ಡೊಮಿನಿಕನ್ ರಿಪಬ್ಲಿಕ್​​ನಲ್ಲಿ​​​ ಧಾರಾಕಾರ ಮಳೆ: ಮಕ್ಕಳು ಸೇರಿ 21 ಜನರ ಸಾವು

Dominican Republic (Caribbean): ಭಾರಿ ಮಳೆಯಿಂದ ಡೊಮಿನಿಕನ್ ರಿಪಬ್ಲಿಕ್​​ (Dominican Republic) ನಗರಗಳು ಮುಳುಗುವ ಹಂತಕ್ಕೆ ಬಂದಿದ್ದು, ಈ ದೇಶದಲ್ಲಿ ಜೋರಾಗಿ ಸುರಿಯುತ್ತಿರುವ ಮಳೆಗೆ ಮಕ್ಕಳು ಸೇರಿ 21 ಜನ ಸಾವನ್ನಪ್ಪಿದ್ದಾರೆ. ಕಳೆದ 48 ಗಂಟೆಗಳಲ್ಲಿ ಧಾರಾಕಾರ ಮಳೆಯಾಗಿದ್ದು, ಜನ ಜೀವನ ಅಸ್ಥವ್ಯಸ್ಥವಾಗಿದೆ. ಮಳೆಯಿಂದ ನಗರದ ಮೂಲಸೌಕರ್ಯಗಳು ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೆರಿಬಿಯನ್​​ದಲ್ಲಿ (Caribbean) ಅನೇಕ ಮನೆಗಳು ನೆಲಸಮಗೊಂಡಿದ್ದು, ಈ ಬಗ್ಗೆ ಅಧ್ಯಕ್ಷ ಲೂಯಿಸ್ ಅಬಿನಾಡರ್ (Louis Abinador) ಅವರು ವರದಿಯನ್ನು ತರಿಸಿಕೊಂಡಿದ್ದಾರೆ. ಇಂತಹ ಘಟನೆ ನಮ್ಮ ದೇಶದ ಇತಿಹಾಸದಲ್ಲೇ ಮೊದಲು ಎಂದು ಹೇಳಿದ್ದಾರೆ. ಇನ್ನು ಹವಾಮಾನ ತಂಬಾ ಹದಗೆಟ್ಟಿದ್ದು, ಇದನ್ನು ನಂಬಲು ಸಾಧ್ಯವಿಲ್ಲ, ಮಳೆಯಿಂದ ಅನೇಕ ಮೂಲಸೌಕರ್ಯಗಳು ಹಾನಿಯಾಗಿದೆ ಎಂದು ಹೇಳಿದ್ದಾರೆ.

ಹವಾಮಾನ ಇಲಾಖೆಯು ಮಳೆ ಮುನ್ನಚ್ಚರಿಕೆ ಬಗ್ಗೆ ವರದಿ ನೀಡಿದ್ದು, ಇನ್ನು ಅನೇಕ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಮಳೆಯಿಂದ ಗುಡ್ಡಾಗಾಡು ಪ್ರದೇಶದಲ್ಲಿ ಪ್ರಯಾಣಿಸುತ್ತಿದ್ದ ವಾಹನಗಳ ಮೇಲೆ ಕಲ್ಲು-ಬಂಡೆಗಳು ಬಿದ್ದು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಕೆಲವೊಂದು ಕಡೆ ಮನೆ ಗೋಡೆಗಳು ಕುಸಿದು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಡೊಮಿನಿಕನ್ ರಿಪಬ್ಲಿಕ್ ಸಚಿವಾಲಯ ಆದೇಶ ನೀಡಿದೆ. ಈಗಾಗಲೇ ತುರ್ತು ಕಾರ್ಯಾಚರಣೆ ನಡೆಸಲಾಗಿದ್ದು, ಇದೀಗ ದೇಶಾದ್ಯಂತ ಸುಮಾರು 13,000 ಜನರನ್ನು ಸ್ಥಳಾಂತರಿಸಲಾಗಿದೆ ಮತ್ತು 32 ಪ್ರಾಂತ್ಯಗಳಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಆದೇಶ ನೀಡಿದೆ.

ಇನ್ನು ಹಲವು ಪ್ರದೇಶಗಳಲ್ಲಿ ಮಳೆಯಿಂದ ವಿದ್ಯುತ್​​​ ಮತ್ತು ನೀರಿನ ಸರಬರಾಜು ಸ್ಥಗಿತಗೊಳಿಸಲಾಗಿದ್ದು, ಇದರ ಜೊತೆಗೆ ಶಾಲೆಗಳ ಬಗ್ಗೆ ಹಾಗೂ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತೆ ಅಧ್ಯಕ್ಷ ಲೂಯಿಸ್ ಅಬಿನಾಡರ್ ಹೇಳಿದ್ದಾರೆ.

ಭವ್ಯಶ್ರೀ ಆರ್ ಜೆ

Exit mobile version