ಮುಂಬೈನಲ್ಲಿ ಭಾರಿ ಮಳೆ: ಬಸ್‌ – ರೈಲು ಸೇವೆ ಸ್ಥಗಿತ

ಮುಂಬೈ, ಜೂ. 12: ಮಹಾರಾಷ್ಟ್ರದ‌ಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಹಲವೆಡೆ ಬಸ್‌, ರೈಲು ಸಂಚಾರ ಸ್ಥಗಿತಗೊಳಿಸಲಾಗಿದ್ದು, ಸಾರ್ವಜನಿಕರು ಪರದಾಡುತ್ತಿದ್ದಾರೆ.

ರೈಲು ಹಳಿಗಳು ನೀರಿನಿಂದ ಜಲಾವೃತಗೊಂಡಿರುವ ಕಾರಣಕ್ಕೆ ದಾದರ್ ಮತ್ತು ಕುರ್ಲಾ ನಿಲ್ದಾಣದ ನಡುವಿನ ಉಪನಗರ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಮುಂಬೈ, ಥಾಣೆ, ಪಾಲ್ಘರ್, ರಾಯಗಡ್ ಮತ್ತು ರತ್ನಾಗಿರಿ ಜಿಲ್ಲೆಗಳಲ್ಲಿ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಹಲವು ಪ್ರದೇಶಗಳಲ್ಲಿ ಗುಡುಗು ಸಹಿತ ಬಾರಿ ಮಳೆಯಾಗಲಿದ್ದು, ಈಗಾಗಲೇ ಆರೇಂಜ್ ಆಲರ್ಟ್ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಲವಡೆ ಬಸ್‌ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Exit mobile version