಲಕ್ಷಿಸಬಾರದು.

ಇಂತಹ ಲಕ್ಷಣಗಳು ಹೆಚ್ಚಾಗಿ ನಡಿಗೆ ಮಾಡುವಾಗಲೂ, ಮೆಟ್ಟಿಲು ಹತ್ತುವಾಗಲೂ ಕಾಣಿಸುತ್ತವೆ, ತಕ್ಷಣ ಅಂತವರನ್ನು ಆಸ್ಪತ್ರೆಯನ್ನುಸೇರಬೇಕು.

ಗೊಲ್ಡನ್ ಹವರ್  – ಹೃದಯಾಘಾತವಾದ ಮೊದಲ ಅರ್ಧ ಗಂಟೆಯ ಸಮಯ ವ್ಯರ್ಥ ಮಾಡಬಾರದು.

40 ವರ್ಷದ ನಂತರ ಪ್ರತಿಯೊಬ್ಬರು ಆರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ವಯಸ್ಸಾದವರು, ಈಗಾಗಲೇ ನಿತ್ಯ ಚಿಕಿತ್ಸೆಯಲ್ಲಿ ಇರುವವರು ಹೊರಗೆ ಹೋಗುವಾಗ ಯಾವಾಗಲು ಸಾಕಷ್ಟು ಹಣ, ಜಾರ್ಜ್ ಮಾಡಿದ ಮೊಬೈಲ್(ಯಾವುದಾದರು), ಎಟಿಎಂ ಕಾರ್ಡ್, ಐಡಿ ಕಾರ್ಡ್  ಮತ್ತು ನೀರಿನ ಬಾಟಲಿ (200 ಎಂ.ಎಲ್. ಆದರೂ ಪರವಾಗಿಲ್ಲ) ಜೊತೆಯಲ್ಲಿ  ತೆಗೆದುಕೊಂಡು ಹೋಗವುದು ಉತ್ತಮ ಯಾವುದೇ ಕಾರಣಕ್ಕೂ ಸಾವಿಗೆ ಹೆದರಬಾರದು, ಸಾವು ಹತ್ತಿರ ಸುಳಿಯದಂತೆ ನೋಡಿಕೊಳ್ಳಬೇಕು.

ಯೋಗ ಮಾಡುವುದರಿಂದ, ನಿತ್ಯ ನಡಿಗೆ ಮಾಡುವುದರಿಂದ, ಮಾಂಸಾಹಾರ, ಮೊಟ್ಟೆ ತಿನ್ನದೆ ಶುದ್ಧ ಶಾಖಾಹಾರಿ ಯಾಗಿರುವುದರಿಂದ, ಬೊಜ್ಜು ದಪ್ಪ ಇಲ್ಲದೆ ಇರುವುದರಿಂದ, ತೆಳ್ಳಗೆ ಇರುವುದರಿಂದ, ಚಿಕ್ಕ ವಯಸ್ಸು ಇರುವುದರಿಂದ  ಹೃದಯಾಘಾತ ಆಗುವುದಿಲ್ಲ ಎಂಬುದು ತಪ್ಪು ತಿಳುವಳಿಕೆ. ಅನುವಂಶಿಕ ಕಾರಣಗಳು ಜೊತೆಗೆ ಇತರೆ ಕಾರಣಗಳು ಇರುತ್ತವೆ.

ಪ್ರತಿಯೊಬ್ಬರಿಗೂ ಹೃದಯದಲ್ಲಿ ರಕ್ತದ ಹೆಪ್ಪು(ಕ್ಲಾಟ್) ಸ್ವಲ್ಪವಾದರೂ ಇದ್ದೇ ಇರುತ್ತದೆ, ನಿಧಾನವಾಗಿ ಹೆಚ್ಚಾಗುತ್ತಿರುತ್ತದೆ. ನಡಿಗೆ, ವ್ಯಾಯಾಮ, ಸದಾ ಚಟುವಟಿಕೆ, ಸರಿಯಾದ ಆಹಾರ ಕ್ರಮ, ಸರಳ ಜೀವನ ಇಲ್ಲವಾದಲ್ಲಿ ಬೇಗ ಹೆಪ್ಪುಗಟ್ಟುವುದು (ಕ್ಲಾಕ್) ಹೆಚ್ಚಾಗುತ್ತಿರುತ್ತದೆ, ಆದರೆ  ಮೇಲಿನ ಕಾರ್ಯ ಚಟುವಟಿಕೆಗಳನ್ನು ಪಾಲಿಸಿದರೆ ನಿಯಂತ್ರಣದಲ್ಲಿರುತ್ತದೆ.

ಈ ಹೃದಯದ ಖಾಯಿಲೆ ಇ.ಸಿ.ಜಿ ಮಾಡಿದಾಗ ಗೊತ್ತಾಗುತ್ತದೆ. ಆಶ್ಚರ್ಯವೆಂದರೆ ಎಷ್ಟೋ ಜನಕ್ಕೆ ಇ.ಸಿ.ಜಿ ಮತ್ತು ಎಕೋಗ್ರಾಮ್ ಮಾಡಿದಾಗ ಹೃದಯದ ಖಾಯಿಲೆ ತಿಳಿಯುವುದಿಲ್ಲ. ಆದರೆ ಟಿ.ಎಂ.ಟಿ ಪರೀಕ್ಷೆ ಮಾಡಿದಾಗ ಖಂಡಿತ ಸ್ವಲ್ಲ ಪ್ರಮಾಣವಾದರು ಪತ್ತೆ ಹಚ್ಚುತ್ತಾರೆ, ಆಗ ಅಂಜಿಯೋಗ್ರಾಮ್ ಮಾಡಿಸಬೇಕಾಗುತ್ತದೆ. ಅಂಜಿಯೋಗ್ರಾಮ್ ಪರೀಕ್ಷೆಯಲ್ಲಿ ಅತ್ಯಂತ ನಿಖರವಾಗಿ ಸ್ಪಷ್ಟವಾಗಿ ಕ್ಲಾಟ್ ಪ್ರಮಾಣ ಗೊತ್ತಾಗುತ್ತದೆ. ಕ್ಲಾಟ್‌ಗಳು ಒಂದಕ್ಕಿಂತ ಹೆಚ್ಚು ಕೂಡ  ಮೇಲ್ಪಟ್ಟು ಕೂಡ ಪತ್ತೆಯಾಗಿರುವುದು.  ನಂತರ ಸೂಕ್ತ ಚಿಕೆತ್ಸೆ ಪಡೆದುಕೊಂಡು ಆರಾಮವಾಗಿ ಆರೋಗ್ಯವಾಗಿರಬಹುದು. ಏನು ಹೆದರುವ ಅವಶ್ಯಕತೆ ಇಲ್ಲ. ಸದಾ ಚಟುವಟಿಕೆಯಿಂದ ಇದ್ದರೆ ತಾನು ಹೃದ್ರೋಗಿ ಎಂದು ಅನಿಸುವುದೇ ಇಲ್ಲ, ಎಲ್ಲರಂತೆ ಸುಖ ಜೀವನ ನಡೆಸಬಹುದು.

ಬೇರೆ ಎಲ್ಲ ಖಾಯಿಲೆಗಳಿಗೆ ಚಿಕಿತ್ಸೆ ಹೊಂದಲು ಸಮಯವಿರುತ್ತದೆ.ಆದರೆ, ಹೃದಯ  ಖಾಯಿಲೆ ಹಾಗಲ್ಲ, ಕೆಲವೊಮ್ಮೆ ಒಂದು ನಿಮಿಷ ಕೂಡ ಸಮಯವನ್ನೇ ನೀಡುವುದಿಲ್ಲ, ತಕ್ಷಣ ಸಾವಿಗೆ ನೂಕಿ ಬಿಡುತ್ತದೆ. ಬದುಕಲು ಅದೃಷ್ಟ ಬೇಕು

ವೈದ್ಯರು ಹೇಳುವುದು ಒಂದೇ, ಉತ್ತಮ ಆಹಾರ ಕ್ರಮ ಅನುಸರಿಸಿ,ಸದಾ ಚಟುವಟಿಕೆಯಿಂದ ಇರಿ, ಸರಳ ಜೀವನ ನಡೆಸಿ.

Latest News

bsy
ರಾಜಕೀಯ

ಬಿಜೆಪಿಯ ಸಂಸದೀಯ ಮಂಡಳಿಗೆ ಯಡಿಯೂರಪ್ಪ ; ರಾಜಕೀಯವಾಗಿ ಮತ್ತಷ್ಟು ಬಲಗೊಂಡ ಬಿಎಸ್‌ವೈ

ಇನ್ನು ಸಂಸದೀಯ ಮಂಡಳಿಯಲ್ಲಿ ಉತ್ತರಪ್ರದೇಶ(UttarPradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath) ಅವರಿಗೆ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಅವರಿಗೆ ಸ್ಥಾನ ಲಭಿಸಿಲ್ಲ.

bjp
ರಾಜಕೀಯ

ಡಿಕೆಶಿ ಸ್ವಾತಂತ್ರ್ಯದ ನಡಿಗೆಯ ಉದ್ದೇಶ, ಸಿದ್ದರಾಮಯ್ಯ ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ? : ಬಿಜೆಪಿ

ಸಿದ್ದರಾಮಯ್ಯ(Siddaramaiah) ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ ಅಥವಾ ಕಾಂಗ್ರೆಸ್(Congress) ಹಿರಿಯ ನಾಯಕರು ಡಿಕೆಶಿ(DKS) ಸುತ್ತ ಹೆಣೆದಿರುವ ಜಾಲದಿಂದ ಸ್ವಾತಂತ್ರ್ಯ ಪಡೆಯುವುದೋ?

Ghee
ಆರೋಗ್ಯ

ತುಪ್ಪದ ಬಗ್ಗೆ ತಪ್ಪು ಕಲ್ಪನೆ ಬೇಡ! ; ತಪ್ಪದೇ ತುಪ್ಪ ಸೇವಿಸಿ, ಈ ಆರು ಪ್ರಯೋಜನಗಳನ್ನು ಪಡೆದುಕೊಳ್ಳಿ

ತುಪ್ಪವು ರೋಗನಿರೋಧಕ ಶಕ್ತಿಯನ್ನು ವೃದ್ದಿಸುತ್ತದೆ, ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

Assam
ದೇಶ-ವಿದೇಶ

500 ರೂ. ಬೆಟ್ಟಿಂಗ್ ಸೋಲಿಗೆ ಸ್ನೇಹಿತನ ಶಿರಚ್ಛೇದ ; 25 ಕಿ.ಮೀ ದೂರದ ಪೊಲೀಸ್ ಠಾಣೆಗೆ ಹೋಗಿ ಶರಣು!

ಆತನ ತಲೆಯನ್ನು ಹಿಡಿದುಕೊಂಡು ರಾತ್ರಿಯ ವೇಳೆ 25 ಕಿ.ಮೀ ದೂರವಿರುವ ಪೊಲೀಸ್ ಠಾಣೆಗೆ(Police Station) ನಡೆದು ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.