Bengaluru: ಸ್ವಲ್ಪ ದಿನಗಳಿಂದ ಕಡಿಮೆಯಾಗಿದ್ದ ವರುಣಾರ್ಭಟ ಮತ್ತೆ ರಾಜ್ಯದಲ್ಲಿ ಅಕ್ಟೋಬರ್ (Heavy Rain In Karnataka) 29 ರಿಂದ ನ.1 ರವರೆಗೆ ಬಂಗಾಳಕೊಲ್ಲಿಯಲ್ಲಿ
(Bay Of Bangal) ಉಂಟಾಗಿರುವ ಹಮೂನ್ ಚಂಡಮಾರುತದ ಪರಿಣಾಮವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಭಾನುವಾರದಿಂದ
ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ (Udupi), ಉತ್ತರ ಕನ್ನಡದಲ್ಲಿ (Heavy Rain In Karnataka) ಹಳದಿ ಅಲರ್ಟ್ ಘೋಷಿಸಲಾಗಿದೆ.
ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿದ್ದ ತೇಜ್ ಚಂಡಮಾರುತಕ್ಕಿಂತಲೂ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಹಮೂನ್ ಚಂಡಮಾರುತದ ಪರಿಣಾಮದಿಂದ ಕರ್ನಾಟಕದಲ್ಲಿ (Karnataka) ಮಳೆಯಾಗುವ
ಸಾಧ್ಯತೆ ಹೆಚ್ಚಾಗಿದ್ದು, ಹಿಂಗಾರು ಮಳೆ ಮತ್ತೆ ತೀವ್ರಗೊಳ್ಳುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 29 ರಿಂದ ನವೆಂಬರ್ (November) 1 ರವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ,
ಉತ್ತರ ಕನ್ನಡ ಸೇರಿದಂತೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ (Chamarajanagar), ಚಿಕ್ಕಮಗಳೂರು, ಹಾಸನ, ಕೋಲಾರ, ಮೈಸೂರು (Mysore), ರಾಮನಗರ,
ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಭಾನುವಾರದಿಂದ ಕರ್ನಾಟಕ ಮಾತ್ರವಲ್ಲದೆ ನೆರೆಯ ರಾಜ್ಯಗಳಲ್ಲೂ ಮಳೆ ತೀವ್ರಗೊಳ್ಳಲಿದ್ದು, ಕೇರಳದಲ್ಲಿ (Kerala) ಭಾನುವಾರ ಮತ್ತು ಸೋಮವಾರ ಮಳೆಯಾಗುವ ಮುನ್ಸೂಚನೆಯಿದೆ ಎಂದು ಭಾರತೀಯ
ಹವಾಮಾನ ಇಲಾಖೆ ತಿಳಿಸಿದೆ. ಇಡುಕ್ಕಿ, ಎರ್ನಾಕುಲಂ (Ernakulam), ತ್ರಿಶೂರ್, ಪಾಲಕ್ಕಾಡ್, ಕೋಝಿಕ್ಕೋಡ್, ವಯನಾಡು ಮತ್ತು ಕಣ್ಣೂರು (Kannur) ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
ಅಕ್ಟೋಬರ್ 30ರವರೆಗೆ ಪಥನಾಂತಿಟ್ಟ, ಇಡುಕ್ಕಿ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್ ಮತ್ತು ವಯನಾಡು (Wayanad) ಜಿಲ್ಲೆಗಳಲ್ಲಿ ಅಲರ್ಟ್ ಮುಂದುವರಿಯಲಿದೆ. ಇಂದು
ಪಥನಾಂತಿಟ್ಟ, ಆಲಪ್ಪುಳ ಮತ್ತು ಎರ್ನಾಕುಲಂ ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಜಿಲ್ಲೆಗಳಲ್ಲಿ
ಗಂಟೆಗೆ 40 ಕಿಮೀ ವೇಗದಲ್ಲಿ ಬಲವಾದ ಗಾಳಿ ಬೀಸುತ್ತದೆ ಎಂದು ಇಲಾಖೆ ತಿಳಿಸಿದೆ.
ವಿಲ್ಲುಪುರಂ, ಕಲ್ಲಕುರಿಚಿ, ಕಡಲೂರು, ಪೆರಂಬಲೂರ್, ಅರಿಯಲೂರ್, ಮೈಲಾಡುತುರೈ, ತಂಜಾವೂರು (Thanjavur), ತಿರುವರೂರು, ನಾಗಪಟ್ಟಣಂ, ಪುದುಕ್ಕೊಟ್ಟೈನಲ್ಲಿ ಹೈ ಅಲರ್ಟ್ (High Alert)
ಘೋಷಿಸಲಾಗಿದ್ದು, ದಕ್ಷಿಣ ತಮಿಳುನಾಡಿನಲ್ಲಿ ಚಂಡಮಾರುತ ಉಂಟಾಗಲಿದೆ ಎಂದು ಪ್ರಾದೇಶಿಕ ಹವಾಮಾನ ಇಲಾಖೆ ತಿಳಿಸಿದೆ. ತಿರುಚಿರಾಪಳ್ಳಿ ಮತ್ತು ದಿಂಡಿಗಲ್ (Dindigal) ಜಿಲ್ಲೆಗಳಲ್ಲಿ
ಅಕ್ಟೋಬರ್ 29 ರಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಕೊಯಮತ್ತೂರು (Coimbatore), ನೀಲಗಿರಿ, ಮೈಲಾಡುತುರೈ, ತಂಜಾವೂರು, ತಿರುವರೂರ್, ನಾಗಪಟ್ಟಣಂ, ಪುದುಕೊಟ್ಟೈ, ತಿರುಚಿರಾಪಳ್ಳಿ, ದಿಂಡಿಗಲ್, ಅರಿಯಲೂರ್, ಪೆರಂಬಲೂರು, ಸೇಲಂ
(Salem), ನಾಮಕ್ಕಲ್, ವಿರುದುನಗರ, ತೂತುಕುಡಿ, ಮಧುರೈ ಮತ್ತು ಥೇಣಿ ಜಿಲ್ಲೆಗಳಲ್ಲಿ ಅಕ್ಟೋಬರ್ 30ರಂದು ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ಅಸ್ಸಾಂ (Assam), ಮೇಘಾಲಯ, ತಮಿಳುನಾಡು, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಸಿಕ್ಕಿಂ, ಕೇರಳ, ಆಂಧ್ರಪ್ರದೇಶ (Andhra Pradesh),
ಅಂಡಮಾನ್-ನಿಕೋಬಾರ್ ದ್ವೀಪಗಳು ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಚದುರಿದ ಮಳೆ ಸುರಿಯುವ ನಿರೀಕ್ಷೆಯಿದೆ.
ಇದನ್ನು ಓದಿ: ಅತಿಹೆಚ್ಚು ಸಂಬಳ ನೀಡುವ 10 ಇಂಜಿನಿಯರಿಂಗ್ ಕ್ಷೇತ್ರಗಳು
- ಭವ್ಯಶ್ರೀ ಆರ್. ಜೆ